'ಜಾನಪದದಿಂದ ನಾಡು, ನುಡಿ ಉಳಿವು'
ಬೇಲೂರು: ನಾಡು, ನುಡಿ, ಸಂಸ್ಕೃತಿ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಜಾನಪದ ಕಾರ್ಯಕ್ರಮಗಳು ಅತಿಮುಖ್ಯ. ಇಂದಿನ ಪೀಳಿಗೆ ಪಾಶ್ಚಿಮಾತ್ಯ ಸಂಸ್ಕೃತಿಗೆ ಮಾರುಹೋಗಿ ನಮ್ಮ ಸಂಸ್ಕೃತಿಯನ್ನು ಮರೆಯುತ್ತಿದ್ದಾರೆ.
ನಮ್ಮ ಭಾರತೀಯ ಸಂಸ್ಕೃತಿ ಉಳಿದು ಬೆಳೆದಿರುವುದೇ ಜನಪದದಿಂದ ಎಂದು ಹಗರೆ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ನಂಜೇಗೌಡ ಹೇಳಿದರು.
ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಸನ ಹಾಗೂ ಹಗರೆ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಹಾಡಿರಿ ರಾಗಗಳ ಕಾರ್ಯಕ್ರಮದ ಅಂಗವಾಗಿ ಕಲಾವಿದರಾದ ದೀಪ ಮತ್ತು ಸಂಗಡಿಗರಿಂದ ನಡೆದ ಜಾನಪದ ಗೀತಗಾಯನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ, ನಮ್ಮ ದೇಶಿಯ ಮೂಲ ಕಲೆಯಾದ ಜಾನಪದವು ಎಲ್ಲದಕ್ಕೂ ತಾಯಿಬೇರು ಇದ್ದಂತೆ. ಅನ್ಯರ ಸಂಸ್ಕೃತಿಯತ್ತ ಒಲವು ತೋರುವ ಮುನ್ನ ನಮ್ಮ ಸಂಸ್ಕೃತಿಯ ಮಹತ್ವವನ್ನು ಅರಿತು ಬಾಳಬೇಕಾಗಿದೆ ಎಂದರು.
ಸಾಹಿತಿ ಕೊಟ್ರೇಶ್ ಎಸ್. ಉಪ್ಪಾರ್, ಎಚ್. ಡಿ ಸೋಮೇಶ್, ದೇವರಾಜ್, ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಕುಮಾರ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ದೀಪ ಮತ್ತು ಸಂಗಡಿಗರು, ಜಾನಪದ ಗೀತಗಾಯನ ನಡೆಸಿಕೊಟ್ಟರು.
ಇದೇ ಸಂದರ್ಭದಲ್ಲಿ ಕಾಲೇಜಿನ ಸಿಬ್ಬಂದಿ ಮಹಾದೇವ್, ವೇದಾವತಿ, ಕೃಷ್ಣಮೂರ್ತಿ, ಚಂದ್ರೇಗೌಡ, ಚಂದ್ರಿಕಾ, ಸೌಭಾಗ್ಯ ಇತರರು ಇದ್ದರು. ಉಪನ್ಯಾಸಕರಾದ ಮಹದೇವ್ ಕಾರ್ಯಕ್ರಮ ನಿರ್ವಹಣೆ ಮಾಡಿದರು, ಕೃಷ್ಣಮೂರ್ತಿ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

