ಶ್ರಮದೊಂದಿಗೆ ಶಿಕ್ಷಣ ಗಾಂಧೀಜಿ ನಿಲುವಾಗಿತ್ತು
ರಾಮನಾಥಪುರ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಕನಸು ಎನ್.ಎಸ್.ಎಸ್. ಯೋಜನೆಗಳ ಶ್ರಮ ಮತ್ತು ಶ್ರಮದೊಂದಿಗೆ ಶಿಕ್ಷಣ ನೀಡಬೇಕು ಎಂಬುದು ಅವರ ನಿಲುವಾಗಿತ್ತು ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಪ್ರಧಾನ ಕಾರ್ಯದರ್ಶಿ ಕೊಣನೂರು ಹೊಯ್ಸಳ ಹೇಳಿದರು.
ಶಿಬಿರ ಸಹಕಾರಿ: ಕೊಣನೂರು ಬಿ.ಎಂ. ಶೆಟ್ಟಿ ಸರ್ಕಾರಿ ಪದವಿ ಪೂರ್ವ ಕಾಲೇಜು ವತಿಯಿಂದ ಎನ್.ಎಸ್.ಎಸ್. ವಾರ್ಷಿಕ ರಾಷ್ಟ್ರೀಯ ಯೋಜನೆ ದೊಡ್ಡಮಗ್ಗೆ ಹೋಬಳಿ ಬೆಳವಾಡಿ ಗ್ರಾಮದಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯುವ ಶಕ್ತಿ ಒಂದಾದರೆ ಕಠಿಣ ಕೆಲಸಗಳನ್ನು ಸುಲಭವಾಗಿ ಮಾಡಬಹುದು. ವಿದ್ಯಾರ್ಥಿಗಳು ಜವಾಬ್ದಾರಿಯುತ ವ್ಯಕ್ತಿತ್ವ ಇತ್ತಾದಿ ಧ್ಯೇಯ ಹಾಗೂ ಗುಣಗಳನ್ನು ಬೆಳಸಿಕೊಳ್ಳಲು ಶಿಬಿರ ಸಹಕಾರಿಯಾಗುತ್ತದೆ ಎಂದು ತಿಳಿಸಿದರು.
ಸೇವಾ ಮನೋಭಾವ: ಕಾಲೇಜು ಪ್ರಾಂಶುಪಾಲ ಸಿ.ಎಸ್. ಮೋಹನ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಎನ್.ಎಸ್.ಎಸ್. ಶಿಬಿರದ ಅನುಭವದ ಮೂಲಕ ಶಿಕ್ಷಣವನ್ನು ನೀಡಲಾಗುವುದರಿಂದ ಸೇವಾ ಮನೋಭಾವ ಹೆಚ್ಚುತ್ತದೆ ಎಂದರು.
ಕಾಲೇಜು ಅಭಿವೃದ್ಧಿ ಮಂಡಳಿ ಉಪಾಧ್ಯಕ್ಷ ಶ್ರೀಧರ್ ಕಾರ್ಯಕ್ರಮ ಉದ್ಘಾಟಿಸಿದರು. ಸಮಿತಿ ಸದಸ್ಯರಾದ ಗೋವಿಂದರಾಜ್, ಕೆ.ಅರ್. ಸೋಮಶೇಖರ್, ಗ್ರಾಮದ ಮುಖಂಡರಾದ ಈಶ್ವರಚಾರಿ, ಪುಟ್ಟೇಗೌಡ, ಸ್ವಾಮಿಗೌಡ, ಮಲ್ಲೇಶ್ ಮುಂತಾದವರು ಭಾಗವಹಿಸಿದ್ದರು. ಮುತ್ತಯ್ಯ ಸ್ವಾಗತಿಸಿ, ಲೋಕೇಶ್ ನಿರೂಪಿಸಿ, ಗೋಪಾಲ್ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

