ದೇವಾಲಯದ ಹುಂಡಿಗೆ ಒಂದೂವರೆ ತಿಂಗಳಲ್ಲಿ ರು. 50 ಲಕ್ಷ!
ಅರಕಲಗೂಡು: ತಾಲೂಕಿನ ಅತಿ ಹೆಚ್ಚು ಜನರನ್ನು ಆಕರ್ಷಿಸುತ್ತಿರುವ ದೇವಾಲಯಗಳಲ್ಲೊಂದಾದ ಅರಸೀಕಟ್ಟೆ ಅಮ್ಮನ ದೇವಾಲಯದ ಹುಂಡಿಗೆ ಕಳೆದ ಒಂದೂ ವರೆ ತಿಂಗಳಲ್ಲಿ ಒಂದೂವರೆ ಲಕ್ಷ ರೂಗಳ ಕಾಣಿಕೆ ಬಂದಿದೆ. ದೇವಾಲಯದ ಹುಂಡಿ ತೆರೆದ ಮುಜರಾಯಿ ಇಲಾಖೆ ಅಧಿಕಾರಿಗಳು ಸದರಿ ಹಣವನ್ನು ದೇವಾಲಯದ ಹೆಸರಿನಲ್ಲಿರುವ ಶಾಸಕರ ನೇತೃತ್ವದ ಸಮಿತಿಗೆ ಕಂದಾಯ ಇಲಾಖೆ ಜಮಾಯಿಸಿದೆ. ಈ ದೇವಾಲಯವು ಖಾಸಗಿ ದೇವಾಲಯವಾದರೂ ತಾಲೂಕು ಆಡಳಿತದ ವ್ಯಾಪ್ತಿಗೆ ಒಳಪಟ್ಟಿದೆ. ದೇವಾಲಯವನ್ನು ಮುಜರಾಯಿ ಇಲಾಖೆಗೆ ಸೇರಿಸಬೇಕೆಂದು ತಾಲೂಕು ಆಢಳಿತ 2006ರಿಂದಲೇ ಹಲವು ಬಾರಿ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆಯಾದರೂ ಈವರೆಗೆ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಚಿಕ್ಕಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಈ ದೇವಾಲಯಕ್ಕೆ ರಾಜ್ಯಾದ್ಯಂತ ಭಕ್ತರು ಇದ್ದು ಪ್ರತಿದಿನ ಸಾವಿರಾರು ಭಕ್ತರು ಶ್ರೀ ಕ್ಷೇತ್ರಕ್ಕೆ ಬರುತ್ತಿದ್ದು. ದಿನದಿಂದ ದಿನಕ್ಕೆ ಇಲ್ಲಿಗೆ ಬರುವ ಭಕ್ತರ ಸಂಖ್ಯೆ ಹೆಚ್ಚುತ್ತಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

