ಬಿಜೆಪಿಯಿಂದ 'ನಿಮ್ಮ ಧ್ವನಿ, ನಿಮ್ಮ ಪ್ರಣಾಳಿಕೆ' ಕಾರ್ಯಕ್ರಮ
ಬೇಲೂರು: ಜನತೆಯ ಅಭಿಪ್ರಾಯದಂತೆ ಪ್ರಣಾಳಿಕೆಯನ್ನು ರೂಪಿಸಿ ದೇಶವನ್ನು ಅಭಿವೃದ್ಧಿ ಪಥದಲ್ಲಿ ನಡೆಸಲು ಬಿಜೆಪಿ ನಿಮ್ಮ ಧ್ವನಿ, ನಮ್ಮ ಪ್ರಣಾಳಿಕೆಯಂತಹ ಕಾರ್ಯಕ್ರಮವನ್ನು ರೂಪಿಸಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಬೆಣ್ಣೂರು ರೇಣುಕಮಾರ್ ತಿಳಿಸಿದರು.
2014ರ ಲೋಕಸಭಾ ಚುನಾವಣೆಗಾಗಿ ಪಟ್ಟಣದ ಶ್ರೀ ಚನ್ನಕೇಶವಸ್ವಾಮಿ ದೇವಸ್ಥಾನ ರಸ್ತೆಯಲ್ಲಿ ತಾಲೂಕು ಯುವ ಮೋರ್ಚಾ ಹಾಗೂ ಬಿಜೆಪಿ ಘಟಕದಿಂದ ಶುಕ್ರವಾರ ಹಮ್ಮಿಕೊಂಡಿದ್ದ ನಿಮ್ಮ ಧ್ವನಿ, ನಮ್ಮ ಪ್ರಣಾಳಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ತಾಲೂಕು ಬಿಜೆಪಿ ಅಧ್ಯಕ್ಷ ಅಡಗೂರು ಆನಂದ್ ಮಾತನಾಡಿ, ಪಟ್ಟಣದಲ್ಲಿ ನಿಮ್ಮ ಧ್ವನಿ ನಮ್ಮ ಪ್ರಣಾಳಿಕೆಗೆ ಜನತೆ ಉತ್ತಮವಾಗಿ ಸ್ಪಂದನೆ ನೀಡುತ್ತಿದ್ದಾರೆ. ಭಾರತದ ಪ್ರಜೆಯಾಗಿ ನಮ್ಮ ಕಾಳಜಿ ಯಾವುದರ ಮೇಲಿದೆ ಹಾಗೂ ದೇಶದ ಅಭಿವೃದ್ಧಿಗೆ ವಿಜ್ಞಾನ, ತಂತ್ರಜ್ಞಾನ, ವಿದೇಶ ವ್ಯವಹಾರ, ಜಲ ನಿರ್ವಹಣೆ, ಶಿಕ್ಷಣ, ಪ್ರವಾಸೋದ್ಯಮ, ರಾಷ್ಟ್ರೀಯ ಸುರಕ್ಷತೆ ಸೇರಿದಂತೆ ಹಲವಾರು ವಿಷಯಗಳು ಎಷ್ಟು ಪೂರಕವಾಗಿದೆ ಎಂಬುದನ್ನು ಸಾರ್ವಜನಿಕರು ಸೂಚಿಸಿದ ಆಧಾರದ ಮೇಲೆ ಪ್ರಣಾಳಿಕೆ ರೂಪಿಸಲು ಮುಂದಾಗಿದ್ದು ತಾಲೂಕಿನಾದ್ಯಂತ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವುದಾಗಿ ತಿಳಿಸಿದರು.
ತಾಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿ ಬೆಣ್ಣೂರು ಪೂರ್ಣೇಶ್, ಉಪಾಧ್ಯಕ್ಷ ತಂಡೆಕೇರೆ ರಮೇಶ್, ಯುವಮೋರ್ಚಾ ಅಧ್ಯಕ್ಷ ಪ್ರದೀಪ್, ಕಾರ್ಯದರ್ಶಿ ಶಿವಕುಮಾರ್, ಶ್ರೀನಿವಾಸ್ ಹಾಗೂ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

