ಹಾಸನ

ಕ್ರಾಫರ್ಡ್ ಆಸ್ಪತ್ರೆಯಲ್ಲಿ ಮಹತ್ವದ ಬದಲಾವಣೆ

Published On :

ಸಕಲೇಶಪುರ: ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಕ್ರಾಫರ್ಡ್ ಆಸ್ಪತ್ರೆ ಆಡಳಿತದಲ್ಲಿ ಮಹತ್ವದ ಬದಲಾವಣೆ ಮಾಡಲಾಗುವುದು ಎಂದು ಶಾಸಕ ಎಚ್.ಕೆ ಕುಮಾರಸ್ವಾಮಿ ಹೇಳಿದ್ದಾರೆ.
ಸೋಮವಾರ ಪಟ್ಟಣದ ಕ್ರಾಫರ್ಡ್ ಆಸ್ಪತ್ರೆ ಆರೋಗ್ಯರಕ್ಷಾ ಸಭೆಯಲ್ಲಿ ಮಾತನಾಡಿ, 200 ಹಾಸಿಗೆಗಳ ತಾಲೂಕು ಆಸ್ಪತ್ರೆಯಲ್ಲಿ ಅಗತ್ಯ ವೈದ್ಯರ ಕೊರತೆಯಿಂದಾಗಿ ರೋಗಿಗಳ ಸಂಖ್ಯೆ ಕ್ಷೀಣಿಸಿರುವುದಲ್ಲದೆ. ಇಲ್ಲಿಗೆ ಬರುವ ರೋಗಿಗಳನ್ನು ಹಾಸನಕ್ಕೆ ಕಳುಹಿಸುವ ವ್ಯವಸ್ಥೆ ಮಾಡಲಾಗುತ್ತಿದೆ. ಇದನ್ನು ಹೋಗಲಾಡಿಸುವ ದೃಷ್ಟಿಯಿಂದ ಆಸ್ಪತ್ರೆಗೆ ಅಗತ್ಯವಿರುವ ವೈದ್ಯರನ್ನು ನೇಮಿಸಲಾಗಿದೆ. ಅಲ್ಲದೆ ಆಸ್ಪತ್ರೆಯಲ್ಲಿ ಕಂಡು ಬಂದಿರುವ ವಿದ್ಯುತ್, ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲಾಗುವುದು. ಶವಗಾರ ನವೀಕರಣ, ಭದ್ರತಗಾರರ ನೇಮಕ, ಸ್ಪೆಷಲ್ ವಾರ್ಡ್ ತೆರೆಯುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಗಿದೆ ಹಾಗೂ ಆಸ್ಪತ್ರೆಯ ಸ್ವಚ್ಛತೆಗೆ ಸಮಸ್ಯೆಯಾಗಿ ಪರಿಣಮಿಸಿರುವ ಪರಿವಾಳಗಳನ್ನು ಇಲ್ಲಿಂದ ಸ್ಥಳಾಂತರಿಸಲು ಕ್ರಮಕೈಗೊಳ್ಳಲಾಗುವುದು ಎಂದರು.  
ಇದಲ್ಲದೇ, ಹೊರರೋಗಿಗಳಿಂದ ಇನ್ನು ಮುಂದೆ ರು. 10 ಸಂಗ್ರಹಿಸಲು ಸಭೆ ಅನುಮೋದನೆ ನೀಡಿದೆ ಎಂದರು.
ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ಸತೀಶ್, ವೈದ್ಯಾಧಿಕಾರಿ ಮಲ್ಲಿಕಾರ್ಜುನ್ ಸ್ವಾಮಿ, ರಕ್ಷಾ ಸಮಿತಿ ಸದಸ್ಯರಾದ ಚನ್ನವೇಣಿ ಎಂ ಶೆಟ್ಟಿ, ಮುಂಜುನಾಥ್ ಮುಂತಾದವರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.