ಹಾಸನ

'ಖಾಸಗೀಕರಣದಿಂದ ಶಿಕ್ಷಣ ಉದ್ಯಮ'

Published On :

ಹಾಸನ: ಖಾಸಗೀಕರಣದಿಂದಾಗಿ ಶಿಕ್ಷಣ ಉದ್ಯಮವಾಗಿ ಮಾರ್ಪಟಿದ್ದು, ಇದರಿಂದ ದೇಶಕ್ಕೆ ಉಳಿಗಾಲವಿಲ್ಲ ಎಂದು ಹಿರಿಯ ಸಾಹಿತಿ, ಚಿಂತಕ ಪ್ರೊ. ಹಿ.ಶಿ.ರಾಮಚಂದ್ರೇಗೌಡ ಅಸಮಾಧಾನ ವ್ಯಕ್ತಪಡಿಸಿದರು.
ನಗರದಲ್ಲಿ ಶುಕ್ರವಾರ ಭಾರತೀಯ ವಿದ್ಯಾರ್ಥಿ ಒಕ್ಕೂಟ (ಎಸ್‌ಎಫ್‌ಐ) ವತಿಯಿಂದ ಶಿಕ್ಷಣದ ಖಾಸಗೀಕರಣದ ವಿರುದ್ಧ ವಿದ್ಯಾರ್ಥಿಗಳ ಪ್ರಜಾಸತ್ತಾತ್ಮಕ ಹಕ್ಕುಗಳಿಗಾಗಿ ಹಾಗೂ ಸಮಗ್ರ ಶೈಕ್ಷಣಿಕ ಅಭಿವೃದ್ಧಿಗಾಗಿ ಒತ್ತಾಯಿಸಿ ನಡೆದ 7ನೇ ಜಿಲ್ಲಾ ವಿದ್ಯಾರ್ಥಿ ಸಮ್ಮೇಳನವನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದ ಅವರು, ಖಾಸಗೀಕರಣದ ಮೂಲ ಉದ್ದೇಶ ಹಣ ಮತ್ತು ಗುಲಾಮಗಿರಿಯಾಗಿದೆ. ಅದಕ್ಕೆ ಅವಕಾಶವನ್ನು ನೀಡಬಾರದು ಎಂದು ಹೇಳಿದರು.
ಮುಂದಿನ ಸ್ಥಿತಿ ಶೋಚನೀಯ: ಶೈಕ್ಷಣಿಕ ಸಮುದಾಯದ ಹಕ್ಕುಗಳ ಮೇಲೆ ಆಗುತ್ತಿರುವ ಅತಿಕ್ರಮಣವನ್ನು ತಡೆಗಟ್ಟಬೇಕು. ಕಾರ್ಪೋರೇಟ್ ಸಂಸ್ಥೆಗಳು ದೇಶದ ಮಾನವ ಸಂಪನ್ಮೂಲವನ್ನು ಸಂಪೂರ್ಮವಾಗಿ ಮಾರಾಟದ ವಸ್ತುವಾಗಿ ಮಾರ್ಪಡಿಸಿದ್ದು, ವಿದೇಶಗಳಿಗೆ ದೇಶದ ಮಾನವ ಶಕ್ತಿಯನ್ನು ಮಾರಾಟ ಮಾಡುವ ಮೂಲಕ ಕೂಲಿಯಾಳಿನಂತೆ ನಡೆದುಕೊಳ್ಳಲಾಗುತ್ತಿದೆ. ಇದೇ ರೀತಿಯಲ್ಲಿ ದೇಶದ ಪರಿಸ್ಥಿತಿ ಮುಂದುವರೆದಲ್ಲಿ ದೇಶದ ಸ್ಥಿತಿ ಶೋಚನೀಯವಾಗಲಿದೆ ಎಂದರು.
ಎಚ್ಚರಿಕೆಯ ಹೆಜ್ಜೆ: ಜಾತಿ ಸಂಘಟನೆ, ರಾಜಕೀಯ ಪಕ್ಷ ಸಂಘಟನೆಗಳಲ್ಲಿ ಭಾಗವಹಿಸಿದರೆ ಅಲ್ಲಿ ತಮ್ಮ ಅವಕಾಶವನ್ನು ವಿಸ್ತರಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಸಮಾನತೆಯ ಬಗ್ಗೆ ಹೇಳುವಂತಹ ಸಂಘಟನೆಗಳಲ್ಲಿ ತೊಡಗಿಕೊಂಡರು ಅವಕಾಶಗಳನ್ನು ಹೆಚ್ಚಿಕೊಂಡು ಬೆಳೆಯಲು ಸಾಧ್ಯವಾಗುತ್ತದೆ. ಸಮಾನತೆ ಇರುವ ಸಂಘಟನೆಗಳಲ್ಲಿ ಗುರುತಿಸಿಕೊಂಡರೆ ಇಚ್ಛಾಶಕ್ತಿ ಬೆಳೆಯಲು ಸಾಧ್ಯವಾಗುತ್ತಿದೆ. ಅದ್ದರಿಂದ ವಿದ್ಯಾರ್ಥಿಗಳು ಎಚ್ಚರಿಕೆಯಿಂದ ಹೆಜ್ಜೆ ಇಡಬೇಕು ಎಂದು ಹೇಳಿದರು.
ಕಾರ್ಪೋರೇಟ್ ವ್ಯವಸ್ಥೆ ಬೇಡ: ಕಾರ್ಪೋರೇಟ್ ವ್ಯವಸ್ಥೆಯಲ್ಲಿ ಉದ್ಯೋಗಕ್ಕೆ ಭದ್ರತೆ ನೀಡುವುದಿಲ್ಲ. ತಮಗೆ ಬೇಕಾದಗ ಉದ್ಯೋಗಕ್ಕೆ ಸೇರಿಕೊಂಡು ಬೇಡವಾದಾಗ ಕೆಲಸದಿಂದ ತೆಗೆಯುವಂತಹ ವ್ಯವಸ್ಥೆ ಇದೆ. ಇದರಿಂದ ಉದ್ಯೋಗದಲ್ಲಿ ಭದ್ರತೆ ಇಲ್ಲದಂತಾಗಿದೆ. ಆದ್ದರಿಂದ ಕಾರ್ಪೋರೇಟ್ ವ್ಯವಸ್ಥೆಯನ್ನು ವಿರೋಧಿಸುವಂತೆ ಅವರು ಕರೆ ನೀಡಿದರು. ಕಾರ್ಯಕ್ರಮಕ್ಕೂ ಮುನ್ನ ಶಿಕ್ಷಣದ ಖಾಸಗೀಕರಣದ ವಿರುದ್ಧ ವಿದ್ಯಾರ್ಥಿಗಳ ಪ್ರಜಾಸತ್ತಾತ್ಮಕ ಹಕ್ಕುಗಳಿಗಾಗಿ ಹಾಗೂ ಸಮಗ್ರ ಶೈಕ್ಷಣಿಕ ಅಭಿವೃದ್ಧಿಗಾಗಿ ಒತ್ತಾಯಿಸಿ  ನಗರದಲ್ಲಿ ಮೆರವಣಿಗೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಎಸ್‌ಎಫ್‌ಐ ರಾಜ್ಯಾಧ್ಯಕ್ಷ ಕಾಂ ಎನ್. ಅನಂತನಾಯಕ್, ಜಿಲ್ಲಾಧ್ಯಕ್ಷ ಕಾಂ ಎಂ.ಜಿ. ಪೃಥ್ವಿ, ಜಿಲ್ಲಾ ಕಾರ್ಯಕದರ್ಶಿ ಕಾಂ ಕೆ.ಎಸ್. ಮಂಜುನಾಥ್, ಕರ್ನಾಟಕ ಪ್ರಾಂತ ರೈತ ಸಂಘ ಜಿಲ್ಲಾ ಸಂಚಾಲಕ ಎಚ್.ಆರ್. ನವೀನ್ ಕುಮಾರ್, ಡಿವೈಎಫ್‌ಐ ಜಿಲ್ಲಾಧ್ಯಕ್ಷ ಬಿ.ಜಿ. ಗಿರೀಶ್, ಎನ್.ಡಿ. ಧನಲಕ್ಷ್ಮೀ ಹಾಗೂ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.