ಹಾಸನ

'ನಾಯಕತ್ವ ಗುಣ ಬೆಳೆಸಿಕೊಳ್ಳಿ'

Published On :

ಹೊಳೆನರಸೀಪುರ: ಇಂದಿನ ವಿದ್ಯಾರ್ಥಿಗಳು ಪಠ್ಯದ ಜೊತೆಯಲ್ಲಿ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವುದರ ಮೂಲಕ ನಾಯಕತ್ವದ ಗುಣಗಳನ್ನು ಬೆಳಸಿಕೊಳ್ಳುವುದು ಹೆಚ್ಚು ಅಗತ್ಯವಾಗಿದೆ ಎಂದು ಮೈಸೂರು ವಿಶ್ವವಿದ್ಯಾನಿಲಯದ ವಾಣಿಜ್ಯಶಾಸ್ತ್ರದ ಸಹ ಪ್ರಾಧ್ಯಾಪಕ ಡಾ.ಬಿ. ನಾಗರಾಜು ಕರೆ ನೀಡಿದ್ದಾರೆ.  
ತಾಲೂಕಿನ ಪುಡವಲಹಿಪ್ಪೆಯಲ್ಲಿ ಹೆಚ್.ಡಿ. ದೇವೇಗೌಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಹಾಸನದ ನೆಹರು ಯುವ ಕೇಂದ್ರ, ಶ್ರೀವೀರಭದ್ರೇಶ್ವರ ಯುವಕ ಸಂಘ ಮತ್ತು ಹೆಚ್.ಡಿ. ದೇವೇಗೌಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆಶ್ರಯದಲ್ಲಿ ಇತ್ತೀಚೆಗೆ ಹಮ್ಮಿಕೊಳ್ಳಲಾಗಿದ್ದ ಯುವ ಮುಂದಾಳತ್ವ ಹಾಗೂ ಸಮುದಾಯ ಅಭಿವೃದ್ಧಿ ಕುರಿತ ಮೂರು ದಿನಗಳ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಎಂ.ಕಾಂ ಸ್ನಾತಕೋತ್ತರ ವಿಭಾಗದ ಸಂಯೋಜಕರು ಹಾಗೂ ಸಹಾಯಕ ಪ್ರಾಧ್ಯಾಪಕರಾದ ಟಿ.ಆರ್.ತ್ರಿಣೇಶ್, ವಾಣಿಜ್ಯ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಪಿ.ನಂದನ್, ಸಹಾಯಕ ಪ್ರಾಧ್ಯಾಪಕರಾದ ಬಿ.ಎಚ್.ಶ್ರೀನಿವಾಸ.ಬಿ.ಹೆಚ್, ಎನ್.ಟಿ.ಶ್ರೀನಿವಾಸ ಇದ್ದರು. ವಿದ್ಯಾರ್ಥಿ ಚೇತನ್ ಪ್ರಾರ್ಥಿಸಿದರು. ಮಿಲನ ಸ್ವಾಗತಿಸಿದರು, ಸಿ.ಬಿ.ಅಂಬಿಕಾ ವಂದಿಸಿದರು. ಕಾರ್ಯಕ್ರಮದ ನಿರೂಪಿಸಿದರು.

ಸಕ್ಕರೆ ಉಚಿತ ವಿತರಣೆ
ಚನ್ನರಾಯಪಟ್ಟಣ: ತಾಲೂಕಿನ ಶ್ರೀನಿವಾಸಪುರ ಹೇಮಾವತಿ ಸಹಕಾರ ಸಕ್ಕರೆ ಕಾರ್ಖಾನೆಯ ಷೇರುದಾರರಿಗೆ 25 ಕೆಜಿ ಸಕ್ಕರೆಯನ್ನು ಉಚಿತವಾಗಿ ನೀಡುವ ಕಾರ್ಯಕ್ರಮಕ್ಕೆ ಶಾಸಕ ಸಿ.ಎನ್. ಬಾಲಕೃಷ್ಣ ಚಾಲನೆ ನೀಡಿದರು.
ಹೇಮಾವತಿ ಸಹಕಾರ ಸಕ್ಕರೆ ಕಾರ್ಖಾನೆಯನ್ನು ಖಾಸಗಿಯವರಿಗೆ ಗುತ್ತಿಗೆ ನೀಡಿದ ಹಿನ್ನಲೆಯಲ್ಲಿ ಗುತ್ತಿಗೆದಾರರಿಂದ ಸಂಗ್ರಹವಾದ ಹಣದಿಂದ 24500 ಶೇರುದಾರರಿಗೆ 25 ಕೆಜಿ ಸಕ್ಕರೆಯನ್ನು ಉಚಿತವಾಗಿ ನೀಡುವ ಕಾರ್ಯಕ್ರಮಕ್ಕೆ ಪಟ್ಟಣದ ಕೃಷಿ ಪತ್ತಿನ ಸಹಕಾರ ಸಂಘ ಹಾಗೂ ಕಲಸಿಂದ ಕೃಷಿ ಪತ್ತಿನ ಸಹಕಾರ ಸಂಘದ ಕಟ್ಟಡದಲ್ಲಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಶಾಸಕ ಸಿ.ಎನ್. ಬಾಲಕೃಷ್ಣ ಮಾತನಾಡಿ, ಮುಂದಿನ ದಿನಗಳಲ್ಲಿ ಕಾರ್ಖಾನೆಗೆ ಬಂದ ಲಾಭಾಂಶವನ್ನು ಷೇರುದಾರರಿಗೆ ನೀಡಲಾಗುವುದು ಎಂದು ತಿಳಿಸಿದರು.
ಹೇಮಾವತಿ ಸಹಕಾರ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಮಂಜುನಾಥ್ ಮಾತನಾಡಿ, 24,500 ಶೇರುದಾರರಿಗೆ ಸಕ್ಕರೆ ನೀಡಲು ಚೀಲಗಳಲ್ಲಿ ಸಕ್ಕರೆಯನ್ನು ಆಯಾ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ನೀಡಿ ದಿನಾಂಕವನ್ನು ನಿಗದಿ ಮಾಡಿ ರೈತರಿಗೆ ತಿಳಿಸಲಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಕಾರ್ಖಾನೆ ನಿರ್ದೇಶಕ ವೆಂಕಟೇಶ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.