ಸಹಕಾರ ಸಂಘಗಳ ರದ್ದತಿಗೆ ಕ್ರಮ
ಹಾಸನ: ಸಕಲೇಶಪುರ ತಾಲೂಕಿನ ಕೆಲವು ಸಹಕಾರ ಸಂಘಗಳನ್ನು ರದ್ದುಗೊಳಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕರಾದ ಎಲ್ಯಾಸ್ ಉಲ್ಲಾ ಷರೀಫ್ ತಿಳಿಸಿದ್ದಾರೆ.
ತಾಲೂಕಿನ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ನಿ., ಸಿದ್ಧಾಪುರ., ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ನಿ., ಚಿನ್ನಹಳ್ಳಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ನಿ., ಹೊಸಹಳ್ಳಿ. ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ನಿ., ಅತ್ತಿಹಳ್ಳಿ. . ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ನಿ., ಹೊಂಗಡಹಳ್ಳಿ. ಸಹಕಾರ ಸಂಘಗಳು ಸ್ಥಗಿತಗೊಂಡಿರುವುದರಿಂದ ಸದರಿ ಸಂಘಗಳನ್ನು ಸಮಾಪನೆಗೊಳಿಸಲು ಸಹಕಾರ ಸಂಘಗಳ ಸಹಾಯಕ ನಿಬಂಧಕರು, ಸಕಲೇಶಪುರ ಅವರು ಪ್ರಸ್ತಾವನೆಯನ್ನು ಸಲ್ಲಿಸಿದ್ದಾರೆ.
ಈ ಸಂಘಗಳ ಆಡಳಿತ ಮಂಡಳಿ ಸದಸ್ಯರು ಹಾಗೂ ಷೇರುದಾರರು ಇವುಗಳನ್ನು ಸಮಾಪನೆಗೊಳಿಸುವ ಬಗ್ಗೆ ತಮ್ಮ ಆಕ್ಷೇಪಣೆಗಳೇನಾದರೂ ಇದ್ದರೆ, ಪ್ರಕಟಣೆ ಪ್ರಕಟಗೊಂಡ ದಿನಾಂಕದಿಂದ ಒಂದು ವಾರದೊಳಗೆ ಕಚೇರಿಯನ್ನು ಸಂಪರ್ಕಿಸಬಹುದು. ಇಲ್ಲದಿದ್ದಲ್ಲಿ ಈ ಸಂಘಗಳ ಸಮಾಪನೆ ಕುರಿತು ಯಾವುದೇ ಆಕ್ಷೇಪಣೆಗಳು ಇರುವುದಿಲ್ಲವೆಂದು ಪರಿಗಣಿಸಿ ಸಮಾಪನೆಗೆ ಕ್ರಮ ಇಡಲಾಗುವುದು ಎಂದು ಎಚ್ಚರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

