ಹಾಸನ

ಅಸಮರ್ಪಕ ಪೂರೈಕೆ ಖಂಡಿಸಿ ವಿದ್ಯುತ್ ಕಚೇರಿಗೆ ಮುತ್ತಿಗೆ

Published On :

ಹಾಸನ: ಅಸಮರ್ಪಕ ವಿದ್ಯುತ್ ಸರಬರಾಜು ಹಾಗೂ ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಯನ್ನು ಖಂಡಿಸಿ ಬಿಜೆಪಿ ರೈತ ಮೋರ್ಚಾ ಕಾರ್ಯಕರ್ತರು ಸೋಮವಾರ ವಿದ್ಯುತ್ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರು ನಗರದ ನಾನಾ ಬೀದಿಗಳಲ್ಲಿ ಮೆರವಣಿಗೆ ನಡೆಸಿ ವಿದ್ಯುತ್ ಕಚೇರಿಗೆ ಮುತ್ತಿಗೆ ಹಾಕಿದರು.
ಅಸಮರ್ಪಕ ವಿದ್ಯುತ್ ಪೂರೈಕೆ: ಸರ್ಕಾರ ಅಸಮರ್ಪಕ ವಿದ್ಯುತ್ ಸರಬರಾಜು, ಅನಿಯಮಿತ ಲೋಡ್ ಶೆಡ್ಡಿಂಗ್ ಮಾಡುತ್ತಿರುವುದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕುಡಿಯುವ ನೀರು ಹಾಗೂ ವ್ಯವಸಹಾಯಕ್ಕೆ ನೀರಿಲ್ಲದಂತಾಗಿದೆ. ಇದರಿಂದ ಅನ್ನದಾತ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
 ಬಿಜೆಪಿ ರಾಜ್ಯ ರೈತ ಮೋರ್ಚಾ ವತಿಯಿಂದ ರಾಜ್ಯಾದ್ಯಂತ ಬರ ಅಧ್ಯಯನವನ್ನು ಮಾಡಬೇಕು ಎಂದು ತೀರ್ಮಾನಿಸಿ ಹಾಸನದ ಎಲ್ಲಾ ತಾಲೂಕಿನಾದ್ಯಂತ ಪ್ರವಾಸ ಮಾಡಿ ಖುದ್ದಾಗಿ ಅಧ್ಯಯನ ಮಾಡಲಾಗಿದೆ. ಪ್ರವಾಸ ಮಾಡಿದ ನಂತರ ನಮಗೆ ತಿಳಿದು ಬಂದ ವಿಚಾರ ತೆಂಗಿನ ಮರಗಳು ಒಣಗಿರುವುದು, ಆಲೂಗಡ್ಡೆ ಕೊಳೆತಿರುವುದು ಹಾಗೂ ಅಂಗಮಾರಿ ರೋಗ ಮತ್ತು ಅತಿವೃಷ್ಟಿಯಿಂದ ಶುಂಠಿಗೆ ಕೊಳೆ ಬಂದು ರೈತರ ಸಂಕಾಲಾಗಿದ್ದಾರೆ ಎಂದು ಆರೋಪಿಸಿದರು.
ಟ್ರಾನ್‌ಫಾರ್ಮರ್ ಬದಲಾಯಿಸಿ: ಜೊತೆಗೆ ವಿದ್ಯುತ್ ಕೊರತೆಯಿಂದ ಹಾಗೂ ಸರಿಯಾದ ಸಮಯಕ್ಕೆ ವಿದ್ಯುತ್ ಸರಬರಾಜಾಗದೆ ರೈತರ ತೀವ್ರ ಸಂಕಟಕ್ಕೆ ಸಿಲುಕಿದ್ದಾರೆ. ಆದ್ದರಿಂದ ಅನಿಯಮಿತ ಲೋಡ್ ಶೆಡ್ಡಿಂಗ್ ನಿಲ್ಲಿಸಬೇಕು ಸುಟ್ಟು ಹೋದ ಟ್ರಾನ್‌ಫಾರ್ಮರ್‌ಗಳನ್ನು ತಕ್ಷಣ ಬದಲಾಯಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
 ಪ್ರತಿಭಟನೆಯಲ್ಲಿ ಪ್ರಧಾನ ಕಾರ್ಯದರ್ಶಿ ಪ್ರಸನ್ನಕುಮಾರ್, ರೈತ ಮೋರ್ಚಾ ಗ್ರಾಮಾಂತರ ಅಧ್ಯಕ್ಷ ಕುಮಾರ್, ನಗರ ಅಧ್ಯಕ್ಷ ಶ್ರೀನಿವಾಸ್, ನಗರಸಭೆ ಸದಸ್ಯರಾದ ಎಚ್.ಎಂ.ಸುರೇಶ್ ಕುಮಾರ್ ಮತ್ತು ಪ್ರಸನ್ನಕುಮಾರ್, ರವಿಕುಮಾರ್, ಮಾಜಿ ಅಧ್ಯಕ್ಷ ಎಂ.ಎಸ್.ಕೃಷ್ಣೇಗೌಡ ಹಾಗೂ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.