ಹಾಸನ

ಮಾರ್ಚ್‌ನಲ್ಲಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

Published On :

ಸಕಲೇಶಪುರ: ತಾಲೂಕಿನ ಎರಡನೇ ಸಾಹಿತ್ಯ ಸಮ್ಮೇಳನವು ಮುಂದಿನ ಮಾರ್ಚ್ ತಿಂಗಳಿನಲ್ಲಿ ಅದ್ದೂರಿಯಾಗಿ ನಡೆಸಲಾಗುವುದು ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್   ಅಧ್ಯಕ್ಷ ಎಸ್.ಎಂ. ಮಂಜುನಾಥ್ ತಿಳಿಸಿದರು.
ಪಟ್ಟಣದ ಮಿನಿವಿದಾನ ಸೌಧ ಸಭಾಂಗಣದಲ್ಲಿ  ಶಾಸಕ ಎಚ್.ಕೆ.ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ತಾಲೂಕು ಮಟ್ಟದ ಅಧಿಕಾರಿಗಳ ಮತ್ತು ಸಂಘ ಸಂಸ್ಥೆಗಳ ಮುಖಂಡರ ಪೂರ್ವಭಾವಿ ಸಭೆಯಲ್ಲಿ ಈ ಕುರಿತು ಚರ್ಚಿಸಲಾಯಿತು.
ಮಾರ್ಚ್ ಎರಡನೇ ವಾರದಲ್ಲಿ ಪಟ್ಟಣದಲ್ಲಿ ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಲಾಯಿತು ಹಾಗೂ ಕಾರ್ಯಕ್ರಮದ ಸ್ವಾಗತ ಸಮಿತಿ ಅಧ್ಯಕ್ಷರಾಗಿ ಶಾಸಕ ಎಚ್.ಕೆ. ಕುಮಾರಸ್ವಾಮಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ಸಭೆಯಲ್ಲಿ ತಹಸಿಲ್ದಾರ್ ಪಾರ್ವತಿ, ಸಹಾಯಕ ಸಾರಿಗೆ ಅಧಿಖಾರಿ ಕೇಶವಧರಣಿ, ಎಪಿಎಂಸಿ ಅಧ್ಯಕ್ಷ ಸುಪ್ರದೀಪ್, ಪುರಸಭಾಧ್ಯಕ್ಷ ಸತೀಶ್,ಕಸಾಪ ನಿಕಟಪೂರ್ವ ಅಧ್ಯಕ್ಷ ಪ್ರಸಾದ್ ರಕ್ಷಿದಿ, ಬಿ.ವಿ. ಜಯರಾಜ್, ಜಿಪಂ ಸದಸ್ಯೆ ಮಂಜಮ್ಮಾ ತಿಪ್ಪೇಸ್ವಾಮಿ, ತಾಲೂಕು ಪಂಚಾಯ್ತಿ, ಪುರಸಭೆ ಸದಸ್ಯರು, ನಾನಾ ಇಲಾಖೆ ಅಧಿಕಾರಿಗಳು, ಸಂಘ ಸಂಸ್ಥೆ ಮುಖಂಡರು ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.