ಹಾಸನ

ಎಂಜಿನಿಯರಿಂಗ್ ವಿದ್ಯಾರ್ಥಿ ನೇಣಿಗೆ ಶರಣು: ದೂರು

Published On :

ಹಾಸನ: ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರ ನಗರದಲ್ಲಿ ನಡೆದಿದೆ.ನಗರದ ಜಯನಗರ ಬಡಾವಣೆಯ ನವೀನ್(21) ಮೃತಪಟ್ಟಿರುವ ವಿದ್ಯಾರ್ಥಿ.
  ನಗರದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ 7ನೇ ಸೆಮಿಸ್ಟರ್‌ನಲ್ಲಿ ಓದುತ್ತಿದ್ದ ನವೀನ್‌ಗೆ ಕಾಲೇಜಿನ ಪ್ರಾಂಶುಪಾಲರು ಮತ್ತು ಕೆಲ ಉಪನ್ಯಾಸಕರು ಅನಗತ್ಯವಾಗಿ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ.
    ಅಲ್ಲದೇ ಸೆಮಿಸ್ಟರ್ ಮತ್ತು ಇಂಟರ್‌ನಲ್ ಪರೀಕ್ಷೆಗಳಲ್ಲಿ ಸರಿಯಾಗಿ ಅಂಕ ಕೊಡುತ್ತಿರಲಿಲ್ಲ ಎನ್ನಲಾಗಿದೆ. ಈ ಸಂಬಂಧ ನವೀನ್ ತಮ್ಮ ಸಂಬಂಧಿಕರು ಮತ್ತು ಸ್ನೇಹಿತರ ಜೊತೆಯಲ್ಲಿ ಅಳಲು ತೋಡಿಕೊಂಡಿದ್ದ ಎಂದು ಪೋಷಕರು ತಿಳಿಸಿದ್ದಾರೆ.
    ಈ ಎಲ್ಲಾ ಬೆಳವಣಿಗೆಗಳಿಂದ ಮನನೊಂದ ನವೀನ್ ಮನೆಯಲ್ಲಿ ಯಾರೂ ಇಲ್ಲದ ವೇಳೆ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
   ಈ ಹಿನ್ನೆಲೆಯಲ್ಲಿ ತಮ್ಮ ಮಗನ ಸಾವಿಗೆ ಕಾಲೇಜಿನ ಉಪನ್ಯಾಸಕರ ವಿರುದ್ಧ ಮೃತ ವಿದ್ಯಾರ್ಥಿಪೋಷಕರು ಬಡಾವಣೆ ಠಾಣೆಗೆ ದೂರು ನೀಡಿದ್ದಾರೆ.

ಉಪನ್ಯಾಸ
ಮೈಸೂರು: ನೀಲಗಂಗಾ ಮಹಿಳಾ ಬಳಗವು ಆ.4ರ ಸಂಜೆ 4.30ಕ್ಕೆ ಕುವೆಂಪುನಗರದಲ್ಲಿರುವ ಜೆಎಸ್‌ಎಸ್ ಕಾನೂನು ಕಾಲೇಜಿನಲ್ಲಿ ಶ್ರಾವಣಮಾಸದ ಅಂಗವಾಗಿ ಉಪನ್ಯಾಸ ಏರ್ಪಡಿಸಿದ್ದು, ಟಿ.ಕೆ.ಹೇಮಲತಾ ಅವರು ಶ್ರಾವಣಮಾಸ ಎಂಬ ವಿಷಯ ಕುರಿತು ಮಾತನಾಡುವರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.