ಹಾಸನ

ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾಗಿ ಶಂಕರಪ್ಪ ಆಯ್ಕೆ

Published On :

ಅರಸೀಕೆರೆ: ತಾಲೂಕಿನ ಕಣಕಟ್ಟೆ ಹಾಲು ಉತ್ಪಾದಕರ ಸಂಘದ ನೂತನ ಅಧ್ಯಕ್ಷರಾಗಿ ಕೆ.ಹೆಚ್. ಶಂಕರಪ್ಪ, ಉಪಾಧ್ಯಕ್ಷರಾಗಿ ಕೆ. ನಾಗಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹಿಂದಿನ ಅಧ್ಯಕ್ಷರಾಗಿದ್ದ ಕೆ.ಎಂ. ಸುಬ್ಬರಾಯ ಅವರ ರಾಜಿನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಇಂದು ಚುನಾವಣೆ ನಿಗದಿ ಮಾಡಲಾಗಿತ್ತು. ಚುನಾವಣಾ ಪ್ರಕ್ರಿಯೆಯಲ್ಲಿ 3 ಮಂದಿನ ನಾಮಪತ್ರ ಸಲ್ಲಿಸಿದ್ದರಾದರೂ 2 ನಾಮಪತ್ರಗಳು ತಿರಸ್ಕೃತವಾದ ಕಾರಣ ಶಂಕರಪ್ಪ ಅವಿರೋಧವಾಗಿ ಆಯ್ಕೆಯಾದರು. ಮಾಜಿ ಅಧ್ಯಕ್ಷ ಕೆ.ಎಂ.ಸುಬ್ಬರಾಯ, ನೂತನ ಅಧ್ಯಕ್ಷ ಶಂಕರಪ್ಪನವರಿಗೆ ಮಾಲಾರ್ಪಣೆ ಮಾಡಿ ಅಧಿಕಾರ ಹಸ್ತಾಂತರಿಸಿದರು.

ಗ್ರಾಪಂ ಅಧ್ಯಕ್ಷರಾಗಿ ಶ್ಯಾಮಲಾ ಆಯ್ಕೆ
ಹಾಸನ: ಮೊಸಳೆಹೊಸಳ್ಳಿ ಗ್ರಾಮ ಪಂಚಾಯ್ತಿ ಅಧ್ಯಕ್ಷರಾಗಿ ಶ್ಯಾಮಲಾ ಮಂಜುನಾಥ ಮತ್ತು ಉಪಾಧ್ಯಕ್ಷರಾಗಿ ಮಲ್ಲೇಗೌಡ ಅವರು ಆಯ್ಕೆಯಾಗಿರುತ್ತಾರೆ ಎಂದು ಚುನಾವಣಾಧಿಕಾರಿ ಹಾಗೂ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಶಿವಪ್ಪ ಅವರು ತಿಳಿಸಿದ್ದಾರೆ.

ಇಂದು ಕಂದಾಯ ಸಚಿವರ ಪ್ರವಾಸ
ಹಾಸನ: ರಾಜ್ಯ ಕಂದಾಯ ಸಚಿವರಾದ ವಿ. ಶ್ರೀನಿವಾಸ ಪ್ರಸಾದ್ ಅವರು ಫೆ. 16ರಂದು ಜಿಲ್ಲೆಗೆ ಆಗಮಿಸುವ ಅವರು ಬೆಳಿಗ್ಗೆ 10 ಗಂಟೆಗೆ ಗುಡ್ಡನಹಳ್ಳಿಯಲ್ಲಿ ಜರುಗುವ ತಂಬಾಕು ಹರಾಜು ಮಾರುಕಟ್ಟೆ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಸಮಾಜ ಕಲ್ಯಾಣ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಹೊಳೆನರಸೀಪುರ ತಾಲ್ಲೂಕು ಎಸ್.ಅಂಕನಹಳ್ಳಿಯಲ್ಲಿ ಫೆ. 16ರಂದು ಬೆಳಿಗ್ಗೆ 9ಕ್ಕೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ನೂತನ ಕಟ್ಟಡ ಉದ್ಘಾಟನಾ ಸಮಾರಂಭ ನಡೆಯಲಿದೆ. ಮಾಜಿ ಪ್ರಧಾನಿ ಹಾಗೂ ಲೋಕಸಭಾ ಸದಸ್ಯ ಎಚ್.ಡಿ. ದೇವೇಗೌಡರು ಶಾಲಾ ಕಟ್ಟಡ ಉದ್ಘಾಟನೆ ನೆರವೇರಿಸುವರು. ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಎಚ್.ಆಂಜನೇಯ ಅವರು ವಸತಿ ನಿಲಯದ ಕಟ್ಟಡವನ್ನು ಉದ್ಘಾಟಿಸುವರು. ಶಾಸಕ ಎಚ್.ಡಿ. ರೇವಣ್ಣ ಅಧ್ಯಕ್ಷತೆ ವಹಿಸುವರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.