ಹಾಸನ

ಏರ್ಮನ್ ಹುದ್ದೆಗೆ ಅರ್ಜಿ ಆಹ್ವಾನ

Published On :

ಹಾಸನ: ಭಾರತೀಯ ವಾಯುಪಡೆಯಲ್ಲಿ ಗ್ರೂಪ್ ಎಕ್ಸ್(ತಾಂತ್ರಿಕ) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ವಿದ್ಯಾರ್ಹತೆ: ಪಿ.ಯು.ಸಿ (ಗಣಿತ, ಭೌತಶಾಸ್ತ್ರ, ಇಂಗ್ಲೀಷ್) ಅಥವಾ ಮೂರು ವರ್ಷಗಳ ಡಿಪ್ಲೋಮೋ (ಮೆಕಾನಿಕಲ್, ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್, ಅಟೋಮೊಬೈಲ್, ಕಂಪ್ಯೂಟರ್ ಸೈನ್ಸ್, ಐಟಿ)ದಲ್ಲಿ ಶೇಕಡ್ 50ರಷ್ಟು ಅಂಕಗಳನ್ನು ಪಡೆದು ತೇರ್ಗಡೆ ಹೊಂದಿರಬೇಕು.
ವಯೋವುತಿ: 01.02.1994 ರಿಂದ 30.11.1997ರ ಅವಧಿಯಲ್ಲಿ ಜನಿಸಿರಬೇಕು. ಉತ್ತಮ ದೇಹದಾರ್ಢ್ಯತೆ ಹೊಂದಿರಬೇಕು. ಅರ್ಜಿ ಸಲ್ಲಿಸಲು ಫೆ. 17 ಕಡೇ ದಿನ.
ಭರ್ತಿ ಮಾಡಿದ ಅರ್ಜಿಯನ್ನು ಪ್ರೆಸಿಡೆಂಟ್, ಸೆಂಟ್ರಲ್ ಏರಮನ್ ಸೆಲೆಕ್ಷನ್ ಬೋರ್ಡ್, ಪೋಸ್ಟ್ ಬಾಕ್ಸ್ ನಂಬರ್ 11807, ನವ ದೆಹಲಿ-110010ಗೆ ನೇರವಾಗಿ ಸಲ್ಲಿಸಬೇಕು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಢಿಢಿಢಿ.್ಝಟಿಜ್ಝಛಟಿಛ್ಝ್ಠಜ್ಟ್ಠ್ಛಿಜ.ಟ್ಝ್ಛಿ.್ಝಟಿ ನಲ್ಲಿ ಅಥವಾ ದೂರವಾಣೆ ಸಂಖ್ಯೆ 080-25592199 ನ್ನು ಸಂಪರ್ಕಿಸಲು ಕೋರಿದೆ. ಸ್ಥಳೀಯ ಮಾಹಿತಿಗಾಗಿ ವಿಜಯಲಕ್ಷ್ಮಿ ಜೆ ಬಿ, ಉದ್ಯೋಗಾಧಿಕಾರಿ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಹಾಸನ ಇವರನ್ನು ಖುದ್ದಾಗಿ ಅಥವಾ ದೂ. ಸಂ. 08172 - 268374 ಅನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಲು ಕೋರಲಾಗಿದೆ.
ಹಾಲು ಸಹಕಾರ ಸಂಘಕ್ಕೆ ಆಯ್ಕೆ
ನುಗ್ಗೇಹಳ್ಳಿ: ಚನ್ನರಾಯಪಟ್ಟಣ ತಾಲೂಕು ನುಗ್ಗೇಹಳ್ಳಿ ಹೋಬಳಿ ಅತ್ತಿಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ನಡೆದ ಚುನಾವಣೆಯಲ್ಲಿ 10 ಮಂದಿ  ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕೆ.ಮಹಲಿಂಗ, ಕೆ.ಕೃಷ್ಣಮೂರ್ತಿ, ಚಂದ್ರೇಗೌಡ, ಕೆ.ಲೋಕೇಶ್, ಬಿ.ತಿಮ್ಮೇಗೌಡ, ಎನ್. ರಮೇಶ, ಟಿ. ಮಂಜಪ್ಪ, ಎ.ಎಲ್. ದಿನೇಶ್, ಅನಸೂಯ, ಜಿ. ವಸಂತ ಆಯ್ಕೆಯಾಗಿದ್ದಾರೆ.
'ಮಕ್ಕಳಲ್ಲಿ ಆದರ್ಶ ತುಂಬಬೇಕು'
ಹಾಸನ: ತಾಯಂದಿರು ಮಕ್ಕಳಲ್ಲಿ ಸ್ಫೂರ್ತಿ ತುಂಬಿ ಅವರಿಗೆ ಆದರ್ಶ ವ್ಯಕ್ತಿಗಳ ಜೀವನದ ಬದುಕನ್ನು ಮನಮುಟ್ಟುವಂತೆ ತಿಳಿ ಹೇಳಿ ಎಂದು ಸ್ವಾತಂತ್ರ್ಯ ಹೋರಾಟಗಾರ ಎಚ್.ಎಂ. ಶಿವಣ್ಣ ಸಲಹೆ ನೀಡಿದರು.
ನಗರದ ಭಾರತ್ ಸ್ಕೌಟ್ಸ್ ಮತ್ತು ಜಿಲ್ಲಾ ಸಮುದಾಯಭವನದಲ್ಲಿ ನೆಹರು ಯುವ ಕೇಂದ್ರ ಹಾಸನಾಂಬ ಮಹಿಳಾ ಕಲಾ ಸಮಾಜ ಎಂಟಿಎಸ್ಎಸ್ ಯೂತ್ ಗ್ರೂಪ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಇವರ ಸಂಯುಕ್ತಾಶ್ರಯದಲ್ಲಿ ಇತ್ತೀಚೆಗೆ ನಡೆದ ಮಹಾತ್ಮ ಗಾಂಧೀಜಿಯವರ 66ನೇ ಹುತಾತ್ಮ ದಿನಾಚರಣೆ- ರಕ್ತದಾನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮೌನ ಆಚರಿಸಲಾಯಿತು. ರಾಷ್ಟ್ರೀಯ ಸೇವಾ ಕಾರ್ಯಕರ್ತ ಆರ್.ಜಿ. ಗಿರೀಶ್ ಪ್ರಾರ್ಥಿಸಿದರು. ಕವಿತಾ ಸ್ವಾಗತಿಸಿದರು. ಅನಿತಾ ನಿರೂಪಿಸಿದರು. ಕಚೇರಿ ಸಹಾಯಕಿ ಚಂದ್ರಕಲಾ ವಂದಿಸಿದರು.
ಉದ್ಯೋಗ ಖಾತ್ರಿಗೆ ಕಾರ್ಮಿಕರ ಕೊರತೆ
ಹೊಳೆನರಸೀಪುರ: ಕೇಂದ್ರ ಸರ್ಕಾರದ ಮಹತ್ವದ ಮಹಾತ್ಮಗಾಂಧಿ ರಾಷ್ಟ್ರೀಯ ಯೋಜನೆಗೆ ಕಾಮಿಕರ ಕೊರತೆ ಉಂಟಾಗಿದ್ದು, ಕೂಡಲೇ ಕೂಲಿಯನ್ನು ಕನಿಷ್ಠ ರು. 250ಗೆ ಏರಿಸಿ, ಈ ಯೋಜನೆಯು ಗ್ರಾಮೀಣ ಪ್ರದೇಶಗಳಲ್ಲಿನ ಜನತೆಗೆ ತಲುಪುವಂತಾಗಬೇಕೆಂದು ಜಿಲ್ಲಾ ಪಂಚಾಯ್ತಿ ಸದಸ್ಯ ಎಚ್.ಎನ್. ದೇವೇಗೌಡ (ಪಾಪಣ್ಣಿ) ಅಭಿಪ್ರಾಯಪಟ್ಟರು. ಪಟ್ಟಣದ ಪುರಸಭೆ ಸಭಾಂಗಣದಲ್ಲಿ ತಾಲೂಕು ಪಂಚಾಯ್ತಿಯು ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಇತ್ತೀಚೆಗೆ ಆಯೋಜಿಸಿದ್ದ ವೈಯಕ್ತಿಕ ಫಲಾನುಭವಿಗಳಿಗೆ ಕಾಮಗಾರಿ ಆದೇಶ ನೀಡುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ತಾಲೂಕು ಪಂಚಾಯ್ತಿ ಉಪಾಧ್ಯಕ್ಷ ಡಿ. ಕೃಷ್ಣಪ್ಪ ಅಧ್ಯಕ್ಷತೆ ವಹಿಸಿದ್ದರು.  ತಾಲೂಕು ಪಂಚಾಯ್ತಿ  ಅಧಿಕಾರಿ ತಮ್ಮಣ್ಣಗೌಡ, ಜಿಲ್ಲಾ ಪಂಚಾಯ್ತಿ ಸದಸ್ಯೆ ಗೌರಮ್ಮಮಲ್ಲೇಶ್, ತಾಪಂ  ಮಾಜಿ ಉಪಾಧ್ಯಕ್ಷ ನಂಜುಂಡಪ್ಪ, ಪದ್ಮನಾಭ್, ರೇಷ್ಮೆ ಇಲಾಖೆಯ ಸಹಾಯಕ ನಿರ್ದೇಶಕ ಕೈಲಾಸ್ ಮೂರ್ತಿ ಇದ್ದರು. ಕಾರ್ಯಕ್ರಮದಲ್ಲಿ ತಾಲೂಕಿನ 26 ಗ್ರಾಮ ಪಂಚಾಯ್ತಿಗಳ ಕಾರ್ಯದರ್ಶಿಗಳು, ಅಭಿವೃದ್ಧಿ ಅಧಿಕಾರಿಗಳು ಹಾಗೂ ಫಲಾನುಭವಿಗಳು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.