ಹಳ್ಳಿಗಳ ಉದ್ಧಾರಕ್ಕೆ ಶ್ರಮಿಸಲು ಕರೆ
ಹಾಸನ: ರಾಷ್ಟ್ರೀಯ ಸೇವಾ ಯೋಜನಾ ಶಿಬಿರಾರ್ಥಿಗಳು ಗ್ರಾಮೀಣ ಬದುಕನ್ನು ಅಳವಡಿಸಿಕೊಂಡು, ಹಳ್ಳಿಗಳ ಉದ್ಧಾರಕ್ಕೆ ಶ್ರಮಿಸಬೇಕೆಂದು ಶಾಸಕ ಎಚ್.ಎಸ್.ಪ್ರಕಾಶ್ ಕರೆ ನೀಡಿದರು.
ತಾಲೂಕಿನ ಕಂಚಮಾರನಹಳ್ಳಿ ಗ್ರಾಮದಲ್ಲಿ ನಗರದ ಸರ್ಕಾರಿ ಕಲಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಆಯೋಜಿಸಿರುವ ವಾರ್ಷಿಕ ವಿಶೇಷ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮನವಿ: ಅಂತಾರಾಷ್ಟ್ರಿಯ ಪ್ರಶಸ್ತಿ ವಿಜೇತ ಕಲಾವಿದ ಗ್ಯಾರಂಟಿ ರಾಮಣ್ಣ ಮಾತನಾಡಿ, ಪ್ರಸ್ತುತ ಸನ್ನಿವೇಶದಲ್ಲಿ ಸಾಮಾಜಿಕವಾಗಿ, ಸಾಂಸ್ಕತಿಕವಾಗಿ, ರಾಜಕೀಯವಾಗಿ ಹಳ್ಳಿಗಳು ಛಿದ್ರಛಿದ್ರವಾಗಿರುವ ಈ ಸಂದರ್ಭದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರವನ್ನು ನಮ್ಮ ಊರಿನಲ್ಲಿ ಏರ್ಪಡಿಸಿರುವುದು ನಮ್ಮೆಲ್ಲರ ಪುಣ್ಯ ವೆಂದು ತಿಳಿಸಿ, ಇದನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಮನವಿ ಮಾಡಿದರು.
ಪ್ರಾಧ್ಯಾಪಕ ವೈ.ಪಿ. ಮಲ್ಲೇಗೌಡ, ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಾಧಿಕಾರಿ ರಮೇಶ್, ಸಹ ಶಿಬಿರಾಧಿಕಾರಿ ಪದ್ಮಾವತಿ, ತೇಜೂರು ಗ್ರಾಮ ಪಂಚಾಯ್ತಿ ಅಧ್ಯಕ್ಷೆ ರಂಗಮ್ಮ, ಕಂಚಮಾರನಹಳ್ಳಿ ಗ್ರಾಮ ಪಂಚಾಯ್ತಿ ಸದಸ್ಯ ಗೋಪಾಲಕೃಷ್ಣ, ಗ್ರಾಮದ ಮುಖಂಡರು ಇದ್ದರು. ಸಹ ಶಿಬಿರಾಧಿಕಾರಿ ಸಿ.ಆರ್. ನಿಂಗರಾಜು ಸ್ವಾಗತಿಸಿದರು. ವಾಣಿಜ್ಯ ವಿಭಾಗದ ಬಿ.ಆರ್. ರಮೇಶ್ ವಂದಿಸಿದರು. ಶಿಬಿರಾರ್ಥಿ ಶೀಲಾ ಪ್ರಾರ್ಥಿಸಿದರು. ಮುರುಳೀಧರ್ ನಿರೂಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

