ಹಾಸನ

ಸ್ವೇಚ್ಛಾಚಾರದಿಂದ ಲೈಂಗಿಕ ದೌರ್ಜನ್ಯ ಹೆಚ್ಚಳ

Published On :

ಅರಸೀಕೆರೆ: ಇತ್ತೀಚಿನ ದಿನಗಳಲ್ಲಿ ಮನುಷ್ಯನಲ್ಲಿ ಸ್ಪೇಚ್ಛಾಚಾರದ ಪ್ರವೃತಿಗಳು ಹೆಚ್ಚುತ್ತಿದೆ. ಇದರಿಂದಾಗಿ ಮಹಿಳೆಯರು ಮತ್ತು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಪ್ರಕರಣಗಳು ಜಾಸ್ತಿಯಾಗುತ್ತಿವೆ ಎಂದು ಪಟ್ಟಣದ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶ ದೇವಾನಂದ ವಿಷಾದಿಸಿದರು.
ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯ್ತಿ ರಾಜ್ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳು ಕಲ್ಯಾಣ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಸಂಚಾರಿ ಜನತಾ ನ್ಯಾಯಾಲಯ ಮತ್ತು ಕಾನೂನು ಸಾಕ್ಷರತಾ ರಥ ಯಾತ್ರೆ ಕಾರ್ಯಕ್ರಮದ ಅಂಗವಾಗಿ ತಾಲೂಕಿನ ಕುರುವಂಕ ಗ್ರಾಮದ ಸರ್ಕಾರಿ ಶಾಲಾ ಮೈದಾನ ಆವರಣದಲ್ಲಿ ಗುರುವಾರ ಬೆಳಿಗ್ಗೆ ಏರ್ಪಡಿಸಿದ್ದ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಜು.31 ಮತ್ತು ಆ,1 ಹಾಗೂ 2 ರಂದು 3 ದಿನಗಳ ಕಾಲ ತಾಲೂಕಿನ 9 ಗ್ರಾಮಗಳಲ್ಲಿ ನಡೆಯುವ ಕಾನೂನು ಅರಿವು ಕಾರ್ಯಕ್ರಮದಲ್ಲಿ ನಾನಾ ವಿಷಯಗಳ ಕುರಿತು ವಕೀಲರು ಉಪನ್ಯಾಸ ನೀಡಲಿದ್ದಾರೆ. ಇಂತಹ ಮಹತ್ವ ಪೂರ್ಣ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಸದುಪಯೋಗ ಮಾಡಿಕೊಳ್ಳಬೇಕೆಂದು ಮನವಿ ಮಾಡಿದರು.  
ತಹಸೀಲ್ದಾರ್ ನಟರಾಜ್ ಮಾತನಾಡಿ, ಅನೇಕರು ಗ್ರಾಮೀಣಾ ಜನರ ಮುಗ್ದತೆಯನ್ನೇ ಬಂಡವಾಳ ಮಾಡಿಕೊಂಡು ಅನೇಕ ರೀತಿ ವಂಚನೆ ಮಾಡುತ್ತಿದ್ದಾರೆ. ಕಾನೂನು ಅರಿವಿನಿಂದ ಇದು ಯಾವುದೇ ಸಂಕಷ್ಟಗಳಿಗೆ ಒಳಗಾಗದಂತೆ ತಮ್ಮ ಬದುಕನ್ನು ರೂಪಿಸಿಕೊಳ್ಳಲು ಸಾಧ್ಯ ಎಂದು ಹೇಳಿದರು.  
ಡಿವೈಎಸ್ಪಿ ವಿ.ಜೆ. ಸಜೀತ್ ಮಾತನಾಡಿ, ಸಂವಿಧಾನಬದ್ಧ ಕಾನೂನುಗಳ ಬಗ್ಗೆ ಜನರಲ್ಲಿ ತಿಳುವಳಿಕೆ ಇಲ್ಲದ ಕಾರಣ ಸಮಸ್ಯೆಗಳು ಉಂಟಾಗುತ್ತಿವೆ. ಪ್ರತಿಯೊಬ್ಬ ಮನಷ್ಯನು ತನ್ನ ಹಕ್ಕನ್ನು ಚಲಾಯಿಸುವಂತೆ ಕರ್ತವ್ಯವನ್ನು ಪಾಲಿಸುವ ಪರಿಜ್ಞಾನ ಬೆಳೆಸಿಕೊಳ್ಳಬೇಕೆಂದರು.
ತಾಪಂ ಅಧ್ಯಕ್ಷ ಲಕ್ಷ್ಮಣ್, ಗ್ರಾಮಾಂತರ ಪೊಲೀಸ್ ಆರಕ್ಷಕ ನಿರೀಕ್ಷಕ ಗಂಗಾಧರಪ್ಪ, ಸರ್ಕಾರಿ ಸಹಾಯಕ ವಕೀಲೆ ಮಮತ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಸತ್ಯನಾರಾಯಣ್ ಮತ್ತು ವಕೀಲರ ಸಂಘದ ಅಧ್ಯಕ್ಷ ಎಚ್.ಆರ್. ಪ್ರಸನ್ನ ಮತ್ತು ಮಾಜಿ ಅಧ್ಯಕ್ಷ ಕೆ.ಎ. ರವಿಶಂಕರ್ ಮಾತನಾಡಿದರು. ಮಧ್ಯಸ್ಥಿಗೆದಾರ ಎಂ.ಆರ್. ಸರ್ವೇಶ್ ಮಹಿಳೆ ಮತ್ತು ಮಕ್ಕಳ ಸಂರಕ್ಷಣೆ ಕಾನೂನು ಬಗ್ಗೆ ಮತ್ತು ಕಲ್ಯಾಣ್ ಕುಮಾರ್ ಹಿರಿಯ ನಾಗರೀಕರ ಸಂರಕ್ಷಣೆ ಮತ್ತು ಹಕ್ಕುಗಳ ಸರ್ಕಾರದ ಸೌಲಭ್ಯಗಳನ್ನು ಕುರಿತು ಉಪನ್ಯಾಸ  ನಡೆಸಿಕೊಟ್ಟರು.
ಅಧ್ಯಕ್ಷತೆಯನ್ನು ತಾಪಂ ಇಓ. ಟಿ.ಎನ್. ಮೂರ್ತಿ ವಹಿಸಿದ್ದರು. ನಗರಠಾಣೆ ಪೊಲೀಸ್ ಆರಕ್ಷಕ ನಿರೀಕ್ಷಕ ನಂದಕುಮಾರ್, ಸರ್ಕಾರಿ ಸಹಾಯಕ ವಕೀಲೆ ಯಶೋದ, ವಕೀಲರ ಸಂಘದ ಕಾರ್ಯದರ್ಶಿ ಎ.ಎಸ್. ಮಹೇಶ್ವರಪ್ಪ ಮತ್ತು ವಕೀಲರು ಮಹಿಳಾ ಸ್ವಹಾಯ ಸಂಘದ ನೂರಾರು ಮಹಿಳೆಯರು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.