ಹಾಸನ

ಅತಿಥಿ ಉಪನ್ಯಾಸಕರ ಸಮಸ್ಯೆ: ಎಬಿವಿಪಿ ಪ್ರತಿಭಟನೆ

Published On :

ಬೇಲೂರು: ಅರೆಕಾಲಿಕ ಉಪನ್ಯಾಸಕರಿಗೆ ಸೂಕ್ತವಾದ ವೇತನವನ್ನು ಪ್ರತಿ ತಿಂಗಳು ನೀಡಬೇಕು ಎಂದು ಒತ್ತಾಯಿಸಿ ಎಬಿವಿಪಿ ಕಾರ್ಯಕರ್ತರು ಗುರುವಾರ ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಪಟ್ಟಣದ ಮುಖ್ಯರಸ್ತೆಯಲ್ಲಿ ಮೆರವಣಿಗೆ ಹೊರಟು ನಂತರ ತಾಲೂಕು ಕಚೇರಿಗೆ ತೆರಳಿ ತಹಸೀಲ್ದಾರ್ ಜಗದೀಶ್ ಅವರಿಗೆ ಮನವಿ ಸಲ್ಲಿಸಲಾಯಿತು.
ಪ್ರತಿಭಟನಾಕಾರರನ್ನು ಉದ್ದೇಶಿಸಿ ನಗರ ಕಾರ್ಯದರ್ಶಿ ಸಚ್ಚಿನ್ ಮಾತನಾಡಿ, ರಾಜ್ಯದ ಸರ್ಕಾರಿ ಪದವಿ ಪೂರ್ವ ಹಾಗೂ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾವಿರಾರು ಅತಿಥಿ ಉಪನ್ಯಾಸಕರು ಕೆಲಸ ನಿರ್ವಹಿಸುತ್ತಿದ್ದಾರೆ. ಆದರೆ ಅವರಿಗೆ 8 ಸಾವಿರ ರು. ವೇತನ ನಿಗದಿ ಮಾಡಿದ್ದು, ಅದನ್ನು ವರ್ಷದಲ್ಲಿ ಒಮ್ಮೆಯೋ ಎರಡು ಬಾರಿಯೋ ಪಡೆದು ಪಾಠ ಮಾಡಬೇಕಾದ ಪರಿಸ್ಥಿತಿಯಿದೆ. ಈ ವಿಷಯವಾಗಿ ಅರೆಕಾಲಿಕ ಉಪನ್ಯಾಸಕರು ಹಲವು ಹೋರಾಟ ಮಾಡಿದ್ದರೂ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ದೂರಿದರು.
ಗೌರವದಿಂದ ನಡೆಸಿಕೊಳ್ಳಿ: ಎಲ್ಲಾ ಪದವಿ ಕಾಲೇಜುಗಳಲ್ಲಿ ಖಾಯಂ ಉಪನ್ಯಾಸಕರ ನೇಮಕವಾಗದೆ ಅತಿಥಿ ಉಪನ್ಯಾಸಕರ ಮೂಲಕ ಪಾಠ ಪ್ರವಚನ ನಡೆಯುತ್ತಿದ್ದು ಸಮರ್ಪಕ ವೇತನ ನೀಡದ ಕಾರಣ ಪ್ರತಿ ದಿನ 3, 4 ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಇದರಿಂದ ವಿದ್ಯಾರ್ಥಿಗಳಿಗೆ, ಉಪನ್ಯಾಸಕರಿಗೆ ಸಮರ್ಪಕ ಶೈಕ್ಷಣಿಕ ಗುಣಮಟ್ಟವನ್ನು ಕಾಯ್ದುಕೊಳ್ಳಲಾಗುತ್ತಿಲ್ಲ. ಅತಿಥಿ ಉಪನ್ಯಾಸಕರಿಲ್ಲದಿದ್ದರೆ ಕಾಲೇಜು ಮುಚ್ಚಬೇಕಾದ ಸ್ಥಿತಿಯಿದ್ದು ವಾರಕ್ಕೆ 16 ಗಂಟೆ ಪಾಠ, ತಿಂಗಳಿಗೆ 25 ಸಾವಿರ ಸಂಬಳವನ್ನು ನೀಡಿ ಗೌರವದಿಂದ ನಡೆಸಿಕೊಳ್ಳಬೇಕು ಎಂದು ಒತ್ತಾಯಿಸಿದರು.
ತಾಲೂಕು ಎಬಿವಿಪಿ ಸಂಚಾಲಕ ಲೋಕೇಶ್, ನಗರ ಸಹ ಕಾರ್ಯದರ್ಶಿ ಪೂರ್ಣೇಶ್, ಮೋಹನ್, ಸಚಿನ್, ರೂಪ, ಸ್ವಾತಿ, ಮಿಲನ ಹಾಗೂ ವಿದ್ಯಾರ್ಥಿಗಳು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.