ಬೇಕರಿ ಉತ್ಪಾದನೆ ತರಬೇತಿ
ಹಾಸನ: ಪ್ರವಾಸೋದ್ಯಮ ಇಲಾಖೆ ಹಾಗೂ ತಾಜ್ ಗ್ರೂಪ್ ಆಫ್ ಹೋಟೆಲ್ಸ್ ಕರ್ನಾಟಕ ಇವರ ಸಂಯುಕ್ತಾಶ್ರಯದೊಂದಿಗೆ ಜಿಲ್ಲೆಯಲ್ಲಿರುವ ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡದ ಯುವಕ-ಯುವತಿಯರಿಗೆ 5ನೇ ಹಂತದ ಬೇಕರಿ ಉತ್ಪಾದನೆ ಹಾಗೂ ನಿರ್ವಹಣೆ ಕುರಿತು ಸರ್ಕಾರಿ ಮಹಿಳಾ ಕೈಗಾರಿಕಾ ತರಬೇತಿ ಕೇಂದ್ರ, ಬಿ.ಎಂ. ರಸ್ತೆ, ಚನ್ನರಾಯಪಟ್ಟಣದಲ್ಲಿ ತರಬೇತಿಯನ್ನು ನೀಡಲು ಉದ್ದೇಶಿಸಲಾಗಿದೆ. ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸ್ಟೈಫಂಡ್ ನೀಡಲಾಗುವುದು.
ಅಭ್ಯರ್ಥಿಗಳು 8 ನೇ ತರಗತಿಯಲ್ಲಿ ಉತ್ತೀರ್ಣರಾಗಿದ್ದು, 5ನೇ ಹಂತದ ಬೇಕರಿ ಉತ್ಪಾದನೆ ಹಾಗೂ ನಿರ್ವಹಣೆ ಕುರಿತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಫೆ. 28ರೊಳಗೆ (ಸರ್ಕಾರಿ ರಜೆಗಳನ್ನು ಹೊರತುಪಡಿಸಿ) ಪ್ರಾದೇಶಿಕ ಪ್ರವಾಸಿ ಕಚೇರಿ, ಪ್ರವಾಸೋದ್ಯಮ ಇಲಾಖೆ, ಯಾತ್ರಿನಿವಾಸ ಬಿಲ್ಡಿಂಗ್, ಎ.ವಿ.ಕೆ. ಕಾಲೇಜು ರಸ್ತೆ, ಹಾಸನ ಇಲ್ಲಿ ನೇರ ಆಯ್ಕೆಗಾಗಿ ತಮ್ಮ ಮೂಲ ದಾಖಲೆಗಳಾದ 8ನೇ ತರಗತಿ ಉತ್ತೀರ್ಣರಾಗಿರುವ ಬಗ್ಗೆ ದಾಖಲಾತಿ, ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಗುರುತಿನ ಚೀಟಿ ಅಥವಾ ಪಡಿತರ ಚೀಟಿಯೊಂದಿಗೆ ಹಾಜರಾಗಲು ಪ್ರಾದೇಶಿಕ ಪ್ರವಾಸಿ ಕಚೇರಿಯ ಸಹಾಯಕ ನಿರ್ದೇಶಕರು ಕೋರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

