ಇಂದು ಆಶಾ ಕಾರ್ಯಕರ್ತೆಯರ ಜಿಲ್ಲಾಮಟ್ಟದ ಸಮಾವೇಶ
ಹಾಸನ: ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಹಾಸನ ಘಟಕ ಹಾಗೂ ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಸೆಂಟರ್, ಆಲ್ ಇಂಡಿಯಾ ಯುಟಿಯುಸಿ ಜಂಟಿಯಾಗಿ ಫೆ. 2ರಂದು ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ನ ಸಭಾಂಗಣದಲ್ಲಿ ಜಿಲ್ಲಾ ಆಶಾ ಕಾರ್ಯಕರ್ತೆಯರ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಬೆಳಗ್ಗೆ 11ಕ್ಕೆ ಆರಂಭವಾಗಲಿರುವ ಸಮಾವೇಶದಲ್ಲಿ ಆಶಾ ಕಾರ್ಯಕರ್ತೆಯರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲಾಗುತ್ತದೆ. ಸಮಾವೇಶವನ್ನು ಉದ್ದೇಶಿಸಿ ಆಲ್ ಇಂಡಿಯ ಟ್ರೇಡ್ ಯೂನಿಯನ್ ಸೆಂಟರ್, ಆಲ್ ಇಂಡಿಯಾ ಯುಟಿಯುಸಿಯ ರಾಜ್ಯ ಉಪಾಧ್ಯಕ್ಷ ಎಂ.ಎನ್. ಶ್ರೀರಾಮ್ ಹಾಗೂ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಕಾರ್ಯದರ್ಶಿ ನಾಗಲಕ್ಷ್ಮಿ ಮಾತನಾಡಲಿದ್ದಾರೆ. ಸಭೆಯ ಅಧ್ಯಕ್ಷತೆಯನ್ನು ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ಜಾನಕಿ ವಹಿಸಲಿದ್ದಾರೆ. ಹಾಸನ ಜಿಲ್ಲೆ ಎಲ್ಲಾ ತಾಲೂಕುಗಳ ಆಶಾ ಕಾರ್ಯಕರ್ತೆಯರು ಭಾಗವಹಿಸಬೇಕೆಂದು ಬೇಬಿ ಮಹಾಲಕ್ಷ್ಮಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

