ಹಾಸನ

ಬೋನಿಗೆ ಬಿತ್ತು ಬಾಲಕನ ಬಲಿ ಪಡೆದಿದ್ದ ಚಿರತೆ

Published On :

ಹಾಸನ: ಬಾಲಕನನ್ನು ತಿಂದು ಹಾಕಿದ್ದ ನರಭಕ್ಷಕ ಹೆಣ್ಣು ಚಿರತೆ ಕೊನೆಗೆ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಮಂಗಳವಾರ ಬಿದ್ದಿದೆ.  ಚಿರತೆ ಸೆರೆಗೆ ಕಲ್ಲುಗುಡಗನಹಳ್ಳಿಯಲ್ಲಿ ಬೋನ್ ಇಡಲಾಗಿತ್ತು. ಮಂಗಳವಾರ ಸೆರೆ ಸಿಕ್ಕಿರುವ ಈ ಚಿರತೆ ಕೆಲವು ದಿನಗಳ ಹಿಂದೆ ತಾಲೂಕಿನ ನಾಗನಹಳ್ಳಿಯಲ್ಲಿ ತೇಜಸ್ ಎಂಬ ಬಾಲಕನನ್ನು ಹೊತ್ತೊಯ್ದು ತಿಂದು ಹಾಕಿತ್ತು. ಹೀಗಾಗಿ ಈ ಚಿರತೆಯಿಂದ ಸುತ್ತಮುತ್ತಲಿನ ಗ್ರಾಮಗಳಲ್ಲಿ ಆತಂಕದ ಸ್ಥಿತಿ ನಿರ್ಮಾಣವಾಗಿತ್ತು. ವಿಶೇಷ ಎಂದರೆ, ಮರಿ ಚಿರತೆಯೊಂದು ಕಳೆದ ವಾರ ಬೋನಿಗೆ ಬಿದ್ದ ಸಂದರ್ಭದಲ್ಲಿ ಈ ಹೆಣ್ಣು ಚಿರತೆ ಬೋನಿನ ಬತ್ತಿರ ಬಂದು ಹೋಗಿತ್ತು. ಆದರೆ, ಬೋನಿಗೆ ಸೆರೆ ಸಿಕ್ಕಿರಲಿಲ್ಲ. ಜೊತೆಗೆ ಬೋನಿನ ಹತ್ತಿರ ಯಾರು ಸುಳಿಯದಂತೆ ಪ್ರತಿರೋಧ ವ್ಯಕ್ತಪಡಿಸಿತ್ತು. ಈಗ ಕೊನೆಗೂ ಸೆರೆ ಸಿಕ್ಕಿದೆ. ಈ ಚಿರತೆ ಸೆರೆ ಸಿಕ್ಕುವ ಮೂಲಕ ಇದು ನಾಲ್ಕನೇ ಚಿರತೆಯಾಗಿದ್ದು, ಈ ಭಾಗದಲ್ಲಿ ಮತ್ತಷ್ಟು ಚಿರತೆಗಳು ಇವೆ ಎಂದು ಸ್ಥಳೀಯ ಗ್ರಾಮಸ್ಥರು ತಿಳಿಸಿದ್ದಾರೆ.
ವಾಗ್ವಾದ: ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಹೆಣ್ಣು ಚಿರತೆ ಬಿದ್ದಿದ್ದು, ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಅರಣ್ಯಾಧಿಕಾರಿಗಳಿಗೆ ಚಿರತೆಯನ್ನು ಸಾಗಿಸಲು ಬಿಡದೆ ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು, ಈ ಭಾಗದಲ್ಲಿ ಇರುವ ಎಲ್ಲಾ ಚಿರತೆಗಳನ್ನು ಸೆರೆ ಹಿಡಿಯುವವರೆಗೂ ನಾವು ಇಲ್ಲಿಂದ ಈ ಚಿರತೆಯನ್ನು ಸಾಗಿಸಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದರು. ಇದರಿಂದ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಗ್ರಾಮಸ್ಥರು ನಡುವೆ ಕೆಲವು ಸಮಯ ವಾಗ್ವಾದ ನಡೆಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.