'ರಾಜ್ಯದಲ್ಲೇ ಅತ್ಯುತ್ತಮ ವಸತಿ ನಿಲಯ'
ಕ.ಪ್ರ. ವಾರ್ತೆ ಟಿ ಅರಸೀಕೆರೆ ಟಿ ಫೆ.3
ಸಂಸ್ಕಾರ, ಸಂಸ್ಕೃತಿ, ಶಿಸ್ತುಬದ್ಧ ಉತ್ತಮ ವಿದ್ಯಾರ್ಥಿಗಳು ಹಾಗೂ ಅತ್ಯಾಧುನಿಕ ಸೌಲಭ್ಯ ಹೊಂದಿರುವ ರಾಜ್ಯದ ಪ್ರಥಮ ವಸತಿ ನಿಲಯ ಇದಾಗಿದೆ ಎಂದು ಚಿತ್ರದುರ್ಗ ಜಿಲ್ಲಾ ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತ ಇಲಾಖೆಯ ಅಧಿಕಾರಿ ಮಹೇಶ್ ಅಭಿಪ್ರಾಯಪಟ್ಟರು.
ಪಟ್ಟಣದ ಜೇನುಕಲ್ ನಗರ ಬಡಾವಣೆಯಲ್ಲಿರುವ ಪರಿಶಿಷ್ಟ ಜಾತಿ ಮತ್ತು ಪ.ಪಂಗಡದ ಕಾಲೇಜು ವಸತಿ ನಿಲಯದ ವಾರ್ಷಿಕೋತ್ಸವ ಹಾಗೂ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಾಮರ್ಥ್ಯ ಹೊಂದಿದ್ದಾರೆ: ಅವರು ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಲು ಸರ್ಕಾರ ನೀಡಿರುವ ಸಕಲ ಸೌಲಭ್ಯಗಳನ್ನು ಸದ್ಭಳಕೆ ಮಾಡಿಕೊಂಡು ಸಮಾಜದಲ್ಲಿ ಉತ್ತಮ ಬದುಕನ್ನು ರೂಪಿಸಿಕೊಳ್ಳಬೇಕು. ಎಲ್ಲಾ ವಿದ್ಯಾವಂತರಿಗೆ ಸರ್ಕಾರ ಉದ್ಯೋಗ ಕೊಡಲು ಸಾಧ್ಯವಿಲ್ಲವಾದರೂ ಈ ಹಾಸ್ಟೆಲಲ್ನಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ವಿದ್ಯೆಯನ್ನೇ ಬಂಡವಾಳವನ್ನಾಗಿ ಮಾಡಿಕೊಂಡು ತಮ್ಮ ಬದುಕನ್ನು ಕಟ್ಟಿಕೊಳ್ಳುವ ಸಾಮರ್ಥ್ಯವನ್ನು ಹೊಂದಿದ್ದಾರೆ ಎಂದು ಹೇಳಿದರು.
ಕರೆ: ತಾಪಂ ಅಧ್ಯಕ್ಷ ಹೆಚ್.ಟಿ. ಶಿವಮೂಟಜ್ಗಿ ಮಾತನಾಡಿ, ಪರಿಶಿಷ್ಟ ಜಾತಿ, ಪಂಗಡದ ವಿದ್ಯಾರ್ಥಿಗಳ ಕಲ್ಯಾಣಕ್ಕಾಗಿ ಸರ್ಕಾರ ಕೋಟ್ಯಂತರ ರು. ಅನುದಾನ ಒದಗಿಸಿ, ಎಲ್ಲ ರೀತಿಯ ಸೌಲಭ್ಯಗಳನ್ನು ನೀಡಲಾಗಿದೆ. ಇದರಿಂದಾಗಿ ವಸತಿ ನಿಲಯಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವನ್ನೊಳಗೊಂಡ ಸಾಮಗ್ರಿಗಳನ್ನು ನೀಡಿದ್ದು ಇವುಗಳನ್ನು ಹಾಳುಗೆಡವದೆ ತಮ್ಮ ವಸ್ತುಗಳೆಂದು ಭಾವಿಸಿ, ರಕ್ಷಿಸುವ ಮೂಲಕ ಮುಂದೆ ಬರುವ ವಿದ್ಯಾರ್ಥಿಗಳಿಗೆ ಮಾದರಿಯಾಗಬೇಕೆಂದು ಕರೆ ನೀಡಿದರು.
ತಾಲೂಕು ಸಮಾಜ ಕಲ್ಯಾಣಾಧಿಕಾರಿ ಪ್ರಕಾಶ್ ಮೂರ್ತಿ, ಪುರಸಭೆ ಅಧ್ಯಕ್ಷ ಮೋಹನ್ ಕುಮಾರ್ ಇತರರು ವಿದ್ಯಾರ್ಥಿ ಜೀವನದ ಅನುಭವಗಳನ್ನು ಹಂಚಿಕೊಂಡರು. ಸಮಾರಂಭದಲ್ಲಿ ಹೊಯ್ಸಳೇಶ್ವರ ಪದವಿ ಕಾಲೇಜಿನ ಎನ್.ಸಿ.ಸಿ. ಅಧಿಕಾರಿ ಪ್ರಭು, ಆದಿಚುಂಚನಗಿರಿ ಪ.ಪೂ. ಕಾಲೇಜಿನ ಪ್ರಾಶುಂಪಾಲ ಅಶೋಕ್, ಗೋವಿಂದೇಗೌಡ, ಮಂಜುನಾಥ್, ಬಸವರಾಜು, ಕೆಂಪೇಗೌಡ ವೇದಿಕೆಯ ಮುಖಂಡರಾದ ದಯಾನಂದ, ವಿನೋದ್ ಇದ್ದರು.
ಇದೇ ವೇಳೆ ಹಾಸ್ಟೆಲ್ನಲ್ಲಿ ವಿದ್ಯಾಭ್ಯಾಸ ಮಾಡಿ ಸರ್ಕಾರಿ ನೌಕರಿ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮ ಗಮನ ಸೆಳೆಯಿತು. ವಸತಿ ನಿಲಯ ಮೇಲ್ವಿಚಾರಕ ಸತೀಶ್ ಸ್ವಾಗತಿಸಿ, ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

