ಸ್ವಯಂ ರಕ್ಷಣೆ ತರಬೇತಿ
ಹಾಸನ: ಸಮಾಜದ ಸ್ವಾಸ್ಥ್ಯ ಕಾಪಾಡುವುದು ಎಲ್ಲರ ಜವಾಬ್ದಾರಿಯಾಗಿದ್ದು, ಕೆಲವು ಸಂದರ್ಭಗಳಲ್ಲಿ ಪೊಲೀಸರ ಅನುಪಸ್ಥಿತಿಯಲ್ಲಿ ತಾತ್ಕಾಲಿಕವಾಗಿ ನಿರ್ವಹಿಸಲು ನಾಗರಿಕ ಬಂದೂಕು ತರಬೇತಿ ಸಹಕಾರಿಯಾಗಲಿದೆ ಎಂದು ಜಿಲ್ಲಾ ವರಿಷ್ಠಾಧಿಕಾರಿ ರವಿ ಡಿ. ಚನ್ನಣ್ಣನವರ್ ಹೇಳಿದ್ದಾರೆ.ಪೊಲೀಸ್ ಪರೇಡ್ ಸಭಾಂಗಣದಲ್ಲಿ ಬುಧವಾರ ನಡೆದ ನಾಗರಿಕ ಬಂದೂಕು ತರಬೇತಿ ಹಾಗೂ ಹೆಣ್ಣು ಮಕ್ಕಳ ಸ್ವಯಂ ರಕ್ಷಣೆ ತರಬೇತಿ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪಾಶ್ಚಿಮಾತ್ಯ ದೇಶಗಳಲ್ಲಿ ಸೈನಿಕ ಸೇವೆ, ರಕ್ಷಣಾ ವ್ಯವಸ್ಥೆ, ನ್ಯಾಯಾಂಗ ವ್ಯವಸ್ಥೆ ಕುರಿತು ನಾಗರೀಕರಿಗೆ ಪರಿಚಯಿಸಲು ಔಪಚಾರಿಕ ವ್ಯವಸ್ಥೆ ಇದೆ. ಶೈಕ್ಷಣಿಕವಾಗಿ ಓದಿನ ರೂಪದಲ್ಲಿ ತಿಳಿದುಕೊಂಡಿದ್ದರೂ ಸಹ ಪ್ರಾತ್ಯಕ್ಷಿಕವಾಗಿ ಪರಿಚಯಿಸಬೇಕು ಎಂಬ ಆದೇಶ ನಮ್ಮಲ್ಲಿ ಇದ್ದರೂ ಸಹ ಕೆಲಸದ ಒತ್ತಡದಲ್ಲಿ ಪರಿಚಯಿಸಲು ಸಾಧ್ಯವಾಗುತ್ತಿರಲಿಲ್ಲ ಎಂದು ಹೇಳಿದರು. ಹೆಣ್ಣು ಮಕ್ಕಳು ಸ್ವಯಂ ರಕ್ಷಣೆ ಮಾಡಿಕೊಳ್ಳಲು ತರಬೇತಿ ಹಾಗೂ ನಾಗರಿಕರಿಗೆ ಬಂದೂಕು ತರಬೇತಿಯನ್ನು ನೀಡಬೇಕೆಂಬ ಸದುದ್ದೇಶದಿಂದ ಪೊಲೀಸ್ ಇಲಾಖೆ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು. ತಾವು ಕಲಿತದ್ದನ್ನು ಮನೆಯವರಿಗೆ ಹಾಗೂ ನೆರೆಹೊರೆಯವರಿಗೆ ತಿಳಿಸುವಂತಾಗಬೇಕೆಂದರು. ಸದರಿ ಕಾರ್ಯಕ್ರಮವನ್ನು ಮೂರು ತಿಂಗಳಿಗೊಮ್ಮೆ ಆಯೋಜಿಸಿ ನಾಗರಿಕರಿಗೆ ತರಬೇತಿ ನೀಡಲಾಗುವುದು ಎಂದರು. ಅಪರ ಪೊಲೀಸ್ ಅಧಿಕಾರಿ ಜೆ.ಕೆ. ರಶ್ಮಿ ಮಾತನಾಡಿ, ಆರೋಗ್ಯಕರ ಸಮಾಜ ನಿರ್ಮಾಣಕ್ಕಾಗಿ ಪೊಲೀಸ್ ಇಲಾಖೆ ವತಿಯಿಂದ ಅನೇಕ ವಿನೂತನ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದರು. ಡಿವೈಎಸ್ಪಿ ಪರಮೇಶ್ವರಪ್ಪ ಭೀಮಕ್ಕನವರ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

