ಹೊಸ ಕಾಯ್ದೆ ವಿರೋಧಿಸಿ ಎಬಿವಿಪಿ ಪ್ರತಿಭಟನೆ
ರಾಜ್ಯ ಸರ್ಕಾರ ಹೊಸ ಕಾಯ್ದೆಯನ್ನು ತಂದು ವಿದ್ಯಾರ್ಥಿಗಳನ್ನು ಶುಲ್ಕ ವಿನಾಯಿತಿಯಿಂದ ದೂರವಿಡುವ ಪ್ರಯತ್ನವನ್ನು ಮಾಡುತ್ತಿದೆ. ಸರ್ಕಾರದ ಬಿಸಿಎಂ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ ಶುಲ್ಕ ವಿನಾಯಿತಿ ರದ್ದಾಗಲಿದ್ದು, ವಿದ್ಯಾರ್ಥಿಗಳು ಪೂರ್ಣ ಶುಲ್ಕವನ್ನು ಪಾವತಿಸುವ ಪರಿಸ್ಥಿತಿ ಉಂಟಾಗಲಿದೆ. ಈ ಆದೇಶದಂತೆ ವಿದ್ಯಾರ್ಥಿಗಳು ಪಾವತಿಸಿದ ಹೆಚ್ಚುವರಿ ಶುಲ್ಕವನ್ನು ನಗದು ವರ್ಗಾವಣೆ ಸೌಲಭ್ಯದಡಿ ಸರ್ಕಾರವು ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ವರ್ಗಾಯಿಸಲಿದೆ.
ಸರ್ಕಾರ ಜಾರಿಗೊಳಿಸಲು ಉದ್ದೇಶಿಸಿರುವ ಈ ಕಾಯ್ದೆ, ರಾಜ್ಯದ ಬಡ, ಗ್ರಾಮೀಣ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ಮೇಲೆ ನೇರವಾಗಿ ದುಷ್ಪರಿಣಾಮ ಬೀರಲಿದೆ. ಆದ ಕಾರಣ, ಈ ವಿದ್ಯಾರ್ಥಿಗಳು ಸರ್ಕಾರಿ ಮತ್ತು ಅನಾನುಕೂಲತೆಯಿಂದ ಕೂಡಿರುವ ಕಾಲೇಜುಗಳಲ್ಲಿಯೇ ಪ್ರವೇಶ ಪಡೆದಿದ್ದಾರೆ. ಈ ಕಾಲೇಜಗಳಲ್ಲಿ ತರಗತಿಗಳು ನಿಯಮಿತವಾಗಿ ನಡೆಯುತ್ತಿಲ್ಲ. ಅಲ್ಲದೇ, ಉಪನ್ಯಾಸಕರ ಕೊರತೆ, ಲ್ಯಾಬ್, ಪ್ರಾಯೋಗಿಕ ಉಪಕರಣಗಳ ಕೊರತೆ ಹೀಗೆ ಮೂಲಭೂತ ಸೌಲಭ್ಯಗಳ ಕೊರತೆಗಳ ಮಧ್ಯದಲ್ಲಿ ಕೂಡ ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಾರೆ. ಹಾಗಾಗಿ ಸರ್ಕಾರ ಮೊದಲು ಸರ್ಕಾರಿ ಕಾಲೇಜುಗಳು ಹಾಗೂ ಅನಾನುಕೂಲತೆಯಿಂದ ಕೂಡಿರುವ ಕಾಲೇಜುಗಳಿಗೆ ಮೂಲಭೂತ ಸೌಲಭ್ಯಗಳನ್ನು ನೀಡಿ ಕಾಲೇಜುಗಳ ಗುಣಮಟ್ಟವನ್ನು ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.
ಶುಲ್ಕ ವಿನಾಯಿತಿಯನ್ನು ಅಪೇಕ್ಷಿಸುವ ವಿದ್ಯಾರ್ಥಿಗಳು ಬಹುತೇಕವಾಗಿ ಹಾಸ್ಟೆಲ್ಗಳಲ್ಲಿ ಇದ್ದು ವ್ಯಾಸಂಗ ಮಾಡುತ್ತಿದ್ದಾರೆ. ಆದರೆ ಸರ್ಕಾರಿ ಹಾಸ್ಟೆಲ್ಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳು ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಜೊತೆಗೆ ಕಾಲೇಜುಗಳಲ್ಲಿ ಶುಲ್ಕ ವಿನಾಯಿತಿಯ ನಿರಾಕರಣೆ, ಇದು ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಮಾರಕವಾಗಿ ಪರಿಣಮಿಸಿದೆ ಎಂದು ದೂರಿದರು.
ವಿದ್ಯಾರ್ಥಿಗಳ ಪಾಲಿಗೆ ಮಾರಕವಾಗಿರುವ ಕಾಯ್ದೆಯನ್ನು, ಸರ್ಕಾರ ಕೂಡಲೇ ರದ್ದುಪಡಿಸಬೇಕು ಎಂದು ಒತ್ತಾಯಿಸಿದರು. ಎಬಿವಿಪಿ ನಗರ ಕಾರ್ಯದರ್ಶಿ ಲಕ್ಷ್ಮೀ ಕೇಶವ್, ನರೇಶ್, ಅಭಿಷೇಕ್, ಲಕ್ಷ್ಮಿ, ನೇತ್ರ, ರೂಪ, ಭಾರತಿ, ಮಂಜುಳ, ಕವಿತಾ, ಸರಳ, ಮಮತ, ಸ್ವಪ್ನ, ಉಷಾ, ಪ್ರಿಯ, ಭಾಗ್ಯ, ಸುಮ, ಲೋಕೇಶ್ವರಿ, ವಸಂತಕುಮಾರಿ, ಮೋಹಿನಿ, ಸಂದ್ಯಾ ಹಾಗೂ ಇತರರು ಇದ್ದರು.
ಎಸ್ಎಫ್ಐ ಪ್ರತಿಭಟನೆ
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿದ್ಯಾರ್ಥಿಗಳು ಅವರ ಬೇಡಿಕೆಗೆ ಅನುಗುಣವಾಗಿ ಪ್ರತಿಭಟನೆ ಮಾಡುವಂತಹದ್ದು ಮೂಲಭೂತ ಹಕ್ಕಾಗಿದೆ. ಆದರೆ, ಇತ್ತೀಚೆಗೆ ರಾಜ್ಯಸರ್ಕಾರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹೊರಡಿಸಿರುವ ಸುತ್ತೋಲೆಯನ್ನು ಗಮನಿಸಿದಾಗ ಯಾವುದೇ ಪ್ರತಿಭಟನೆಯಲ್ಲಿ ಭಾಗವಹಿಸುವಂಥ ವಿದ್ಯಾರ್ಥಿಗಳಿಗೆ ಸರ್ಕಾರದ ಸೌಲಭ್ಯಗಳಾದ ವಿದ್ಯಾರ್ಥಿ ವೇತನ, ಹಾಸ್ಟೆಲ್ ಸೌಲಭ್ಯವನ್ನು ಕಡಿತಗೊಳಿಸಬಹುದು ಎಂದು ಹೇಳಿರುವುದು ವಿದ್ಯಾರ್ಥಿ ವಿರೋಧ ನೀತಿಯಲ್ಲದೆ ಸಂವಿಧಾನದ ಬದ್ಧ ಹಕ್ಕು ಚ್ಯುತಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಹುತೇಕ ಹಾಸ್ಟೆಲ್ಗಳಲ್ಲಿ ಮೂಲಭೂತ ಸೌಲಭ್ಯಗಳಿಲ್ಲದೆ ವಿದ್ಯಾರ್ಥಿಗಳು ವಂಚಿತವಾಗಿದ್ದು, ಸರ್ಕಾರ ಇಂತಹ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕಾರ್ಯಾ ಯೋಜನೆಯನ್ನು ಮಾಡದೆ ಕಾರ್ಮಿಕ ವಿರೋಧಿ ಎಸ್ಮಾ ಕಾಯ್ದೆಗೆ ಅನುಗುಣವಾಗಿ ವಿದ್ಯಾರ್ಥಿಗಳು ಪ್ರಶ್ನೆ ಮಾಡಬಾರದು ಎಂದು ಸುತ್ತೋಲೆಗಳನ್ನು ಕಳುಹಿಸುವ ಮೂಲಕ ಬಂಧಿಸುವ ಕೆಲಸ ಮಾಡುತ್ತೇವೆ ಎಂದು ಸರ್ಕಾರ, ಸರ್ವಾಧಿಕಾರಿ ಧೋರಣೆ ಮಾಡುತ್ತಿದೆ ಎಂದು ಆರೋಪಿಸಿದರು. ಆದ್ದರಿಂದ ರಾಜ್ಯ ಸರ್ಕಾರ ಕೂಡಲೇ ಇಂತಹ ಶಿಕ್ಷಣ ವಿರೋಧಿ, ಸಂವಿಧಾನ ವಿರೋಧಿ ಸುತ್ತೋಲೆಯನ್ನು ವಾಪಸ್ ತೆಗೆದುಕೊಳ್ಳಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಈ ವಿರುದ್ಧ ಹೋರಾಟವನ್ನು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಎಸ್ಎಫ್ಐ ಜಿಲ್ಲಾಧ್ಯಕ್ಷ ಎಚ್.ಇ. ಅನ್ಷಾದ್, ಕಾರ್ಯದರ್ಶಿ ಪ್ರದೀಪ್ ಕುಮಾರ್, ಸಂಚಾಲಕಿ ಎನ್.ಡಿ. ಧನಲಕ್ಷ್ಮಿ, ಸುಮ, ಲಕ್ಷ್ಮೀ, ತಲಾ, ಕುಸುಮ, ಸೌಮ್ಯ, ರೂಪ, ಲಾವಣ್ಯ, ಕಾವ್ಯ, ಸಂಗೀತ, ಸಹನ, ಸಂಧ್ಯಾ, ಶೃತಿ, ಪೂರ್ಣಿಮಾ, ಚಂಪಾ, ಶ್ರಾವ್ಯ, ಮನು ಹಾಗೂ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

