ಎಂಇಎಸ್ ಪುಂಡಾಟಿಕೆ, ಅತ್ಯಾಚಾರ ಖಂಡಿಸಿ ಕರವೇ ಪ್ರತಿಭಟನೆ
ಅರಸೀಕೆರೆ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಒಂದೆಡೆ ಮಹಿಳೆಯರು ಮಕ್ಕಳ ಮೇಲೆ ಅತ್ಯಾಚಾರ ಪ್ರಕರಣಗಳು ನಡೆಯುತ್ತಿದ್ದರೆ ರಾಜ್ಯದ ಗಡಿ ಭಾಗದಲ್ಲಿ ಎಂಇಎಸ್ ಪುಂಡಾಟಿಕೆಗೆ ಕಡಿವಾಣ ಹಾಕುವಲ್ಲಿ ವಿಫಲಲವಾಗಿದೆ. ರಾಜ್ಯದಲ್ಲಿ ಚುನಾಯಿತ ಸರ್ಕಾರ ಅಧಿಕಾರದಲ್ಲಿದಿಯೋ ಇಲ್ಲವೋ ಎಂಬಂತಾಗಿದೆ ಎಂದು ಶನಿವಾರ ತಾಲೂಕು ಕರವೇ ಅಧ್ಯಕ್ಷ ಹೇಮಂತ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.
ಉಲ್ಲಂಘನೆ: ಬೆಳಗಾವಿಯಲ್ಲಿ ಎಂಇಎಸ್ ಅವರ ಪುಂಡಾಟಿಕೆ ರಾಜ್ಯದಲ್ಲಿ ಮಹಿಳೆಯರು ಮತ್ತು ಅಪ್ರಾಪ್ತ ಬಾಲಕಿಯರ ಮೇಲೆ ನಡೆಯುತ್ತಿರುವ ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಖಂಡಿಸಿ, ತಾಲೂಕಿನ ಗಂಡಸಿ ಹ್ಯಾಂಡ್ಪೋಸ್ಟ್ ಬಳಿ ಕರವೇ ಕಾರ್ಯಕರ್ತರು ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಎಂಇಎಸ್ ಪುಂಡಾಟಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತ್ತಿದ್ದರೂ, ಅಂತಹ ಪುಂಡರ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳುವಲ್ಲಿ ವಿಫಲವಾಗಿದೆ ಎಂದು ಟೀಕಿಸಿದರು.
ಕಠಿಣ ಶಿಕ್ಷೆ ವಿಧಿಸಿ: ಇದಕ್ಕೂ ಮುನ್ನ ಪ್ರತಿಭಟನಕಾರರು ಎಂಇಎಸ್ನ ಪುಂಡರು ಹಾಗೂ ಶಾಸಕ ಸಾಂಬಾಜಿ ಪಾಟೀಲ್ ವಿರುದ್ಧ ಘೋಷಣೆಯನ್ನು ಕೂಗಿದರು.
ಪ್ರತಿಭಟನೆಯಲ್ಲಿ ತಾಲೂಕು ಕರವೇ ಉಪಾಧ್ಯಕ್ಷ ಗಂಗಾಧರ ನಾಯಕ್, ನಗರಾಧ್ಯಕ್ಷ ಕಿರಣ್ ಕುಮಾರ್, ಮುಖಂಡರಾದ ಮೋಹನ್ ಕುಮಾರ್, ಯತೀಶ್, ರಘು, ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

