ಹಾಸನ

ಎಂಇಎಸ್ ನಿಷೇಧಕ್ಕೆ ಆಗ್ರಹ

Published On :

ಹಾಸನ: ರಾಜ್ಯದಲ್ಲಿ ಪದೇ ಪದೇ ತೊಂದರೆ ನೀಡುತ್ತಿರುವ ಎಂಇಎಸ್ ಸಂಘಟನೆಯನ್ನು ನಿಷೇಧಿಸುವಂತೆ ಆಗ್ರಹಿಸಿ ನಾನಾ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದರು.
ಕರ್ನಾಟಕ ವೀರಕನ್ನಡಿಗರ ಸೇನೆ ಪ್ರತಿಭಟನೆ: ರಾಜ್ಯದಲ್ಲಿರುವ ನಾಡದ್ರೋಹಿ ಎಂಇಎಸ್ ಸಂಘಟನೆಯನ್ನು ನಿಷೇಧಿಸಲು ಆಗ್ರಹಿಸಿ ಕರ್ನಾಟಕ ವೀರಕನ್ನಡಿಗರ ಸೇನೆ ಕಾರ್ಯಕರ್ತರು ಶವಯಾತ್ರೆ ನಡೆಸಿ ಪ್ರತಿಭಟಿಸಿದರು.
ಪ್ರತಿಭಟನಕಾರರು ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಎಂಇಎಸ್ ಸಂಘಟನೆಯ ಶವಯಾತ್ರೆ ಪ್ರಾರಂಭಿಸಿ ಎನ್.ಆರ್. ವೃತ್ತ, ಬಿ.ಎಂ. ರಸ್ತೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಬಂದು ಕೆಲ ಸಮಯ ಧರಣಿ ನಡೆಸಿದರು. ಎನ್.ಆರ್. ವೃತ್ತದಲ್ಲಿ ಪ್ರತಿಕೃತಿ ದಹಿಸಲು ಮುಂದಾದಗ ಪೊಲೀಸರು ತಡೆ ಹಾಕಿದರು. ನಂತರ  ಶವಯಾತ್ರೆ ಮೆರವಣಿಗೆ ಮಾತ್ರ ನಡೆಸಿ ಜಿಲ್ಲಾಧಿಕಾರಿಗೆ ಮನವಿ ನೀಡಿದರು.
ಇಂತಹ ಹೇಯ ಕೃತ್ಯವನ್ನು ಮಾಡುತ್ತಿರುವ ನಾಡದ್ರೋಹಿ ಸಂಘಟನೆ ಎಂಇಎಸ್‌ನ್ನು ನಿಷೇಧಿಸುವಂತೆ ಒತ್ತಾಯಿಸಿದ ಅವರು, ಎಂಇಎಸ್ ಕೃತ್ಯದಲ್ಲಿ ಪಾಲ್ಗೊಂಡಿರುವ ಇವರನ್ನು ಗುಂಡಾ ಕಾಯ್ದೆಯಡಿ ಬಂಧಿಸಿ ನಾಡಿನಲ್ಲಿ ಶಾಂತಿ ಕಾಪಾಡಲು ಕಾನೂನು ಕ್ರಮ ಜರುಗಿಸಬೇಕೆಂದು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಸೇನೆಯ ಜಿಲ್ಲಾಧ್ಯಕ್ಷ ಎಚ್.ಎನ್. ನಟೇಶ್, ರಾಜ್ಯ ಉಪಾಧ್ಯಕ್ಷ ತಾಜಿಂ ಪಾಷ, ಸಹ ಕಾರ್ಯದರ್ಶಿ ಆನಂದ್, ಸಂಘಟನಾ ಕಾರ್ಯದರ್ಶಿ ರಾಜು, ಕಾರ್ಮಿಕ ಘಟಕ ಅಧ್ಯಕ್ಷ ಆರೀಫ್, ಡಿ. ಶಂಕರಗೌಡ, ದಿನೇಶ್ ಕುಮಾರ್ ಇದ್ದರು.
ಬಿಡುಗಡೆಗೆ ಆಗ್ರಹ: ಹೋರಾಟಕ್ಕೆ ಬೆಳಗಾವಿಗೆ ತೆರಳುವಾಗ ಕರವೇ ರಾಜ್ಯಾಧ್ಯಕ್ಷ ಹಾಗೂ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದು, ಅವರನ್ನು ಕೂಡಲೇ ಬಿಡುಗಡೆ ಮಾಡುವಂತೆ ಆಗ್ರಹಿಸಿ ಜಿಲ್ಲಾ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಬೆಳಗಾವಿಗೆ ತೆರಳುವ ಮಾರ್ಗದಲ್ಲಿಯೇ ಕರವೇ ಕಾರ್ಯಕರ್ತರನ್ನು ಬಂಧಿಸಿರುವುದನ್ನು ಖಂಡಿಸಿಪ್ರತಿಭಟನೆಯಲ್ಲಿ ಕರವೇ ಜಿಲ್ಲಾ ಉಪಾಧ್ಯಕ್ಷ ಹರೀಶ್‌ಗೌಡ, ಜಿಲ್ಲಾ ಸಂಚಾಲಕ ವಸಂತಕುಮಾರ್, ತಾಲೂಕು ಅಧ್ಯಕ್ಷ ಎಚ್.ವೈ. ಜಗನ್ನಾಥ್, ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.