ಅರಸೀಕೆರೆಯಲ್ಲಿ ಅಂಚೆ ನಾಕರರ ಪ್ರತಿಭಟನೆ
ಅರಸೀಕೆರೆ: ಗ್ರಾಮೀಣ ಅಂಚೆ ನೌಕರರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನಾ ಮೆರವಣಿಗೆ ನಡೆಸಿ ಅಂಚೆ ಇಲಾಖೆ ಪೋಸ್ ಮಾಸ್ಟರ್ಗೆ ಮನವಿ ಸಲ್ಲಿಸಿದರು.
ಪಟ್ಟಣದ ಲಕ್ಷ್ಮೀಪುರದ ಗಣಪತಿ ದೇವಾಲಯದಿಂದ ಮಂಗಳವಾರ ಪ್ರತಿಭಟನಾ ಮೆರವಣಿಗೆ ನಡೆಸಿದ ಗ್ರಾಮೀಣ ಅಂಚೆ ನೌಕರರು ಕೇಂದ್ರ ಸರ್ಕಾರದ ಘೋಷಣೆಗಳನ್ನು ಕೂಗುತ್ತಾ ಪ್ರಧಾನ ಅಂಚೆ ಕಚೇರಿಯ ಬಳಿ ಬಂದು ಧರಣಿ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಗ್ರಾಮೀಣ ಅಂಚೆ ನೌಕರರ ಸಂಘದ ಅಧ್ಯಕ್ಷ ದಿನೇಶ್, ಪೋಸ್ಟ್ ಮ್ಯಾನ್ ಹಾಗೂ ಎಂಟಿಎಸ್ಗಳ ಶೇ. 25ರಷ್ಟು ಹುದ್ದೆಯನ್ನು ಸೇವಾ ಹಿರಿತನದ ಆಧಾರದ ಮೇಲೆ ಬಡ್ತಿ ಕೊಡುವುದು. ಹೊರಗುತ್ತಿಗೆ ಆಧಾರದ ಮೇಲೆ ಶೇ. 25ರಷ್ಟನ್ನು ತೆಗೆದುಕೊಳ್ಳುವುದನ್ನು ನಿಲ್ಲಿಸಿ ಜಿಡಿಎಸ್ ನೌಕರರನ್ನು ಸೇರಿಸಿಕೊಳ್ಳಬೇಕೆಂದು ಒತ್ತಾಯಿಸಿದರು.
ಗ್ರಾಮೀಣ ಅಂಚೆ ನೌಕರರ ಸಂಘಧ ಕಾರ್ಯದರ್ಶಿ ಹಾರನಹಳ್ಳಿ ಜಯಶಂಕರ್ ಮಾತನಾಡಿ, ಅನುಕಂಪದ ಆಧಾರದ ಮೇಲೆ ಶೇ.100ರಷ್ಟು ನೌಕರಿ ಸೌಲಭ್ಯ ನೀಡಬೇಕೆಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ರವಿ, ನಾರಾಯಣಸ್ವಾಮಿ, ಲೋಕೇಶ್, ರೇಣುಕಪ್ಪ ಇನ್ನಿತರರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

