ಕಂದಾಚಾರ ಬಿಡಿ: ಗುಣನಾಥ ಶ್ರೀ
ಹಾಸನ: ವಿದ್ಯಾರ್ಥಿಗಳು ಮೂಢನಂಬಿಕೆ, ಕಂದಾಚಾರಗಳನ್ನು ವಿರೋಧಿಸಬೇಕು ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ಶೃಂಗೇರಿ ಆದಿಚುಂಚನಗಿರಿ ಶಾಖಾ ಮಠದ ಪೀಠಾಧ್ಯಕ್ಷ ಗುಣನಾಥ ಸ್ವಾಮೀಜಿ ಕಿವಿಮಾತು ಹೇಳಿದರು.
ನಗರದ ಆದಿಚುಂಚನಗಿರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇತ್ತೀಚೆಗೆ ನಡೆದ ಬಾಲಗಂಗಾಧರನಾಥ ಸ್ವಾಮೀಜಿ ಪುಣ್ಯಸ್ಮರಣೆ ಮತ್ತು ವಿದ್ಯಾರ್ಥಿ ನಿಲಯ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಆಶೀರ್ವಚನ ನೀಡಿ, ರಾಷ್ಟ್ರಕವಿ ಕುವೆಂಪು ಅವರ ಸಂದೇಶದಂತೆ ಪ್ರತಿಯೊಬ್ಬರೂ ವಿಶ್ವಮಾನವರಾಗಬೇಕು. ವೈಚಾರಿಕ ಪ್ರಜ್ಞೆ ಬೆಳೆಸಿಕೊಳ್ಳಬೇಕೆಂದು ತಿಳಿಸಿದರು. ಭೈರವೈಕ್ಯ ಬಾಲಗಂಗಾಧರನಾಥ ಸ್ವಾಮೀಜಿಯವರು ವಿಶ್ವಮಾನವ ಸಂದೇಶಪಾಲಿಸಿದರು. ಜಾತಿ ಭೇದ ಮಾಡದೆ ಎಲ್ಲಾ ವರ್ಗಗಳ ಬಡ ಮಕ್ಕಳಿಗೆ ಉಚಿತ ಊಟ, ವಸತಿ ಮತ್ತು ಶಿಕ್ಷಣ ನೀಡಿದರು. ಪರಿಸರ ಸಂರಕ್ಷಣೆ ಕಾರ್ಯ ಮಾಡಿದರು. ಅವರ ಆದರ್ಶವನ್ನು ಪ್ರತಿಯೊಬ್ಬರೂ ಪಾಲನೆ ಮಾಡಬೇಕು ಎಂದರು.
ಆದಿಚುಂಚನಗಿರಿ ಹಾಸನ ಶಾಖಾ ಮಠದ ಪೀಠಾಧ್ಯಕ್ಷ ಶಂಭುನಾಥ ಸ್ವಾಮೀಜಿ ಆಶೀರ್ವಚನ ನೀಡಿ, ಸಮಯಕ್ಕೆ ಬೆಲೆ ಕೊಡುವುದನ್ನು ವಿದ್ಯಾರ್ಥಿಗಳು ಕಲಿಯಬೇಕು. ಆಗ ಮಾತ್ರ ಗುರಿ ಸಾಧಿಸಲು ಸಾಧ್ಯ ಎಂದು ಕಿವಿಮಾತು ಹೇಳಿದರು. ಹಾಸನದಲ್ಲಿ ಮಠದ ವತಿಯಿಂದ ಒಂದು ಸಾವಿರ ವಿದ್ಯಾರ್ಥಿಗಳಿಗೆ ಊಟ ಮತ್ತು ವಸತಿ ಕಲ್ಪಿಸುವ ಸುಸಜ್ಜಿತ ವಿದ್ಯಾರ್ಥಿ ನಿಲಯ ನಿರ್ಮಾಣ ಮಾಡಲು ಸಂಕಲ್ಪ ಮಾಡಲಾಗಿದೆ. ಶೀಘ್ರ ಆ ಕಾರ್ಯ ನೆರವೇರಲಿದೆ ಎಂದರು.
ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಜಿ.ಎಲ್. ಮುದ್ದೇಗೌಡ, ಹೆಚ್.ಬಿ. ಮದನಗೌಡ, ಎವಿಕೆ ಕಾಲೇಜು ಪ್ರಾಧ್ಯಾಪಕ ಡಾ. ಕುಶಾಲಪ್ಪ, ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಯ ಚನ್ನರಾಯಪಟ್ಟಣ ವಿಭಾಗದ ಶಿಕ್ಷಣಾಧಿಕಾರಿ ಜಯರಾಮೇಗೌಡ, ಮಠದ ವ್ಯವಸ್ಥಾಪಕ ಹೆಚ್.ಕೆ. ಚಂದ್ರಶೇಖರ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

