ಹಾಸನ

ಜಾವಗಲ್‌ನಲ್ಲಿ ಅದ್ಧೂರಿಗಣರಾಜ್ಯೋತ್ಸವ ಸಂಭ್ರಮ

Published On :

ಜಾವಗಲ್: ಜಾವಗಲ್ ಹೋಬಳಿಯಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಲ್ಲಿ 65ನೇ ಗಣರಾಜ್ಯೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಜಾವಗಲ್ ನಾಡಕಚೇರಿಯಲ್ಲಿ ಉಪ ತಹಸೀಲ್ದಾರ್ ಅಶೋಕ್ ಧ್ವಜಾರೋಹಣ ನೆರವೇರಿಸಿದರು. ಗ್ರಾಪಂ ಕಚೇರಿಯಲ್ಲಿ ಗ್ರಾಪಂ ಅಧ್ಯಕ್ಷೆ ಕವಿತಾ ಮಂಜುನಾಥ್ ಧ್ವಜಾರೋಹಣ ನೆರವೇರಿಸಿದರು. ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಶ್ರೀನಿವಾಸ್ ಧ್ವಜಾರೋಹಣ ನೆರವೇರಿಸಿದರು. ಜಾವಗಲ್‌ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಂಶುಪಾಲ ಡಾ.ಕೆ. ಭಾಷಾ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.  ತಾಪಂ ಸದಸ್ಯೆ ಲಕ್ಷ್ಮೀ ರವಿಶಂಕರ್ ಮಾತನಾಡಿದರು.  ಗ್ರಾಪಂ ಅಧ್ಯಕ್ಷೆ ಕವಿತಾ ಮಂಜುನಾಥ್, ಸದಸ್ಯ ರಮೇಶ್, ಉಪಪ್ರಾಂಶುಪಾಲ ಯೋಗೀಶ್, ಉಪನ್ಯಾಸಕ  ಶ್ರೀನಿವಾಸ್ ಉದಯ್ ಕುಮಾರ್, ಮುಖ್ಯಶಿಕ್ಷಕ ಶಿವಣ್ಣ, ದಾನೇಗೌಡಚಂದ್ರೇಗೌಡ, ಮರಳುಸಿದ್ದಪ್ಪ, ಪುಟ್ಟಶಂಕರಪ್ಪ ವಿದ್ಯಾರ್ಥಿಗಳಾದ ಕಾಂಚನಾ, ಲಾಂಛನಾ, ಸ್ಕಂದನ್ ಸಿಂಹ, ಉಲ್ಲಾಸ್, ಸ್ವಾತಿ ಹಾಗೂ ಇತರರು ಮಾತನಾಡಿದರು.  



Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.