ಹಾಸನ

ಕಾರು ಅಪಘಾತ: ಹಾಸನದ ಪೊಲೀಸ್ ಅಧಿಕಾರಿ ಸಾವು

Published On :

ಚಿಕ್ಕಮಗಳೂರು: ಕಡೂರು ತಾಲೂಕಿನ ಪಿಳ್ಳೇನಹಳ್ಳಿ ಬಳಿ ಬುಧವಾರ ಮರಕ್ಕೆ ಆಕಸ್ಮಿಕವಾಗಿ ಕಾರ್ ಡಿಕ್ಕಿ ಹೊಡೆದ ಪರಿಣಾಮ ತರೀಕೆರೆಯ ವೃತ್ತ ನಿರೀಕ್ಷಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಎ. ಸೈಫುಲ್ಲಾ (58) ಮೃತಪಟ್ಟ ದುರ್ದೈವಿ. ತರೀಕೆರೆಯ ವೃತ್ತ ನಿರೀಕ್ಷಕರಾಗಿದ್ದ ಎ. ಸೈಫುಲ್ಲಾ ಅವರು ಬೇಲೂರಿನ ನ್ಯಾಯಾಲಯಕ್ಕೆ ಪ್ರಕರಣ ಒಂದರ ಕುರಿತಂತೆ ಸಾಕ್ಷಿ ಹೇಳಲು ತಮ್ಮದೆ ಸ್ವಂತ ಸ್ವಿಫ್ಟ್ ಕಾರಿನಲ್ಲಿ ತೆರಳಿದ್ದರು.
ಅವರು ಅಲ್ಲಿಂದ ಮಧ್ಯಾಹ್ನ ತರೀಕೆರೆಗೆ ವಾಪಸ್ ಬರುವ ವೇಳೆಗೆ ಪಿಳ್ಳೇನಹಳ್ಳಿ ಬಳಿ ಕಾರ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಎ. ಸೈಫುಲ್ಲಾ ಅವರು ಮೂಲತಃ ಹಾಸನದವರು.
ಅವರು ಚಿಕ್ಕಮಗಳೂರು ಜಿಲ್ಲಾ ಲಾಟರಿ ನಿಷೇಧ ದಳದಲ್ಲಿ ಕೆಲ ವರ್ಷಗಳ ಕಾಲ ಸೇವೆ ಸಲ್ಲಿಸಿ, ಕಳೆದ ಮೂರು ತಿಂಗಳ ಹಿಂದೆಯಷ್ಟೇ ತರೀಕೆರೆ ವೃತ್ತ ನಿರೀಕ್ಷಕರಾಗಿ ವರ್ಗಾವಣೆಗೊಂಡಿದ್ದರು. ಜಿಲ್ಲಾ ರಕ್ಷಣಾಧಿಕಾರಿ ಆರ್. ಚೇತನ್, ಡಿವೈಎಸ್ಪಿ ಚಿದಾನಂದಮೂರ್ತಿ, ಕಡೂರು ಸಿಪಿಐ ಮಧುಸೂದನ್, ಸಖರಾಯಪಟ್ಟಣ ಸಬ್ ಇನ್ಸ್‌ಪೆಕ್ಟರ್ ಗಿರೀಶ್ ಅವರು ಸ್ಥಳಕ್ಕೆ ಭೇಟಿ ನೀಡಿದ್ದರು. ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಸಖರಾಯಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.