ಏಕತೆಗೆ ಮನಸ್ಸು ಮಾಡಬೇಕು
ಕ.ಪ್ರ.ವಾರ್ತೆ ಹಾಸನ ಏ.30
ದೇಶದ ಐಕ್ಯತೆಗಾಗಿ ಯುವಕರು ಮನಸ್ಸು ಮಾಡುವುದು ಅತ್ಯವಶ್ಯಕ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತ್ಯಾಮಗೊಂಡ್ಲು ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಶ್ಯಾಮಸುಂದರ ಎಸ್. ಕೋಚಿ ತಿಳಿಸಿದರು.
ನಗರದ ಸರ್ಕಾರಿ ಕಲಾ ಕಾಲೇಜಿನ ಸಾಂಸ್ಕತಿಕ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿ ಜೀವನದ ಅತ್ಯ ಮೂಲ್ಯ ಅನುಭವಗಳನ್ನು ಪ್ರತಿ ವಿದ್ಯಾರ್ಥಿಯು ದೇಶೋನ್ನತಿಗಾಗಿ ಮೀಸಲಾಗಿಡಬೇಕು. ಭಾರತದ ಸಾಧನೆಯ ನೆಲೆಗಟ್ಟು ಗುರು ಶಿಷ್ಯ ಸಂಬಂಧದಿಂದ ಕೂಡಿರುವಂತದ್ದು ಎಂದು ಹೇಳಿದರು. ಕಾಲೇಜು ಶಿಕ್ಷಣ ಇಲಾಖೆಯ ಹೆಚ್ಚುವರಿ ನಿರ್ದೇಶಕ ವಿದ್ವಾನ್ ಪ್ರೊ. ಟಿ.ಎನ್. ಪ್ರಭಾಕರ್ ಮಾತನಾಡಿ, ವಿದ್ಯಾರ್ಥಿಗಳು ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಸಂಪೂರ್ಣವಾಗಿ ತೊಡಗಿಕೊಂಡಾಗ ಮಾತ್ರ ಪರಿ ಪೂರ್ಣ ಬೌದ್ಧಿಕವಾಗಿ ಪ್ರಗತಿ ಸಾಧ್ಯ ಎಂದು ಅಭಿಪ್ರಾಯಪಟ್ಟರು.
ಇದೇ ಸಂದರ್ಭದಲ್ಲಿ ವರ್ಷದ ವ್ಯಕ್ತಿಯಾಗಿ ಪುರಸ್ಕತರಾದ ರಾಮಕೃಷ್ಣ ನರ್ಸಿಂಗ್ ಹೋಂನ ಖ್ಯಾತ ವ್ಯೆದ್ಯ ಡಾ. ಗುರುರಾಜ್ ಹೆಬ್ಬಾರ್ ಮತ್ತು ಸುವರ್ಣ ಮಹಿಳಾ ಸಾಧಕಿ ಪುರಸ್ಕಾರಕ್ಕೆ ಪಾತ್ರರಾದ ಶಂಷಾದ್ ಅವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಐ.ಎಂ. ಮೋಹನ್ ಮಾತನಾಡಿ, ಕಾಲೇಜು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕಾಗಿ ಪೂರಕ ವಾತಾವರಣ ವನ್ನು ಸೃಷ್ಟಿಸಿ ಅವರಲ್ಲಿ ಕಲಿಕೆಯ ಜೊತೆಯಲ್ಲಿ ವೈಚಾರಿಕ ಆಸಕ್ತಿ ಬೆಳೆಸುವಂತಹ ಅನೇಕ ಕಾರ್ಯಕ್ರಮಗಳನ್ನು ಹಾಕಿಕೊಂಡಿದೆ ಎಂದರು. ವಿವಿಧ ವಿಭಾಗ ಘಟಕಗಳ ವರದಿಗಳನ್ನು ವಾಚಿಸಲಾಯಿತು.
ಸಾಂಸ್ಕತಿಕ ವೇದಿಕೆಯ ಸಂಚಾಲಕ ಪ್ರೊ.ಡಿ.ಬಿ. ಚನ್ನಬಸಪ್ಪ ಸ್ವಾಗತಿಸಿದರು. ಪ್ರೊ.ಎಸ್. ಸೀಮಾ ವಂದಿಸಿದರು. ಪ್ರೊ.ಟಿ.ಪಿ. ಪುಟ್ಟರಾಜು ಕಾರ್ಯಕ್ರಮ ನಿರೂಪಿದರು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

