ಹಾಸನ

ಇಂದು ತಾಪಂ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ

Published On :

ಹೊಳೆನರಸೀಪುರ: ಇಲ್ಲಿನ ತಾಪಂ ಅಧ್ಯಕ್ಷೆಯಾಗಿದ್ದ ಜೆಡಿಎಸ್‌ನ ಪುಷ್ಪಾಗೌಡೇಗೌಡ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಫೆ. 14ರಂದು ಚುನಾವಣೆ ನಡೆಯಲಿದೆ ಎಂದು ತಾ.ಪಂ ಕಾರ್ಯನಿರ್ವಹಣಾಧಿಕಾರಿ ತಮ್ಮಣ್ಣೇಗೌಡ ತಿಳಿಸಿದ್ದಾರೆ.
ಇಲ್ಲಿನ ತಾಲೂಕು ಪಂಚಾಯ್ತಿಯ 15ಸ್ಥಾನಗಳಿಗೆ ಕಳೆದ 2011ರಲ್ಲಿ ನಡೆದ ಚುನಾವಣೆಯಲ್ಲಿ ಜೆಡಿಎಸ್ 14 ಸ್ಥಾನಗಳನ್ನು ಗಳಿಸಿ ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿತ್ತು. ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದ ಅಧ್ಯಕ್ಷೆ ಸ್ಥಾನವನ್ನು ಸಂಕನಹಳ್ಳಿ ತಾಲೂಕು ಪಂಚಾಯ್ತಿ ಕ್ಷೇತ್ರದಿಂದ ಆಯ್ಕೆಗೊಂಡಿದ್ದ ಪುಷ್ಪಾಗೌಡೇಗೌಡ ಹಾಗೂ ಸಾಮಾನ್ಯ ಕ್ಷೇತ್ರದಿಂದ ಎಲೆಚಾಗಹಳ್ಳಿ ಕ್ಷೇತ್ರದಿಂದ ಜಯಗಳಿಸಿದ್ದ ನಂಜುಂಡಪ್ಪ ಅವರು  ಅಧ್ಯಕ್ಷೆ ಹಾಗೂ ಉಪಾಧ್ಯಕ್ಷರಾಗಿ ಆ. 2013ರಂದು ಅಧಿಕಾರ ಸ್ವೀಕರಿಸಿದ್ದರು.
ಆದರೆ, ಕೇವಲ 5 ತಿಂಗಳಷ್ಟೇ ಅಧಿಕಾರದಲ್ಲಿದ್ದ ಇವರು, ಇತ್ತೀಚಿನ ರಾಜಕೀಯ ಬೆಳವಣಿಗೆಯಲ್ಲಿ ತಮ್ಮ ಪಕ್ಷದ ನಾಯಕರ ಆಣತಿಯಂತೆ ಕೇವಲ ಐದು ತಿಂಗಳ ತಮ್ಮ ಅಧ್ಯಕ್ಷ ಗಾದಿಗೆ ಪುಷ್ಪಾಗೌಡೇಗೌಡ ಅವರು ರಾಜೀನಾಮೆ ಸಲ್ಲಿಸಿದ್ದರು. ಅದೇ ರೀತಿ ಇವರೊಂದಿಗೆ ಉಪಾಧ್ಯಕ್ಷರಾಗಿದ್ದ ನಂಜುಂಡಪ್ಪ ಅವರೂ ಕೂಡ ತಮ್ಮ ನಾಯಕರ ನಿರ್ದೇಶನದ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಇತ್ತೀಚೆಗೆ, ಉಪಾಧ್ಯಕ್ಷ ಸ್ಥಾನಕ್ಕೆ ಮಳಲಿ ತಾಪಂ ಕ್ಷೇತ್ರದ ಹಿರಿಯ ಸದಸ್ಯ ಡಿ. ಕೃಷ್ಣಪ್ಪ ಆಯ್ಕೆಯಾಗಿದ್ದರು. ಪುಷ್ಪಾಗೌಡೇಗೌಡ ಅವರಿಂದ ತೆರವಾದ ಸ್ಥಾನಕ್ಕೆ ಫೆ.14ರಂದು ಚುನಾವಣೆಯು ನಡೆಯಲಿದ್ದು, ಈ ಸ್ಥಾನಕ್ಕೆ ಈಗಾಗಲೇ ಬಿದರಕ್ಕ ತಾಪಂ ಸ್ಥಾನದಿಂದ ಆಯ್ಕೆಯಾಗಿರುವ ಕುಸುಮ ಅವರು ಅಧ್ಯಕ್ಷೆಯಾಗಿ ಅಧಿಕಾರ ಸ್ವೀಕರಿಸಲಿರುವುದು ಬಹುತೇಕ ಖಚಿತ ಎನ್ನಲಾಗಿದೆ. ಆದರೂ ಕಾನೂನಿನ ಪ್ರಕಾರ ಚುನಾವಣೆಯು ನಡೆದು ನಂತರವಷ್ಟೇ ಅಧ್ಯಕ್ಷೆಯನ್ನು ಘೋಷಿಸಬೇಕಿರುವ ಕಾರಣದಿಂದ ಫೆ. 14ರಂದು ಚುನಾವಣಾ ಪ್ರಕ್ರಿಯೆಗಳು ನಡೆಯಲಿದೆ ಎನ್ನಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.