ಮಕ್ಕಳ ರಕ್ಷಣೆ-ಪೋಷಣೆ ಸಮೀಕ್ಷೆ
ಹಾಸನ: ಕೇಂದ್ರ ಸರ್ಕಾರವು ಮಕ್ಕಳ ರಕ್ಷಣೆ ಮತ್ತು ಪೋಷಣೆಗಾಗಿ ಸಮಗ್ರ ಮಕ್ಕಳ ಸಂರಕ್ಷಣಾ ಯೋಜನೆಯನ್ನು ರೂಪಿಸಿದೆ. ಇದರ ಮಾರ್ಗಸೂಚಿಯಂತೆ ಜಿಲ್ಲಾಮಟ್ಟದ ಮಕ್ಕಳ ರಕ್ಷಣಾ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಲು ಜಿಲ್ಲಾ ಮಕ್ಕಳ ಸಂರಕ್ಷಣಾ ಘಟಕ ಮತ್ತು ಸರ್ಕಾರಿ ಕಲಾ ಕಾಲೇಜಿನ ಸಮಾಜಶಾಸ್ತ್ರ ಸ್ನಾತಕೋತ್ತರ ಅಧ್ಯಯನ ವಿಭಾಗದೊಂದಿಗೆ ಒಪ್ಪಂದದ ಒಡಂಬಡಿಕೆಯನ್ನು ಮಾಡಿಕೊಳ್ಳಲಾಗಿದೆ. ವಾಸ್ತವ ಹಾಗೂ ನೈಜ ವರದಿ ಸರ್ಕಾರಕ್ಕೆ ಲಭ್ಯವಾಗುವುದರಿಂದ ಜಿಲ್ಲಾ ಮಕ್ಕಳ ಸಂರಕ್ಷಣೆ ಹಾಗೂ ಪೋಷಣೆ ಉತ್ತಮಗೊಂಡು ಜಿಲ್ಲಾ ಅಭಿವೃದ್ಧಿಗೆ ಅನುಕೂಲವಾಗುತ್ತದೆ ಎಂದು ಸಮಾಜಶಾಸ್ತ್ರ ಸ್ನಾತಕೋತ್ತರ ಅಧ್ಯಯನ ವಿಭಾಗದ ಪ್ರೊ.ಡಿ.ಜಿ. ಕೃಷ್ಣೇಗೌಡ ತಿಳಿಸಿದ್ದಾರೆ.
ಮಲೆನಾಡು ಕ್ರೀಡಾಕೂಟ: ದೇವೇಗೌಡ ಕಾಲೇಜು ತಂಡ ಹ್ಯಾಟ್ರಿಕ್
ಹೊಳೆನರಸೀಪುರ: ಹಾಸನದಲ್ಲಿ ಎವಿಕೆ ಮಹಿಳಾ ಕಾಲೇಜಿನ ಆಶ್ರಯದಲ್ಲಿ ಇತ್ತೀಚೆಗೆ ನಡೆದ ಮೈಸೂರು ವಿಶ್ವವಿದ್ಯಾನಿಲಯ ಮಲೆನಾಡು ವಲಯ ಅಂತರ ಕಾಲೇಜುಗಳ ಮಹಿಳಾ ಕ್ರೀಡಾಕೂಟದಲ್ಲಿ ತಾಲೂಕಿನ ಪಡುವಲಹಿಪ್ಪೆಯ ಶ್ರೀ ಎಚ್.ಡಿ. ದೇವೇಗೌಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮಹಿಳಾ ಬಾಲ್ ಬ್ಯಾಡ್ಮಿಂಟನ್ ತಂಡವು ಭಾಗವಹಿಸಿ ಪ್ರಥಮ ಸ್ಥಾನ ಪಡೆಯುವುದರೊಂದಿಗೆ ಸತತವಾಗಿ ಮೂರು ವರ್ಷ ಪ್ರಥಮ ಸ್ಥಾನ ಪಡೆದು ಹ್ಯಾಟ್ರಿಕ್ ಗೆಲುವು ಸಾಧಿಸಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಕಾಲೇಜು ಅಭಿವೃದ್ಧಿ ಸಮಿತಿ, ಕಾಲೇಜಿನ ಆಡಳಿತ ವರ್ಗ, ಅಧ್ಯಾಪಕ ವೃಂದ, ವಿದ್ಯಾರ್ಥಿಗಳು ಮತ್ತು ಕಾಲೇಜಿನ ಪ್ರಾಂಶುಪಾಲ ಡಾ.ಜಿ.ಡಿ. ನಾರಾಯಣ ಹಾಗೂ ದೈಹಿಕ ಶಿಕ್ಷಣ ನಿದೇಶಕ ಜಿ.ಪಿ. ಯೋಗೇಶ್ ಅಭಿನಂದನೆ ಸಲ್ಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

