ಹಾಸನ

ವಿದ್ಯಾರ್ಥಿಗಳು ಸಮಾಜ ಸೇವೆಗೆ ಮುಂದಾಗಬೇಕು: ಜಿ.ಎಂ.ರಾವ್

Published On :

ಶ್ರವಣಬೆಳಗೊಳ: ನಿಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ನಿಮ್ಮ ಕೈಯಲ್ಲಿದೆ ಎಂದು ಜಿ. ಎಂ.ರಾವ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.  ಶ್ರವಣಬೆಳಗೊಳದ ಬಾಹುಬಲಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ಅಭಿವಿನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ತಾವೇ ರೂಪಿಸಿಕೊಳ್ಳಬೇಕು. ಶಿಕ್ಷಕರು ನಿಮ್ಮನ್ನು ತಿದ್ದಬಹುದು. ತಂದೆ ತಾಯಂದಿರು ನೀವು ಕೇಳಿದ್ದನ್ನು ನೀಡಬಹುದು. ಆದರೆ ಅದಕ್ಕೆ ಪ್ರತಿಫಲ ನೀಡುವರು ನೀವುಗಳೇ ಆಗಿದ್ದೀರಿ ಎಂದು ಹೇಳಿದರು.
ಹೆಚ್ಚು ಅಂಕ ಪಡೆಯಿರಿ: ಭಾರತದಲ್ಲಿ ಒಟ್ಟಾರೆ 15 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಎಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದು, 3800 ಕಾಲೇಜುಗಳಿವೆ. ಅದರಂತೆ ನಮ್ಮ ಕರ್ನಾಟಕದಲ್ಲಿ ಒಟ್ಟು 8,800 ವಿದ್ಯಾರ್ಥಿಗಳಿದ್ದಾರೆ. ಇಷ್ಟು ಜನ ಈ ತರಬೇತಿ ಪಡೆಯುವುದು ಮುಖ್ಯವಲ್ಲ. ಬದಲಿಗೆ ಶೇ.80 ಕ್ಕಿಂತ ಹೆಚ್ಚು ಅಂಕ ಪಡೆದರೆ ನಿಮ್ಮ ಭವಿಷ್ಯ ಉಜ್ವಲಗೊಳ್ಳುತ್ತದೆ ಎಂದರು.
ಸಮಾಜ ಸೇವೆ ಮಾಡಿ: ಈ ತರಬೇತಿ ಪಡೆಯುವುದಲ್ಲದೆ ಸಮಾಜ ಸೇವೆ, ಕ್ರೀಡೆ, ಸಾಂಸ್ಕೃತಿಕ, ಸಾಮಾಜಿಕ ಕೆಲಸ ಕಾರ್ಯದಲ್ಲಿ ತೊಡಗುವಂತಾಗಬೇಕು ಎಂದು ಅವರು ಕಿವಿಮಾತು ಹೇಳಿದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.