ಪ್ರತಿ ಗ್ರಾಮ ಪಂಚಾಯ್ತಿಗೆ 200 ಮನೆ ಕೊಡಿ
ಚನ್ನರಾಯಪಟ್ಟಣ: ಬಸವ, ಆಶ್ರಯ, ವಸತಿ ಯೋಜನೆಗಳಿಗೆ ಪ್ರತಿ ಪಂಚಾಯ್ತಿಗೆ ಕನಿಷ್ಠ 200 ಮನೆಗಳನ್ನು ನೀಡಬೇಕೆಂದು ಶಾಸಕ ಸಿ. ಎನ್. ಬಾಲಕೃಷ್ಣ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಅವರು ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಇತ್ತೀಚೆಗೆ ಮೂರು ಹೋಬಳಿ ಫಲಾನುಭವಿಗಳಿಗೆ ಬಸವ ವಸತಿ ಯೋಜನೆಯ 660 ಕಾಮಗಾರಿ ಆದೇಶ ಪತ್ರಗಳನ್ನು ವಿತರಿಸಿ ಮಾತನಾಡಿ, ವಸತಿ ರಹಿತರಿಗೆ ಸರ್ಕಾರ ಮನೆ ನಿರ್ಮಿಸಲು ಈ ಯೋಜನೆ ಉಪಕಾರಿಯಾಗಿದ್ದರೂ ಒತ್ತಡದ ನಡುವೆ ಸೇವೆ ಮಾಡಬೇಕಾದ ಸ್ಥಿತಿ ಹೊಂದಿದೆ ಎಂದರು. ಸರ್ಕಾರ ಈ ಬಗ್ಗೆ ಚಿಂತನೆ ನಡೆಸಬೇಕು. ಫಲಾನುಭವಿಗಳಿಗೆ ಸರ್ಕಾರ ಸೂಚಿಸಿದಂತೆ ನಾಲ್ಕು ಚದರಕ್ಕಿಂತ ಹೆಚ್ಚು ಅಳತೆಯಲ್ಲಿ ಮನೆ ನಿರ್ಮಿಸಿಕೊಳ್ಳಲು ಅವಕಾಶವಿಲ್ಲ. ಕಾನೂನು ಬಗ್ಗೆ ಅರಿತು ಗುಣಮಟ್ಟದ ಮನೆ ನಿರ್ಮಿಸಿಕೊಳ್ಳುವಂತೆ ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ 33 ಗ್ರಾಮಪಂಚಾಯಿತಿ 660 ಮಂದಿ ಬಡವರಿಗೆ ಆದೇಶ ಪತ್ರ ನೀಡಲಾಯಿತು. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮೃತ್ಯುಂಜಯ, ತಾಲೂಕು ಪಂಚಾಯಿತಿ ಅಧ್ಯಕ್ಷೆ ಹೇಮಾವತಿ ಕೃಷ್ಣನಾಯಕ್, ಉಪಾಧ್ಯಕ್ಷೆ ಶಿಲ್ಪಶ್ರೀನಿವಾಸ್, ಮಂಜುನಾಥ್ ಹಾಗೂ ಗ್ರಾಮಪಂಚಾಯಿತಿ ಅಧ್ಯಕ್ಷರು ಪಾಲ್ಗೊಡಿದ್ದರು.
ನೇರ ಪ್ರಸಾರ ವೀಕ್ಷಣೆಗೆ ಮನವಿ
ಅರಸೀಕೆರೆ: ಫೆ. 13ರವರೆಗೆ ಮಹಾರಾಷ್ಟ್ರ ರಾಜ್ಯದ ನಾಗಪುರದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಮಟ್ಟದ ಕೃಷಿ ವಸಂತ್ 2014ರ ಕಾರ್ಯಕ್ರಮದ ನೇರ ಪ್ರಸಾರವನ್ನು ವೀಕ್ಷಿಸಲು ಕೃಷಿ ಇಲಾಖೆ, ಅರಸೀಕೆರೆಯಲ್ಲಿ ವ್ಯವಸ್ಥೆ ಮಾಡಲಾಗಿದ್ದು ರೈತ, ರೈತ ಮಹಿಳೆಯರು ಆಗಮಿಸಿ ಈ ಕಾರ್ಯಕ್ರಮ ವೀಕ್ಷಣೆ ಮಾಡಿ, ಅದರ ಸದುಪಯೋಗವನ್ನು ಪಡೆದು ಕೊಳ್ಳಲು ಸಹಾಯಕ ಕೃಷಿ ನಿರ್ದೇಶಕರು ಮನವಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

