ಹಾಸನ

ಇಂದು ರಾಷ್ಟ್ರೀಯ ಭಾವೈಕ್ಯತಾ ಶಿಬಿರ

Published On :

ಹೊಳೆನರಸೀಪುರ: ರಾಜ್ಯ ಸರ್ಕಾರ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ತಾಲೂಕಿನ ಪಡುವಲಹಿಪ್ಪೆ ಗ್ರಾಮದಲ್ಲಿನ ಎಚ್.ಡಿ.ದೇವೇಗೌಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಫೆ. 21ರಿಂದ ಫೆ. 27ರವರೆಗೆ ಇದೇ ಮೊದಲ ಬಾರಿಗೆ ರಾಷ್ಟ್ರೀಯ ಭಾವೈಕ್ಯತಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ.ಜಿ.ಡಿ. ನಾರಾಯಣ ತಿಳಿಸಿದ್ದಾರೆ.
 ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ ಅವರು, ಜಿಲ್ಲೆಯಲ್ಲಿ ಎರಡನೇ ಬಾರಿಗೆ ಮತ್ತು ತಾಲೂಕಿನಲ್ಲಿಯೇ ಪ್ರಪ್ರಥಮ ಬಾರಿಗೆ ರಾಷ್ಟ್ರಮಟ್ಟದ ರಾಷ್ಟ್ರೀಯ ಭಾವೈಕ್ಯತಾ ಶಿಭಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
 ಏಳು ದಿನ ನಡೆಯಲಿರುವ ರಾಷ್ಟ್ರೀಯ  ಶಿಬಿರದಲ್ಲಿ ಕರ್ನಾಟಕವೂ ಸೇರಿದಂತೆ ಉತ್ತರಪ್ರದೇಶ, ಆಂಧ್ರಪ್ರದೇಶ, ಬಿಹಾರ, ತಮಿಳುನಾಡು, ಮಹಾರಾಷ್ಟ್ರ ರಾಜ್ಯಗಳ 150 ವಿದ್ಯಾರ್ಥಿಗಳು ಹಾಗೂ 20 ಆಯಾ ರಾಜ್ಯದ ಕಾಲೇಜುಗಳ ಎನ್.ಎಸ್.ಎಸ್ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಹೇಳಿದರು.
 22ರಂದು ಶಿಬಿರವನ್ನು ಶಾಸಕ ಎಚ್.ಡಿ. ರೇವಣ್ಣ ಉದ್ಘಾಟಿಸುವರು. 26ರಂದು ಸಮಾರೋಪ ಸಮಾರಂಭ ನಡೆಯಲಿದ್ದು, ಅಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡುವರು ಎಂದು  ನಾರಾಯಣ ತಿಳಿಸಿದರು.
 ಕಾಲೇಜಿನ ಎನ್.ಎಸ್.ಎಸ್. ಅಧಿಕಾರಿ ಹಾಗೂ ಶಿಬಿರದ ಸಂಯೋಜನಾಧಿಕಾರಿ ಕೆ.ವಿ. ಪಾರ್ಥೇಶ್, ಸಹ ಶಿಬಿರಾಧಿಕಾರಿ ಡಿ.ಎಂ. ಮಂಜುನಾಥ್, ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಜಿ.ಪಿ. ಯೋಗೇಶ್ ಇದ್ದರು.
ಜಿಎಸ್ಎಸ್ಗೆ ನುಡಿನಮನ
ಸಕಲೇಶಪುರ: ಕವಿಗಳ ವಿಚಾರಧಾರೆಯನ್ನು ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಳ್ಳದಿದ್ದರೆ ಮಾನವೀಯತೆಯ ಕೊರತೆ ಎದುರಿಸಬೇಕಾಗುತ್ತದೆ ಎಂದು ಪ್ರಾಂಶುಪಾಲ ಕೆ. ವೇಣುಗೋಪಾಲ್ ಹೇಳಿದರು.
 ಕನ್ನಡ ಸಾಹಿತ್ಯ ಪರಿಷತ್ ಹಾಗೂ ಜೆಎಸ್ಎಸ್ ಬಿಎಡ್ ಕಾಲೇಜಿನ ಆಶ್ರಯದಲ್ಲಿ ಕೌಡಳ್ಳಿ ಗ್ರಾಮದ ಕಾಲೇಜಿನಲ್ಲಿ ನಡೆದ ರಾಷ್ಟ್ರಕವಿ ಡಾ. ಜಿ.ಎಸ್. ಶಿವರುದ್ರಪ್ಪ ನುಡಿ ನಮನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕವಿಗಳಿಗೆ ಸಾವಿಲ್ಲ, ವಿದ್ಯಾರ್ಥಿಗಳು ಪಠ್ಯ ಪುಸ್ತಕಗಳ ಜತೆಗೆ ನಾಡಿನ ಸಾಹಿತಿಗಳ ವಿಚಾರ ತಿಳಿದು ಅದನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಸಾರ್ಥಕ ಬದುಕು ಸಾಧ್ಯ ಎಂದರು.
 ಪ್ರಾಂಶುಪಾಲ ಸುರೇಶ್ ಮಾತನಾಡಿ, ಜಿಎಸ್ಎಸ್ ಹೆಣ್ಣಿನ ಬಗ್ಗೆ ಅಪಾರ ಗೌರವ ಹೊಂದಿದ್ದರು ಎಂದು ಹೇಳಿದರು. ತಾಲೂಕು ಕಸಾಪ ಅಧ್ಯಕ್ಷ ಎಸ್.ಎಂ. ಮಂಜುನಾಥ್ ಮಾತನಾಡಿ, ಜಿಎಸ್ಎಸ್ ಎಂದೂ ಮಾಸದ  ಚೇತನ ಎಂದು ಹೇಳಿದರು.
 ತಾಲೂಕು ಕಸಾಪ ಕಾರ್ಯದರ್ಶಿ ಪ್ರಸನ್ನಕುಮಾರ್, ರೋಟರಿ ಶಾಲೆಯ ಸುರೇಶ್, ಪ್ರಾಂಶುಪಾಲ ಸತೀಶ್ ಕಾಳೆಗೌಡ ಉಪನ್ಯಾಸಕ ವೀರಯ್ಯ ಮೀನಾಕ್ಷಿ, ಖಾದರ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.