ಹಾಸನ

ಅಂತಾರಾಷ್ಟ್ರೀಯ ಕರಾಟೆ ಸ್ಪರ್ಧೆ: ಹರ್ಷಿತ್‌ಗೆ ತೃತೀಯ ಸ್ಥಾನ

Published On :

ಹೊಳೆನರಸೀಪುರ: ಇಲ್ಲಿನ ಸ್ಕ್ವಾಯ್ ನ್ಯಾಷನಲ್ ಐಡಿಯಲ್ ಕರಾಟೆ ಶಾಲೆಯ ವಿದ್ಯಾರ್ಥಿ ಎನ್.ಡಿ. ಹರ್ಷಿತ್ 2014ರ ಜನವರಿಯಲ್ಲಿ ನೇಪಾಳದ ಕಠ್ಮಂಡುವಿನಲ್ಲಿ ಮೂರು ದಿನಗಳ ಕಾಲ ನಡೆದ ಇಂಟರ್ ನ್ಯಾಷನಲ್ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ತೃತೀಯ ಸ್ಥಾನ ಪಡೆದು ಜೂನ್ ತಿಂಗಳಿನಲ್ಲಿ ಬ್ಯಾಂಕಾಕ್ ಮತ್ತು ಶ್ರೀಲಂಕಾದಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್‌ಗೆ ಆಯ್ಕೆಯಾಗಿದ್ದಾನೆ ಎಂದು ಈತನ ತರಬೇತುದಾರರಾದ ಅಬ್ದುಲ್ ತಿಳಿಸಿದ್ದಾರೆ.
ಪಟ್ಟಣದಲ್ಲಿನ ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಶಾಖೆಯಲ್ಲಿ ಗನ್ ಮ್ಯಾನ್ ಆಗಿ ಸೇವೆ ಸಲ್ಲಿಸುತ್ತಿರುವ ದಿಲ್ ಕುಮಾರ್ ಅವರ ಪುತ್ರನಾದ ಎನ್.ಡಿ. ಹರ್ಷಿತ್ ಇಲ್ಲಿನ ಖಾಸಗಿ ಐಟಿಐ ಕಾಲೇಜಿನಲ್ಲಿ ಓದುತ್ತಿದ್ದು, ಈತ ನಾಲ್ಕನೇ ತರಗತಿಯಲ್ಲಿದ್ದಾಗಲೇ ಸ್ಕ್ವಾಯಾ ನ್ಯಾಷನಲ್ ಐಡಿಯಲ್ ಕರಾಟೆ ಶಾಲೆಗೆ ಸೇರಿ ತರಬೇತುದಾರರ ಮಾರ್ಗದರ್ಶನದಲ್ಲಿ ಉತ್ತಮವಾಗಿ ಕರಾಟೆಯನ್ನು ಕಲಿತು, ಜಿಲ್ಲಾ ಮಟ್ಟದ ಚಾಂಪಿಯನ್‌ಶಿಪ್‌ಗಳಲ್ಲಿ ಭಾಗವಹಿಸಿ 5 ಬಾರಿ ಪ್ರಥಮ ಸ್ಥಾನ, ರಾಜ್ಯ ಮಟ್ಟದ ಚಾಂಪಿಯನ್‌ಶಿಪ್‌ಗಳಲ್ಲೂ 5 ಬಾರಿ ಪ್ರಥಮ ಸ್ಥಾನ ಗಳಿಸಿದ್ದಾನೆ.
ಅಲ್ಲದೇ ಎನ್.ಡಿ. ಹರ್ಷಿತ್ ಮೈಸೂರು, ದಾವಣಗೆರೆ, ಹರಿಹರ, ಮಂಗಳೂರು, ಬೆಂಗಳೂರು, ಪಾಂಡಿಚೇರಿ ಮತ್ತು ಗೋವಾ ಮೊದಲಾದ ಕಡೆಗಳಲ್ಲಿ ನಡೆದ ಇಂಟರ್‌ನ್ಯಾಷನಲ್ ಚಾಂಪಿಯನ್‌ಶಿಪ್‌ಗಳಲ್ಲಿ ಭಾಗವಹಿಸಿ ಅನೇಕ ಬಹುಮಾನಗಳನ್ನು ಪಡೆದಿದ್ದ. 2014ರ ಜನವರಿಯಲ್ಲಿ ನೇಪಾಳದ ಕಠ್ಮಂಡುವಿನಲ್ಲಿ ನಡೆದ ಇಂಟರ್ ನ್ಯಾಷನಲ್ ಚಾಂಪಿಯನ್‌ಶಿಪ್‌ನಲ್ಲಿ ನೇಪಾಳ, ಶ್ರೀಲಂಕ, ಪಾಕಿಸ್ತಾನ, ಭೂತಾನ್ ಮತ್ತು ಬಾಂಗ್ಲಾದೇಶಗಳ ತಂಡಗಳನ್ನು ಎದುರಿಸಿ ತೃತೀಯ ಸ್ಥಾನ ಗಳಿಸಿದ್ದಾನೆ. ಹರ್ಷಿತ್‌ನನ್ನು ತರಬೇತುದಾರರಾದ ಅಬ್ದುಲ್, ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಶಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ,  ಕರಾಟೆ ಶಾಲೆಯ ವಿದ್ಯಾರ್ಥಿಗಳು, ಪೋಷಕರು ಅಭಿನಂದಿಸಿದ್ದಾರೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.