'ದೇಶದ ಅಭಿವೃದ್ಧಿ ಆಳುವ ನಾಯಕರ ಮೇಲೆ ಅವಲಂಬಿತ'
ಹೊಳೆನರಸೀಪುರ: ಪ್ರತಿಯೊಂದು ದೇಶದ ಅಭಿವೃದ್ಧಿ ಆಯಾ ದೇಶಗಳನ್ನು ಆಳುವ ನಾಯಕರ ನಾಯಕತ್ವದ ಗುಣವನ್ನು ಆಧರಿಸಿದೆ ಎಂದು ಮೈಸೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ವಾಣಿಜ್ಯಶಾಸ್ತ್ರ ವಿಭಾಗದಲ್ಲಿ ಸಹ ಪ್ರಾಧ್ಯಾಪಕರಾಗಿರುವ ಡಾ. ನಾಗೇಂದ್ರಬಾಬು ತಿಳಿಸಿದರು.
ತಾಲೂಕಿನ ಪಡುವಲಹಿಪ್ಪೆಯ ಹೆಚ್.ಡಿ. ದೇವೇಗೌಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ನೆಹರು ಯುವ ಕೇಂದ್ರ, ಶ್ರೀ ವೀರಭದ್ರೇಶ್ವರ ಯುವ ಸಂಘದ ಆಶ್ರಯದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಯುವ ಮುಂದಾಳತ್ವ ಹಾಗೂ ಸಮುದಾಯ ಅಭಿವೃದ್ಧಿ ಕುರಿತ ಮೂರು ದಿನಗಳ ತರಬೇತಿಯ 2ನೇ ದಿನದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸಂಸ್ಥೆ ಅಭಿವೃದ್ಧಿಗೂ ನಾಯಕತ್ವ ಕಾರಣ: ಯಾವುದೇ ಉದ್ದಿಮೆ, ಸಂಸ್ಥೆ, ಸಂಘಟನೆ, ವ್ಯವಸ್ಥೆ ಅಥವಾ ದೇಶ ಅಭಿವೃದ್ಧಿ ಆಗಬೇಕಾದರೆ ಅದನ್ನು ಮುನ್ನಡೆಸುವ ನೇತಾರರು ಉತ್ತಮ ನಾಯಕತ್ವ ಗುಣಗಳನ್ನು ಹೊಂದಿರಬೇಕು. ಇದಕ್ಕೆ ಉದಾಹರಣೆಯಾಗಿ ಧೀರೂಭಾಯಿ ಅಂಬಾನಿ, ಟಾಟಾ ಮುಂತಾದವರ ಸಂಸ್ಥೆಗಳ ಅಭಿವೃದ್ಧಿಗೆ ಅವರ ನಾಯಕತ್ವ ಕಾರಣ ಎಂದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ.ಜಿ.ಡಿ. ನಾರಾಯಣ ಮಾತನಾಡಿ, ನಾಯಕತ್ವ ಗುಣ ವಂಶ ಪಾರಂಪರ್ಯವಾಗಿ ಬರುವಂತಹುದಲ್ಲ. ವಿದ್ಯಾರ್ಥಿಗಳು ಸಮುದಾಯದ ಜೊತೆ ಬೆರೆಯುವುದರ ಮೂಲಕ, ಸಮಸ್ಯೆಗಳನ್ನು ಎದುರಿಸುವುದರ ಮೂಲಕ, ಇತರ ಮುಖ್ಯ ನಾಯಕರನ್ನು ಅನುಕರಿಸುವುದರ ಮೂಲಕ ಅವುಗಳನ್ನು ರೂಢಿಸಿಕೊಳ್ಳಬೇಕಾಗಿದೆ ಎಂದರು.
ಸಹಾಯಕ ಪ್ರಾಧ್ಯಾಪಕ ನಂದನ್, ಸಮಾಜಕಾರ್ಯ ಅಧ್ಯಯನ ವಿಭಾಗದ ಸಂಯೋಜಕ ಪಾರ್ಥೇಶ ಮತ್ತು ತಬ್ರೇಜ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

