ಹಾಸನ

ವೈಭವದ ರಥೋತ್ಸವ

Published On :

ಹೊಳೆನರಸೀಪುರ: ತಾಲೂಕಿನ ಹಳೇಕೋಟೆ ಹೋಬಳಿಗೆ ಸೇರಿದ ಮಾವಿನಕೆರೆಯ ಸ್ಥಿರವಾಸಿ ಇತಿಹಾಸ ಪ್ರಸಿದ್ಧಿ ಪಡೆದಿರುವ ಶ್ರೀ ಲಕ್ಷ್ಮೀವೆಂಕಟರಮಣ ಸ್ವಾಮಿಯವರ ಮಹಾರಥೋತ್ಸವವು ಅಪಾರ ಭಕ್ತ ಸಮೂಹದ ನಡುವೆ ಗುರುವಾರ ವಿಜೃಂಭಣೆಯಿಂದ ನಡೆಯಿತು. ಉತ್ಸವದ ವೈಭವವನ್ನು ಕಣ್ತುಂಬಿಕೊಳ್ಳಲು ರಾಜ್ಯದ ನಾನಾ ಕಡೆಗಳಿಂದ ಭಕ್ತಾದಿಗಳು ಆಗಮಿಸಿದ್ದರು.
ಉತ್ಸವ ಮೂರ್ತಿಯನ್ನು ದೇವಾಲಯದ ಸುತ್ತಲಿನ ನಾಲ್ಕು ಬೀದಿಗಳಲ್ಲಿ ಆಗಮಿಕರು ಮೆರವಣಿಗೆಯಲ್ಲಿ ಹೊತ್ತು ತಂದು ನಂತರ, ವಿವಿಧ ಪುಷ್ಪಗಳು ಹಾಗೂ ಬಣ್ಣ-ಬಣ್ಣದ ಬಟ್ಟೆಗಳಿಂದ ಅಲಂಕರಿಸಲಾಗಿದ್ದ ರಥದಲ್ಲಿ ಕುಳ್ಳಿರಿಸಿದರು. ಬಳಿಕ ನೆರೆದಿದ್ದ ಭಕ್ತಾಧಿಗಳು ಗೋವಿಂದ ನಾಮಸ್ಮರಣೆಯೊಂದಿಗೆ ರಥ ಎಳೆದರು. ಈ ಸಂದರ್ಭದಲ್ಲಿ ಮಹಿಳೆಯರು ಮಕ್ಕಳಲ್ಲದೇ ಅಬಾಲವೃದ್ಧರಾದಿಯಾಗಿ ಎಲ್ಲರೂ ತಮ್ಮ ಇಷ್ಟಾರ್ಥಗಳನ್ನು ನೆರವೇರಿಸುವಂತೆ ಶ್ರೀ ಲಕ್ಷ್ಮಿವೆಂಕಟರಮಣ ಸ್ವಾಮಿಯನ್ನು ಪ್ರಾರ್ಥಿಸಿ ರಥಕ್ಕೆ ಹಣ್ಣು- ಜವನವನ್ನು ಎಸೆದು ಕೃತಾರ್ಥರಾದರು. ರಥೋತ್ಸವಕ್ಕೂ ಮುನ್ನ ಮತ್ತು ರಥೋತ್ಸವದ ನಂತರದಲ್ಲೂ ಭಕ್ತಾದಿಗಳು ಸರದಿಲ್ಲಿ ದೇವರ ದರ್ಶನ ಪಡೆದರು.
ಉದ್ಭವ ರಂಗನಾಥ ಸ್ವಾಮಿಗೂ ಪೂಜೆ
ಇದೇ ಸಂದರ್ಭದಲ್ಲಿ ಹಳೇಕೋಟೆ ಬಳಿಯಲ್ಲಿನ ಬೆಟ್ಟದ ಉದ್ಭವ ರಂಗನಾಥಸ್ವಾಮಿಗೂ ವಿಶೇಷ ಪೂಜಾ ಕಾರ್ಯಗಳು ನೆರವೇರಿದವು. ರಥೋತ್ಸವದ ಅಂಗವಾಗಿ ಫೆ. 8ರಿಂದಲೇ ದೇವಾಲಯದಲ್ಲಿ ಗರುಡೋತ್ಸವ, ಶೇಷವಾಹನೋತ್ಸವ, ಪ್ರಹ್ಲಾದ ಪರಿಪಾಲನೋತ್ಸವ, ಸಿಂಹವಾಹನೋತ್ಸವ, ಶಯನೋತ್ಸವ ಮೊದಲಾದ ಪೂಜೆಗಳು ನೆರವೇರಿದವು.
ರಥ ಎಳೆದ ರೇವಣ್ಣ
ರಥೋತ್ಸವದಲ್ಲಿ ಶಾಸಕ ಎಚ್.ಡಿ. ರೇವಣ್ಣ ದೇವರ ದರ್ಶನ ಪಡೆದು ರಥ ಎಳೆದರು. ಇವರೊಂದಿಗೆ ತಹಸೀಲ್ದಾರ್ ಆರ್.ಬಿ. ಶಿವಶಂಕರಪ್ಪ, ಜಿ.ಪಂ ಸದಸ್ಯ ಎಚ್.ಎನ್.ದೇವೇಗೌಡ (ಪಾಪಣ್ಣಿ) ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.