ರಸ್ತೆ ಕಾಮಗಾರಿಗೆ ಆಗ್ರಹಿಸಿ 11ರಿಂದ ಧರಣಿ
ಹಾಸನ: ಹಾಸನ- ದುದ್ಧ ರಸ್ತೆ ಕಾಮಗಾರಿ ಪ್ರಾರಂಭಿಸುವಂತೆ ಆಗ್ರಹಿಸಿ ನಾನಾ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಆ.11ರಿಂದ ಅನಿರ್ದಿಷ್ಠಾವಧಿ ಧರಣಿ ನಡೆಸುವುದಾಗಿ ಜಿಲ್ಲಾ ರೈತ ಸಂಘದ ಜಿಲ್ಲಾಧ್ಯಕ್ಷ ಬಿ.ಕೆ.ನಿಂಗೇಗೌಡ ತಿಳಿಸಿದ್ದಾರೆ.
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾಸನ-ದುದ್ದ-ತಿಪಟೂರು ರಸ್ತೆಯನ್ನು ಅಭಿಜಿತ್ ಕಂಪನಿಗೆ ಗುತ್ತಿಗೆ ನೀಡಿದ್ದು, ಕಂಪನಿಯು ಕಾಮಗಾರಿ ಸ್ಥಗಿತಗೊಳಿಸಿರುವುದರಿಂದ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದೆ. ಮಳೆಗಾಲವಾಗಿರುವುದರಿಂದ ರಸ್ತೆಯಲ್ಲಿ ನೀರು ನಿಂತುಕೊಂಡು ಸಾರ್ವಜನಿಕ ಓಡಾಟಕ್ಕೆ ತೊಂದರೆ ಉಂಟಾಗುತ್ತಿದೆ ಎಂದು ಆರೋಪಿಸಿದರು.
ರಸ್ತೆ ಕಾಮಗಾರಿ ಮಾಡುವಂತೆ ಆಗ್ರಹಿಸಿ ಹಲವು ಬಾರಿ ಪ್ರತಿಭಟನೆಗಳನ್ನು ನಡೆಸಿದ್ದರು ಸಹ ಈವರೆಗೂ ಸರ್ಕಾರ ಗಮನ ಹರಿಸಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರನ್ನು ಕೇಳಿದಾಗಲೆಲ್ಲ ಕಾಮಗಾರಿ ಪ್ರಾರಂಭಿಸುವುದಾಗಿ ಕೇವಲ ಭರವಸೆಯನ್ನು ಮಾತ್ರ ನೀಡುತ್ತಿದ್ದಾರೆ. ಆದರೆ ಕಾಮಗಾರಿ ಮಾತ್ರ ಇನ್ನು ಪ್ರಾರಂಭಿಸಿಲ್ಲ ಎಂದು ದೂರಿದರು.
ಈ ಬಾರಿ ನಡೆಸಲಿರುವ ಪ್ರತಿಭಟನೆಯಲ್ಲಿ ಹಾಸನ-ದುದ್ದ ರಸ್ತೆಯ ಹೋರಾಟ ಕ್ರಿಯಾ ಸಮಿತಿ, ರೈತ ಸಂಘ, ಹಾಸನ-ದುದ್ಧ ರಸ್ತೆಯ ಅಕ್ಕ-ಪಕ್ಕದ ಗ್ರಾಮಸ್ಥರು, ವಕೀಲರ ಸಂಘ, ಕರ್ನಾಟಕ ರಕ್ಷಣಾ ವೇದಿಕೆ, ಜಿಲ್ಲಾ ಡಾ.ರಾಜ್ ಕುಮಾರ್ ಅಭಿಮಾನಿಗಳ ಸಂಘ, ಕರ್ನಾಟಕ ಕಾವಲು ಪಡೆ, ಹಾಸನ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಒಕ್ಕಲಿಕರ ಹಿತರಕ್ಷಣಾ ಸೇನೆ, ಕರ್ನಾಟಕ ವೀರ ಕನ್ನಡಿಗರ ಸೇನೆ, ಶ್ರೀರಾಮ ಸೇನೆ ಸೇರಿದಂತೆ ಹಲವಾರು ಸಂಘಟನೆಗಳು ಭಾಗವಹಿಸಲಿವೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

