ಹಾಸನ

ಎರಡನೇ ದಿನಕ್ಕೆ ಕಾಲಿಟ್ಟ ರೈತರ ಅಹೋರಾತ್ರಿ ಧರಣಿ

Published On :

ಅರಸೀಕೆರೆ: ನಿರಂತರ ಬರಗಾಲದಿಂದ ಕೆರೆ ಕಟ್ಟೆಗಳು ಬರಿದಾಗಿ ಅಂತರ್ಜಲ ಮಟ್ಟ ಕುಸಿದು ಜನ ಜಾನುವಾರುಗಳಿಗೆ ಹಾಹಾಕಾರ ಎದುರಾಗಿದ್ದು ಸರ್ಕಾರ ಎಚ್ಚೆತ್ತು ಯಾವುದೇ ಮೂಲದಿಂದಲಾದರೂ ಕರೆಗಳಿಗೆ ನೀರು ಒದಗಿಸಬೇಕು ಹಾಗೂ ತಮ್ಮ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ರೈತ ಸಂಘ ತಾಲ್ಲೂಕು ಘಟಕ, ಹಸಿರುಸೇನೆ ಹಾಗೂ ನಾನಾ ಪ್ರಗತಿಪರ ಸಂಘಟನೆಗಳ ವತಿಯಿಂದ ನಡೆಸುತ್ತಿರುವ ಆಹೋರಾತ್ರಿ ಧರಣಿ ಸತ್ಯಾಗ್ರಹ 2ನೇ ದಿನಕ್ಕೆ ಕಾಲಿಟ್ಟಿದೆ.
ತಮ್ಮ ಬೇಡಿಕೆಗಳು ಈಡೇರುವವರೆಗೂ ಅಥವಾ ಜಿಲ್ಲಾ ಉಸ್ತುವಾರಿ ಸಚಿವರು ಸ್ಥಳಕ್ಕೆ ಭೇಟಿ ನೀಡಿ ಲಿಖಿತ ಭರವಸೆ ನೀಡುವವರೆಗೆ ಧರಣಿ ಹಿಂತೆಗೆಯುವುದಿಲ್ಲ ಎಂದು ರೈತರು ಪಟ್ಟು ಹಿಡಿದು ಧರಣಿ ನಡೆಸುತ್ತಿದ್ದು
ಧರಣಿಯನ್ನುದ್ದೇಶಿಸಿ ಮಾತನಾಡಿದ ತಾಲ್ಲೂಕು ರೈತ ಸಂಘ ಅಧ್ಯಕ್ಷ ಮೇಳೇನಹಳ್ಳಿ ನಾಗರಾಜ್, ತೀವ್ರ ಬರಗಾಲದಿಂದ ರೈತರು ಸಂಕಷ್ಟ ಎದುರಿಸುತ್ತಿದ್ದರೂ ಜಿಲ್ಲೆಯ ಅಭಿವೃದ್ಧಿ ಹರಿಕಾರರು, ರಾಜಕೀಯ ಮತ್ಸದ್ದಿಗಳು ಎಂದು ಬೊಬ್ಬೆ ಹೊಡೆಯುವ ಮುಖಂಡರು ಮೌನ ವಹಿಸಿರುವುದೇಕೆ ಎಂದು ಪ್ರಶ್ನಿಸಿದ ಅವರು, ರೈತರ ಸಂಕಷ್ಟಕ್ಕೆ ಸ್ಪಂದಿಸಿ ಸಮಸ್ಯೆ ಬಗೆಹರಿಸುವ ಬದಲು ಮುಖಂಡರನ್ನು ಬಂಧಿಸುವ, ಜೈಲಿಗೆ ತಳ್ಳುವ ಮಾತುಗಳು ಕೇಳಿ ಬರುತ್ತಿವೆ. ಇಂತಹ ಬೆದರಿಕೆಗಳಿಗೆ ತಾವು ಬಗ್ಗುವುದಿಲ್ಲ. ತಮ್ಮ ಹೋರಾಟ ರೈತಪರ, ಜನಪರವಾಗಿದ್ದು ಬೇಡಿಕೆಗಳು ಈಡೇರುವವರೆಗೂ ಪ್ರತಿಭಟನೆ, ಧರಣಿ ಕೈಬಿಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.
ಉಸ್ತುವಾರಿ ಸಚಿವರ ವಿರುದ್ಧ ಆಕ್ರೋಶ: ಸರ್ಕಾರ ಅಧಿಕಾರಕ್ಕೆ ಬಂದು 9 ತಿಂಗಳು ಕಳೆದರೂ ಜಿಲ್ಲಾ ಉಸ್ತುವಾರಿ ಸಚಿವರು ಸೌಜನ್ಯಕ್ಕಾದರೂ ತಾಲ್ಲೂಕಿಗೆ ಭೇಟಿ ನೀಡಿ ರೈತ ಸಮುದಾಯದ ಸಮಸ್ಯೆ ಆಲಿಸುವ ಪ್ರಯತ್ನ ನಡೆಸಿಲ್ಲ. ಬದಲಾಗಿ ಸಾರ್ವಜನಿಕ ಸಮಾರಂಭಗಳಲ್ಲಿ ದೇವೇಗೌಡರು, ರೇವಣ್ಣನವರನ್ನು ಹೊಗಳುವ ಕಾರ್ಯದಲ್ಲಿ ನಿರತರಾಗಿದ್ದಾರೆ ಎಂದು ಕಿಡಿಕಾರಿದರು.
ತಹಶೀಲ್ದಾರ್ ಕೇಶವಮೂರ್ತಿ ಅವರು, ಮಂಗಳವಾರ ಬೆಳಗ್ಗೆ ಧರಣಿ ನಿರತ ರೈತ ಮುಖಂಡರನ್ನು ಭೇಟಿಯಾಗಿ ತಾಲ್ಲೂಕಿನ ರೈತರ ಸಮಸ್ಯೆ ಹಾಗೂ ಬೇಡಿಕೆಗಳ ಬಗ್ಗೆ ಈಗಾಗಲೇ ಜಿಲ್ಲಾಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದ್ದು, ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ನಡೆಸುವುದಾಗಿ ಭರವಸೆ ನೀಡಿದರೂ, ರೈತರು ಧರಣಿ ನಿಲ್ಲಿಸಲಿಲ್ಲ.
ಸ್ಥಳದಲ್ಲೇ ಬಿಸಿ ಬಿಸಿ ಭೋಜನ: ಧರಣಿ ನಡೆಸುತ್ತಿರುವ ರೈತರಿಗೆ ತಾಲ್ಲೂಕು ಕಚೇರಿ ಆವರಣದಲ್ಲಿಯೇ ಬಿಸಿ ಬಿಸಿ ಭೋಜನವನ್ನು ರೈತರೇ ತಯಾರಿಸುತ್ತಿದ್ದು ಅಲ್ಲಿಗೆ ಹೋದವರನ್ನು ರೈತರು ಊಟಕ್ಕೆ ಕರೆಯುತ್ತಿದ್ದ ದೃಶ್ಯ ಸಮಾನ್ಯವಾಗಿತ್ತು.
ಜವನಹಳ್ಳಿ ನಿಂಗಪ್ಪ, ಅಣ್ಣಾಯಕನಹಳ್ಳಿ ಶಿವಮೂರ್ತಿ, ರವೀಶ್ ಬಾಬು, ಬಿ.ಬಿ. ಶಿವಕುಮಾರ್, ಗಂಗಾಧರ್, ಶಿವಲಿಂಗಪ್ಪ, ಕುಮಾರ್, ಮಂಜುನಾಥ್, ಸಿದ್ದೇಶ್ ಹಾಗೂ ಇನ್ನಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.