ನೀರಿನ ನಲ್ಲಿಗೆ ಮೋಟರ್: ನಗರಸಭೆ ಆಯುಕ್ತರ ಎಚ್ಚರಿಕೆ
ಹಾಸನ: ನಗರಸಭಾ ವ್ಯಾಪ್ತಿಗೆ ಒಳಪಡುವ ಎಲ್ಲಾ ವಾರ್ಡ್ಗಳಲ್ಲಿ ಕೆಲವು ನಾಗರಿಕರು ಕುಡಿಯುವ ನೀರಿನ ನಲ್ಲಿಗಳಿಗೆ ನೇರವಾಗಿ ಮೋಟರ್ ಅಳವಡಿಸಿಕೊಂಡಿರುವವರ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ನಗರಸಭೆ ಆಯುಕ್ತ ಕೃಷ್ಣಮೂರ್ತಿ ತಿಳಿಸಿದ್ದಾರೆ. ನೀರಿನ ನಲ್ಲಿಗಳಿಗೆ ನೇರವಾಗಿ ಮೋಟರ್ ಅಳವಡಿಸಲಾಗುತ್ತಿದ್ದು, ಇದರಿಂದ ನೀರು ಸರಬರಾಜು ಕಷ್ಟ ಸಾಧ್ಯ ಎನ್ನುವಂಥ ಸ್ಥಿತಿ ತಲುಪಿದೆ. ಈ ಹಿನ್ನೆಲೆಯಲ್ಲಿ, ಕುಡಿಯುವ ನೀರಿಗೆ ತೀವ್ರ ತೊಂದರೆಯಾಗುತ್ತಿದೆ. ಈ ಬಗ್ಗೆ ನಗರಸಭೆಯ ಗಮನಕ್ಕೆ ಬಂದಿದ್ದು, ಕುಡಿಯುವ ನೀರಿನ ನಲ್ಲಿಗಳಿಗೆ ನೇರವಾಗಿ ಅಳವಡಿಸಿಕೊಂಡಿರುವ ಮೋಟರ್ಗಳನ್ನು ತಕ್ಷಣದಲ್ಲಿಯೇ ತೆರವುಗೊಳಿಸುವಂತೆ ಆದೇಶಿಸಿದೆ. ತಪ್ಪಿದಲ್ಲಿ ಮೋಟರ್ ಅಳವಡಿಸಿಕೊಂಡಿರುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಲಾಗುವುದು ಎಂದು ಕೃಷ್ಣಮೂರ್ತಿ ಎಚ್ಚರಿಕೆ ನೀಡಿದ್ದಾರೆ. ರಸ್ತೆಗಳನ್ನು ಅಗೆದು ಹಾಳು ಮಾಡುತ್ತಿರುವವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಎಚ್ಚರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

