ಹಾಸನ

ಮಾಧ್ಯಮಗಳಿಂದ ಸಮಾಜದ ಅಭಿವೃದ್ಧಿ ಸಾಧ್ಯ

Published On :

ಕ.ಪ್ರ.ವಾರ್ತೆ ,  ಹಾಸನ ,  ಫೆ. 7
ಭಾರತದ ಸಂವಿಧಾನದ ನಾಲ್ಕನೇ ಅಂಗವಾಗಿರುವ ಪತ್ರಿಕೋದ್ಯಮ ಇಂದು ಜನ ಸಾಮಾನ್ಯರಿಗೆ ತುಂಬ ಹತ್ತಿರವಾಗಿದ್ದು, ಮಾಧ್ಯಮಗಳು ಇಲ್ಲದಿದ್ದಲ್ಲಿ ಸಮಾಜದ ಅಭಿವೃದ್ಧಿ ಸಾಧ್ಯ ಇರಲಿಲ್ಲ ಎಂದು ಜಿಲ್ಲಾಧಿಕಾರಿ ವಿ. ಅನ್ಬುಕುಮಾರ್ ತಿಳಿಸಿದರು.
ನಗರದ ಮಹಿಳಾ  ವರದಿಗಾರರ ಕೂಟದ ವತಿಯಿಂದ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಪತ್ರಕರ್ತರು ವರದಿ ಮಾಡುವ ವೇಳೆ ಸೂಕ್ಷ್ಮತೆ ಮತ್ತು ಜಾಗರೂಕತೆಯಿಂದ ಕೆಲಸ ಮಾಡಬೇಕು. ತಪ್ಪಾಗಿ ವರದಿ ಮಾಡಿದರೆ ಅದು ಸಮಾಜದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ.
 ಪತ್ರಿಕಾ ಕ್ಷೇತ್ರದಲ್ಲಿ ಕೆಲಸ ಮಾಡುವ ಯುವ ಪತ್ರಕರ್ತರು ವರದಿ ಮಾಡುವ ಮುನ್ನ ನೇರವಾಗಿ ತೀರ್ಮಾನ ಮಾಡಿಕೊಳ್ಳದೆ ಸಾರ್ವಜನಿಕ ಅಭಿಪ್ರಾಯಗಳಿಗೆ ಮನ್ನಣೆ ನೀಡಬೇಕು. ಆರೋಗ್ಯಕರ ಸಮಾಜ ನಿರ್ಮಾಣದಲ್ಲಿ ಪತ್ರಕರ್ತರು ಆಡಳಿತ ವರ್ಗಗಳೊಂದಿಗೆ ಸಹಕರಿಸಬೇಕು ಎಂದು ತಿಳಿಸಿದರು.
ವಿಶೇಷ ಸಂಚಿಕೆ ಬಿಡುಗಡೆ: ಪತ್ರಿಕೋದ್ಯಮ ವಿಭಾಗದ ವತಿಯಿಂದ ಪರಿಸರ ಜಾಗೃತಿ ಕುರಿತು ಹೊರತರಲಾದ ಸಂವಹನ ವೇದಿಕೆ ವಿಶೇಷ ಸಂಚಿಕೆಯನ್ನು ಜಿಲ್ಲಾಧಿಕಾರಿ ವಿ. ಅನ್ಬುಕುಮಾರ್ ಬಿಡುಗಡೆ ಮಾಡಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಂಶುಪಾಲ ಪ್ರೊ. ಎಚ್.ಎನ್. ರೂಪ್‌ರಾಜ್ ಚಂದನ್, ಪತ್ರಿಕೋದ್ಯಮ ವಿದ್ಯಾರ್ಥಿಗಳು ಎಲ್ಲಾ ಕ್ಷೇತ್ರಗಳ ಬಗ್ಗೆ ಜ್ಞಾನವನ್ನು ಹೊಂದುವ ಮೂಲಕ ನಮ್ಮ ಸಮಾಜವನ್ನು ಸರಿದಾರಿಯಲ್ಲಿ ನಡೆಸುವ ಜವಾಬ್ದಾರಿಯನ್ನು ಮೈಗೂಡಿಸಿಕೊಳ್ಳಬೇಕು ಎಂದರು.
ಸರ್ಕಾರಿ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಎಚ್.ಕೆ. ದಿಲೀಪ್ ಕುಮಾರ್, ಪ್ರಾಧ್ಯಾಪಕ ಕೆ.ಡಿ. ಮುರಳೀಧರ, ಎಂ.ಕೆ.ಮಹೇಶ್, ಸುಲೋಚನ, ವಿನುತ, ಡಾ. ಕವಿತ, ಪದ್ಮಿನಿ, ಯಶೋಧ, ಉಪನ್ಯಾಸ ರವೀಂದ್ರ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕ ಎಂ.ಎ.ಪ್ರಕಾಶ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.