'ಆರೋಗ್ಯವಂತ ವ್ಯಕ್ತಿಯಿಂದ ಸಾಧನೆ ಸಾಧ್ಯ'
ಅರಕಲಗೂಡು: ಆರೋಗ್ಯವಂತ ಮನುಷ್ಯನಿಂದ ಕುಟುಂಬದ ಮತ್ತು ದೇಶದ ಅಭಿವೃದ್ಧಿಗೆ ಪೂರಕವಾಗುವುದು. ಆರೋಗ್ಯ ಇಲ್ಲದ ವ್ಯಕ್ತಿಯಿಂದ ಯಾವ ಸಾಧನೆಯೂ ಸಾಧ್ಯವಿಲ್ಲ. ಮನುಷ್ಯ ಈ ನಿಟ್ಟಿನಲ್ಲಿ ಜಾಗೃತಿ ಹೊಂದಿ ಆರ್ಥಿಕ ಸಂಪತ್ತಿಗಿಂತ ಆರೋಗ್ಯ ಸಂಪತ್ತನ್ನು ಗಳಿಸುವತ್ತ ಚಿಂತಿಸಬೇಕಿದೆ ಎಂದು ಆರೋಗ್ಯ ಶಿಕ್ಷಣಾಧಿಕಾರಿ ವೆಂಕಟೇಶ್ ತಿಳಿಸಿದರು.
ತಾಲೂಕಿನ ಬೈಚನಹಳ್ಳಿ ಸಮುದಾಯ ಭವನದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿ ಹಮ್ಮಿಕೊಳ್ಳಲಾಗಿದ್ದ ಸ್ವಾಸ್ತ್ಯ ಕುಟುಂಬದ ಮಾಹಿತಿ ಕಾರ್ಯಕ್ರಮದಲ್ಲಿ ಮಾತನಾಡಿ,ಹೆಣ್ಣು ಮತ್ತು ಗಂಡು ಮಕ್ಕಳು ತೀರಾ ಚಿಕ್ಕವಯಸ್ಸಿನಲ್ಲಿ ಮಕ್ಕಳನ್ನು ಹೊಂದುವುದರಿಂದ ಆರೋಗ್ಯದಲ್ಲಿ ಅನೇಕ ಬದಲಾವಣೆ ಕಂಡುಬರುತ್ತದೆ. ಹೆಣ್ಣಿಗೆ ಕನಿಷ್ಟ 22 ವರ್ಷ ತುಂಬಿದ ಮೇಲೆ ಮಕ್ಕಳನ್ನು ಪಡೆದರೆ ಯಾವುದೇ ಅನಾರೋಗ್ಯ ಸಮಸ್ಯೆ ಕಾಡುವುದಿಲ್ಲ ಎಂದು ಸಲಹೆ ನೀಡಿದರು.
ಆರೋಗ್ಯಾಧಿಕಾರಿ ಡಾ.ರಾಜೇಂದ್ರ ಮಾತನಾಡಿ, ಇತ್ತೀಚೆಗೆ ತಾಂತ್ರಿಕ ಹಾಗೂ ವೈಜ್ಞಾನಿಕ ವಿಚಾರಗಳು ಪ್ರತಿ ಕುಟುಂಬಕ್ಕೆ ತಲುಪುತ್ತಿದ್ದು, ಇವುಗಳನ್ನು ಸಮರ್ಪಕವಾಗಿ ಬಳಸಿಕೊಂಡು ಆರೋಗ್ಯದ ಕಡೆ ಹೆಚ್ಚಿನ ಕಾಳಜಿ ಹೊಂದಬೇಕಿದೆ. ಅಲ್ಲದೆ ಮಹಿಳೆಯರಲ್ಲಿ ಹಲವು ವಿಚಾರಗಳ ಬಗ್ಗೆ ಅರಿವು ಮತ್ತು ಜಾಗೃತಿ ಮೂಡಿಸುತ್ತಿರುವ ಅನೇಕ ಸ್ವಯಂ ಸೇವಾ ಸಂಸ್ಥೆಗಳ ಕಾರ್ಯ ಶ್ಲಾಘನೀಯ ಎಂದು ಹೇಳಿದರು.
ಜ್ಞಾನ ವಿಕಾಸ ಕಾರ್ಯಕ್ರಮದ ಸಯೋಜಕಿ ರೇಣುಕಾ,ವಲಯ ಮೇಲ್ವಿಚಾರಕಿ ಶ್ವೇತಾ,ಮಹಿಳೆಯರಿಗೆ ಅನೇಕ ಉಪಯುಕ್ತ ಕಾರ್ಯಕ್ರಮಗಳು ಹಾಗೂ ಯೋಜನೆಗಳು ತಮ್ಮ ಬಳಿಯೇ ಬರುತ್ತಿದ್ದು, ಇದನ್ನು ಸದುಪಯೋಗಪಡಿಸಿಕೊಂಡು ಸ್ವಾವಲಂಬಿ ಬದುಕು ರೂಪಿಸಿಕೊಳ್ಳಿ ಎಂದು ಕಿವಿಮಾತು ಹೇಳಿದರು.
ಶಿಕ್ಷಕಿ ವೀಣಾ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಮಹಿಳಾ ಸಂಘದ ಅಧ್ಯಕ್ಷೆ ಅನಸೂಯಮ್ಮ, ಸೇವಾ ಪ್ರತಿನಿಧಿ ವೀಣಾ ಮತ್ತಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

