'ಶಾಸಕರ ನಿರ್ಲಕ್ಷ್ಯದಿಂದ ಅಭಿವೃದ್ಧಿ ಕುಂಠಿತ'
ರಾಮನಾಥಪುರ: ಕ್ಷೇತ್ರದ ಶಾಸಕರ ನಿರ್ಲಕ್ಷ್ಯ ಧೋರಣೆಯಿಂದಾಗಿ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗಿದೆ ಎಂದು ತಾಲ್ಲೂಕು ಪೊಟ್ಯಾಟೋ ಕ್ಲಬ್ ಅಧ್ಯಕ್ಷ ಎಚ್. ಯೋಗಾ ರಮೇಶ್ ಟೀಕಿಸಿದ್ದಾರೆ.
ರಾಮನಾಥಪುರ ಭಾಗ್ಯಶ್ರೀ ಸಮುದಾಯ ಭವನದಲ್ಲಿ ನಡೆದ ಪೊಟ್ಯಾಟೋ ಕ್ಲಬ್ ವತಿಯಿಂದ ನಡೆದ ಕ್ಷೇತ್ರದ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸುವ ಸಭೆಯಲ್ಲಿ ಮಾತನಾಡಿದ ಅವರು, ತಾಲ್ಲೂಕಿನ ಎದುರಾಗಿರುವ ಸಮಸ್ಯೆಗಳ ನಿವಾರಣೆಗೆ ಸಂಘಟಿತ ಹೋರಾಟ ಕೈಗೊಳ್ಳುವ ಮೂಲಕ ಸದಸ್ಯರ ನೋವಿಗೆ ಸ್ಪಂದಿಸುವುದಾಗಿ ತಿಳಿಸಿದರು.
ತಾಲೂಕಿನಲ್ಲಿ ನೀರಾವರಿ ಯೋಜನೆಗಳು ಕುಂಠಿತಗೊಂಡು, ರಸ್ತೆಗಳೆಲ್ಲ ಪೂರ್ತಿ ಹದಗೆಟ್ಟಿವೆ. ಬರುವ ದಿನಗಳಲ್ಲಿ ಶಾಸಕರ ಅಡಳಿತ ವೈಫಲ್ಯ ಖಂಡಿಸಿ ಕ್ಷೇತ್ರದ ಅಭಿವೃದ್ಧಿಗಾಗಿ ಹೋರಾಟದ ಮೂಲಕ ಶ್ರಮಿಸುವುದಾಗಿ ತಿಳಿಸಿದರು.
ತಾಲ್ಲೂಕಿನಲ್ಲಿ ರಾಜಕೀಯ ಬದಲಾವಣೆಗಾಗಿ ಕಳೆದ ಚುನಾವಣೆಗೆ ಸ್ಪರ್ಧಿಸಬೇಕಾಯಿತು. ನಾನು ಸ್ವತಂತ್ರ್ಯ ಅಭ್ಯರ್ಥಿಯಾಗಿ ಕಣಕ್ಕಿಳಿದ ನನಗೆ 32 ಸಾವಿರಕ್ಕೂ ಅಧಿಕ ಮತ ನೀಡಿ ರಾಜಕೀಯ ನೆಲೆ ಒದಗಿಸಿಕೊಟ್ಟ ಈ ತಾಲ್ಲೂಕಿನ ಮತದಾರರ ಋಣ ತೀರಿಸುವ ಸಲುವಾಗಿ ಕ್ಷೇತ್ರದ ಕಾರ್ಯಕರ್ತರ ಸಮಸ್ಯೆಗೆ ಸ್ಪಂದಿಸುವುದಾಗಿ ಹೇಳಿದರು.
ಬಸವಪಟ್ಟಣ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಬಿ.ಕೆ. ಕುಮಾರಸ್ವಾಮಿ, ಕೊಣನೂರು ಗ್ರಾಪಂ ಮಾಜಿ ಸದಸ್ಯ ಇಸ್ಮಾಯಿಲ್ ವಾಸೀಂ, ಪೊಟ್ಯಾಟೋ ಕ್ಲಬ್ ಸದಸ್ಯರಾದ ಹನ್ಯಾಳು ಈಶ್ವರೇಗೌಡ, ಚಂದ್ರೇಗೌಡ, ಹಿಂದಲಹಳ್ಳಿ ನಾಗೇಶ್, ಕೊಣನೂರು ದೇವರಾಜ್, ಸ್ವಾಮಿಗೌಡ, ಕೃಷ್ಣೇಗೌಡ ಮುಂತಾದವರು ಉಪಸ್ಥಿತರಿದ್ದರು. ಬಸವಪಟ್ಟಣ ಶ್ರೀಕಂಠ ಸ್ವಾಗತಿಸಿ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

