ಹಾಸನ

ಕಳವು ಆರೋಪಿ ಸೆರೆ - ರು. 3 ಲಕ್ಷದ ಚಿನ್ನಾಭರಣ ವಶ

Published On :

ಅರಸೀಕೆರೆ: ಪಟ್ಟಣದ ನಾನಾ ಕಡೆ ಕಳ್ಳತನ ನಡೆಸಿದ್ದ ಆರೋಪಿಯನ್ನು ಬಂಧಿಸಿ ಆತನಿಂದ ಸುಮಾರು 3 ಲಕ್ಷ  ರು. ಮೌಲ್ಯದ 109 ಗ್ರಾಂ ಚಿನ್ನ, 10 ಸಾವಿರ ಮೌಲ್ಯದ 200 ಗ್ರಾಂ ಬೆಳ್ಳಿ ಒಡವೆಗಳನ್ನು ವಶಪಡಿಸಿಕೊಳ್ಳುವಲ್ಲಿ ಪಟ್ಟಣದ ಪೊಲೀಸರು ಯಶಸ್ವಿಯಾಗಿದ್ದಾರೆ. ಹುಬ್ಬಳ್ಳಿ ನಿವಾಸಿ ರಾಜುಗಡಿಯಪ್ಪ(25) ಬಂಧಿತ ಆರೋಪಿ.
ಪಟ್ಟಣದ ಪೇಟೆ ಬೀದಿಯಲ್ಲಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದಾಗ ಅನುಮಾನಗೊಂಡ ಪೊಲೀಸರು ಆತನನ್ನು ವಿಚಾರಣೆಗೊಳಪಡಿಸಿದಾಗ ಆತ ಹಲವು ಪ್ರಕರಣಗಳಲ್ಲಿ ಭಾಗಿಯಾಗಿರುವುದು ತಿಳಿದುಬಂತು. ಈತನ  ಮೇಲೆ ಈಗಾಗಲೇ 5 ಪ್ರಕರಣಗಳು ದಾಖಲಿಸಲಾಗಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಲಯ ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಡಿವೈಎಸ್ಪಿ ಐ.ಜಿ.ಮಂಜುನಾಥ್ ಮಾರ್ಗದರ್ಶನದಲ್ಲಿ ನಗರ ಠಾಣೆಯ ವೃತ್ತ ನಿರೀಕ್ಷಕ ಬಿ.ಎಸ್.ನಂದಕುಮಾರ್, ಪಿಎಸ್ಐ ಅಯ್ಯನ್ಗೌಡ, ಲೋಕೇಶ್, ಎಎಸ್ಐ ಚಂದ್ರಶೇಖರ್, ಭೀಮನಾಯ್ಕ್ ಹಾಗೂ ಸಿಬ್ಬಂದಿ ನಂಜುಂಡೇಗೌಡ, ರವಿ, ತ್ರಿಮೂರ್ತಿ, ಹೀರಾಸಿಂಗ್, ಜಗನ್ನಾಥ್, ಶಿವಕುಮಾರ್ನಾಯ್ಕ್  ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಕ್ಕೆ ಸಾರ್ವಜನಿಕರು ಪ್ರಶಂಸಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.