ವಿದೇಶಿ ಪ್ರವಾಸಿಗ ಸಾವು
ಚನ್ನರಾಯಪಟ್ಟಣ: ಪ್ರವಾಸಿಗರ ತಂಡದೊಂದಿಗೆ ಇತಿಹಾಸ ಪ್ರಸಿದ್ದ ಶ್ರವಣಬೆಳಗೊಳಕ್ಕೆ ಆಗಮಿಸಿ ಚಂದ್ರಗಿರಿ ಬೆಟ್ಟವನ್ನು ಏರುತ್ತಿದ್ದ ಸಂದರ್ಭದಲ್ಲಿ ವಿದೇಶಿ ಪ್ರವಾಸಿಗರೊಬ್ಬರು ತೀವ್ರ ಆಯಾಸದಿಂದ ಕುಸಿದು ಬಿದ್ದು, ಚಿಕಿತ್ಸೆಗೆ ಕರೆ ತರುತ್ತಿದ್ದ ಸಂದರ್ಭದಲ್ಲಿ ಮಾರ್ಗ ಮಧ್ಯದಲ್ಲಿ ಮೃತಪಟ್ಟಿರುವ ಘಟನೆ ಸೋಮವಾರ ನಡೆದಿದೆ.
ಚೆನ್ನೈನಿಂದ ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಪ್ಯಾಕೆಜ್ ಟೂರ್‌ನಲ್ಲಿ ಆಗಮಿಸಿದ್ದ ಇಸ್ರೇಲ್‌ನ ಜೋಸೆಫ್ ಖುನ್ (70) ಮೃತಪಟ್ಟ ದುರ್ದೈವಿಯಾಗಿದ್ದು, ಈತ ತನ್ನ ಕುಟುಂಬದ ಮೂವರು ಸದಸ್ಯರೊಂದಿಗೆ ಚೆನ್ನೈನಿಂದ ಶ್ರವಣಬೆಳಗೊಳಕ್ಕೆ ಆಗಮಿಸಿ ಚಂದ್ರಗಿರಿ ಬೆಟ್ಟವನ್ನು ಏರುತ್ತಿದ್ದರು.
ತೀವ್ರ ದುಃಖ ತಪ್ತರಾದ ಕುಟುಂಭದ ಸದಸ್ಯರು ಪಾರ್ಥೀವ ಶರೀರದೊಂದಿಗೆ ಬೆಂಗಳೂರಿಗೆ ತೆರಳಿದರು. ಶ್ರವಣಬೆಳಗೊಳ ಪೊಲೀಸರು ದೂರು ದಾಖಲಿಸಿಕೊಂಡು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.
ಜಿಪಂ ಸಾಮಾನ್ಯ ಸಭೆ
ಹಾಸನ: ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಡಿ.ಜಿ. ಅಂಬಿಕಾ ರಾಮಣ್ಣ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯ್ತಿ ಹೊಯ್ಸಳ ಸಭಾಂಗಣದಲ್ಲಿ ಫೆ. 13ರಂದು ಬೆಳಗ್ಗೆ 11.30ಕ್ಕೆ ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆ ನಡೆಯಲಿದೆ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಯವರ ಕಚೇರಿ ಪ್ರಕಟಣೆ ತಿಳಿಸಿದೆ.
ಕಾರು- ಲಾರಿ ಡಿಕ್ಕಿ: ಒಬ್ಬ ಸಾವು
ಚನ್ನರಾಯಪಟ್ಟಣ: ತಾಲೂಕಿನ ಹಿರೀಸಾವೆಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಮುಂದೆ ಸಾಗುತ್ತಿದ್ದ ಲಾರಿಗೆ ಕಾರೊಂದು ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಓರ್ವ ಪ್ರಯಾಣಿಕ ಮೃತಪಟ್ಟು ಮೂವರಿಗೆ ಗಾಯಗಳಾಗಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಮುಂದೆ ಸಾಗುತ್ತಿದ್ದ ಲಾರಿಗೆ ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ದೇವನಹಳ್ಳಿ ತಾಲೂಕು ವಿಜಯಪುರ ವೇಣುಗೋಪಾಲ್ (38) ತೀವ್ರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆ ತಂದ ಸಂದರ್ಭದಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತ ಪಟ್ಟಿದ್ದಾನೆ. ಈತನೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಶ್ರೀನಿವಾಸ್, ಯತೀಶ್, ಲಕ್ಷ್ಮಿನಾಯರಾಯಣ್ ಅವರುಗಳಿಗೆ ಗಾಯಗಳಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗೆ ಹಾಸನದ ಆಸ್ಪತ್ರೆಗೆ ಕಳುಹಿಸಲಾಗಿದೆ. ನಾಲ್ವರು ಕಾರಿನಲ್ಲಿ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಹೋಗುತ್ತಿದ್ದ ಸಂದರ್ಭದಲ್ಲಿ ಮುಂದೆ ಸಾಗುತ್ತಿದ್ದ ಲಾರಿಗೆ ವೇಗವಾಗಿ ಬಂದು ಡಿಕ್ಕಿ ಹೊಡೆದಿದೆ. ಹಿರೀಸಾವೆ ಪೋಲಿಸರು ದೂರು ದಾಖಲಿಸಿಕೊಂಡು ಕ್ರಮ ತೆಗೆದುಕೊಂಡಿದ್ದಾರೆ.
ಸ್ನೇಹಿತನ ಮೇಲೆ ರಾಡ್‌ನಿಂದ ಹಲ್ಲೆ
ಚನ್ನರಾಯಪಟ್ಟಣ: ಹಳೆ ದ್ವೇಷದ ಹಿನ್ನಲೆಯಲ್ಲಿ ಆಪ್ತ ಸ್ನೇಹಿತನಿಗೆ ಕಬ್ಬಿಣದ ರಾಡಿನಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಹಿರೀಸಾವೆಯಲ್ಲಿ ಸೋಮವಾರ ನಡೆದಿದೆ. ಹಿರೀಸಾವೆ ಗ್ರಾಮದ ಆಕಾಶ್ ಬ್ಯಾಂಗಲ್ಸ್ ಮಾಲಿಕ ಪ್ರಕಾಶ್ ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದು, ಆತನ ಆಪ್ತ ಸ್ನೇಹಿತ ರಾಜಶೇಖರ್ ಹಲ್ಲೆ ಮಾಡಿದ ವ್ಯಕ್ತಿಯಾಗಿದ್ದು, ಈ ಇಬ್ಬರು ಆಪ್ತ ಸ್ನೇಹಿತರಲ್ಲಿ ಬಂದ ವೈರಸವೇ ಹಲ್ಲೆಗೆ ಕಾರಣವಾಗಿದ್ದು, ತೀವ್ರವಾಗಿ ತಲೆಗೆ ಪೆಟ್ಟು ಬಿದ್ದಿರುವ ಪ್ರಕಾಶ್ ಹಾಸನದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಹಿರೀಸಾವೆ ಪೊಲೀಸರು ದೂರು ದಾಖಲಿಸಿಕೊಂಡು ಕ್ರಮ ತೆಗೆದುಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

