ರೈತನ ಮೇಲೆ ಸಲಗ ದಾಳಿ
ಆಲೂರು: ತಾಲೂಕಿನ ಕೆಂಚಮ್ಮನ ಹೊಸಕೋಟೆ ಕೋಬಳಿಯ ಸುತ್ತಮುತ್ತಲ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ಕಾಡಾನೆ ಹಿಡಿಯುವ ಕಾರ್ಯಾಚರಣೆ ನಡೆಯುತ್ತಿರುವ ವೇಳೆ ಒಂಟಿ ಸಲಗದ ದಾಳಿಯಿಂದಾಗಿ ವ್ಯಕ್ತಿಯೊಬ್ಬರು ಗಾಯಗೊಂಡಿರುವ ಘಟನೆ ಮಣಿಪುರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಅಪ್ಪಣ್ಣ (38) ಗಾಯಗೊಂಡ ವ್ಯಕ್ತಿ. ಶುಕ್ರವಾರ ಮಧ್ಯಾಹ್ನ ತೋಟದಲ್ಲಿ ಕಟ್ಟಿಗೆ ತರಲು ತೋಟಕ್ಕೆ ಹೋಗಿದ್ದರು. ಈ ಸಂದರ್ಭದಲ್ಲಿ ಏಕಾಏಕಿ ಎದುರಾದ ಕಾಡಾನೆ ಅಟ್ಟಿಸಿಕೊಂಡು ಬಂದಿದ್ದರಿಂದ ಓಡಿ ತಪ್ಪಿಸಿ ಕೊಳ್ಳುವ ಭರದಲ್ಲಿ ಹಳ್ಳಕ್ಕೆ ಬಿದ್ದಿದ್ದರಿಂದ ಕೂದಲೆಳೆಯ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಅವರ ತಲೆ, ಮುಖ, ಕೈ ಕಾಲುಗಳಿಗೆ ಗಾಯಗಳಾಗಿದ್ದು, ಘಟನೆಯಿಂದ ಅತ್ಯಂತ ಗಾಬರಿಗೊಂಡಿರುವುದರಿಂದಾಗಿ ಮಾತನಾಡದ ಸ್ಥಿತಿ ತಲುಪಿದ್ದ ಅವರಿಗೆ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ನಂತರ ಹೆಚ್ಚಿನ ಚಿಕಿತ್ಸೆಗೆ ಹಾಸನದ ಆಸ್ಪತ್ರೆಗೆ ದಾಖಲಿಸಲಾಯಿತು. ತಹಸೀಲ್ದಾರ್ ಶಾರದಾಂಬ ಆಸ್ಪತ್ರೆಗೆ ತೆರಳಿ ಮನೆಯವರಿಗೆ ಧೈರ್ಯ ತುಂಬಿದರು. ತಲೆಗೆ ಹೆಚ್ಚು ಪೆಟ್ಟು ಬಿದ್ದಿದ್ದರಿಂದ ಹೆಚ್ಚಿನ ಚಿಕಿತ್ಸೆ ಕೊಡಿಸಲು ಆರೋಗ್ಯಾಧಿಕಾರಿ ಡಾ.ತಿಮ್ಮಯ್ಯ ಅವರಿಗೆ ತಿಳಿಸಿದರು. ಅಪ್ಪಣ್ಣ ಅವರ ತಂದೆ ಪಾಪಣ್ಣ 6 ವರ್ಷಗಳ ಹಿಂದೆ ಕಾಡಾನೆಗೆ ಸಿಲುಕಿ ಮೃತಪ್ಟಟ್ಟಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

