ಸ್ವಾತಂತ್ರ್ಯ ದಿನಾಚರಣೆ ಪೂರ್ವಭಾವಿ ಸಭೆ
ಅರಕಲಗೂಡು: ಸ್ವಾತಂತ್ರ್ಯ ದಿನಾಚರಣೆ ಪೂರ್ವಭಾವಿ ಸಭೆಯನ್ನು ಇಲ್ಲಿನ ತಾಲೂಕು ಪಂಚಾಯ್ತಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷರೂ ಆದ ತಹಸೀಲ್ದಾರ್ ಮೋಹನ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.
ಸಭೆಯಲ್ಲಿ ಕಾರ್ಯಕ್ರಮದ ರೂಪು ರೇಷೆಗಳನ್ನು ವಿವರಿಸಿದ ತಹಸೀಲ್ದಾರ್, ಖಚಿತ ನಿರ್ಧಾರಗಳನ್ನು ತೆಗೆದುಕೊಳ್ಳದೇ ಮಾಮೂಲಿ ಕಾರ್ಯಕ್ರಮವೆಂಬಂತೆ ತರಾತುರಿಯಲ್ಲಿ ಸಭೆಯನ್ನು ಮುಗಿಸಿದರು.
ಈ ಸಂದರ್ಭದಲ್ಲಿ ಸಭೆಗೆ ಸಾರ್ವಜನಿಕ ಸಂಘ ಸಂಸ್ಥೆಗಳ ಪ್ರತಿನಿಧಿಗಳನ್ನು ಆಹ್ವಾನಿಸದೇ ಸರ್ಕಾರಿ ಕಾರ್ಯಕ್ರಮ ಮಾಡಲು ಯತ್ನಿಸುತ್ತಿರುವುದು ಸರಿಯಲ್ಲ, ಸಾರ್ವತ್ರಿಕವಾಗಿ ಜನ ಸಾಮಾನ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಪ್ಪಿತವಾದ ಕಾರ್ಯಕ್ರಮ ಮಾಡಬೇಕೆಂದು ಸಭೆಯಲ್ಲಿ ಆಗ್ರಹ ಮಾಡಲಾಯಿತು.
ನಂತರ ಮಾತನಾಡಿದ ತಾಲೂಕು ಪಂಚಾಯ್ತಿ ಅಧ್ಯಕ್ಷ ನರಸೇಗೌಡ, ತಹಸೀಲ್ದಾರರು ನಿಗದಿತ ಸಮಯಕ್ಕೆ ಸಭೆ ನಡೆಸಿಲ್ಲ. ವಿವಿಧ ಇಲಾಖೆಗಳ ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಆಗಮಿಸದೆ ನಿರ್ಲಕ್ಷ್ಯ ತೋರಿದ್ದಾರೆ. ಸಭೆಗೆ ಸಂಘ ಸಂಸ್ಥೆಗಳ ಮುಖಂಡರನ್ನು ಕರೆದಿಲ್ಲ ಇದು ಖಂಡನೀಯ ಎಂದರು.
ಸ್ವಾತಂತ್ರ್ಯ ದಿನಾಚರಣೆಯನ್ನು ಸಾರ್ವಜನಿಕರನ್ನ ವಿಶ್ವಾಸಕ್ಕೆ ತೆಗೆದುಕೊಂಡು ಆಚರಿಸಬೇಕು. ತಹಸೀಲ್ದಾರ್ ಈ ಕುರಿತು ಎಚ್ಚರಿಕೆಯ ಕ್ರಮವಹಿಸಬೇಕು. ಈ ಸಂಬಂಧ ಬೇಜವಾಬ್ದಾರಿ ಬೇಡ ಎಂದರು.
ಸ್ವಾತಂತ್ರ್ಯ ದಿನಾಚರಣೆಯಂದು ಸಾರ್ವಜನಿಕರನ್ನು ಒಳಗೊಳ್ಳುವ ನಿಟ್ಟಿನಲ್ಲಿ ತಾಲೂಕು ಆಡಳಿತದ ವತಿಯಿಂದ ಸ್ವಾತಂತ್ರ್ಯ ಓಟ-20014 ಸ್ಪರ್ಧೆಯನ್ನು ಮುಕ್ತವಾಗಿ ಆಯೋಜಿಸಲು ನಿರ್ಧರಿಸಿತು. ಸ್ವಾತಂತ್ರ್ಯ ಓಟದಲ್ಲಿ ಪಾಲ್ಗೊಳ್ಳಲು ಬಯಸುವ ಆಸಕ್ತರು ತಾಲೂಕು ಕಚೇರಿಯಲ್ಲಿ ಹೆಸರು ನೋಂದಾಯಿಸಿ ಕೊಂಡು ಆ15 ರಂದು ನಡೆಯುವ ಸ್ವಾತಂತ್ರ್ಯ ಓಟ ಸ್ಪರ್ಧೆಗೆ ಹಾಜರಾಗಬಹುದು ಎಂದು ತಹಸೀಲ್ದಾರ್ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಭಾಗ್ಯಮ್ಮ, ತಾಲೂಕು ಪಂಚಾಯ್ತಿ ಕಾರ್ಯ ನಿರ್ವಾಹಕ ಅಧಿಕಾರಿ ಶಿವರಾಂ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

