ಹಾಸನ

ಬಜೆಟ್ ಪೂರ್ವಭಾವಿ ಸಭೆ 5 ನಿಮಿಷದಲ್ಲಿ ಮುಕ್ತಾಯ

Published On :

ಸಕಲೇಶಪುರ: ಪುರಸಭೆಯ ಬಜೆಟ್ ಪೂರ್ವಭಾವಿ ಸಭೆ ಯಾವುದೇ ಚರ್ಚೆಯಿಲ್ಲದೆ ಕೇವಲ 5 ನಿಮಿಷದಲ್ಲಿ ಮುಕ್ತಾಯಗೊಂಡಿತು. ಪುರಸಭೆ ಕಚೇರಿಯಲ್ಲಿ  ನಡೆದ ಸಭೆಯಲ್ಲಿ ಬಹುತೇಕ ಸದಸ್ಯರ ಗೈರು ಹಾಜರಿಯಾಗಿದ್ದು, ಯಾವುದೇ ಚರ್ಚೆಯಾಗದೆ ಮುಕ್ತಾಯಗೊಂಡಿತು. ಸಭೆಗೆ ಸಾರ್ವಜನಿಕರನ್ನು ಆಹ್ವಾನಿಸಲಾಗಿತ್ತಾದರೂ ಯಾರೂ  ಭಾಗವಹಿಸಿರಲಿಲ್ಲ.     ಜೆಡಿಎಸ್ನ 12 ಸದಸ್ಯರು ಗೈರು ಹಾಜರಾಗುವ ಮೂಲಕ ಅಧ್ಯಕ್ಷರ ವಿರುದ್ಧ ತಮ್ಮ ಅಸಮಾಧಾನ ಹೊರ ಹಾಕಿದರು. 11.55 ಕ್ಕೆ ಆರಂಭವಾದ ಸಭೆ ಕೇವಲ 5 ನಿಮಿಷದಲ್ಲಿ ಮುಕ್ತಾಯವಾಯಿತು. ಈ ತಿಂಗಳ 24 ರಂದು ಬಜೆಟ್ ಮಂಡಿಸಲಾಗುವುದು ಎಂದು ಪುರಸಭಾ ಅಧ್ಯಕ್ಷ ಎಸ್.ಎನ್. ಸತೀಶ್ ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.