ಹಾಸನ

'ಕನ್ನಡ ಭಾಷೆ ವಿಶ್ವದಲ್ಲೇ ಶ್ರೀಮಂತ'

Published On :

ಹಾಸನ: ಕನ್ನಡ ಭಾಷೆ ಇಡೀ ವಿಶ್ವದಲ್ಲೇ ಅತ್ಯಂತ ಶ್ರೀಮಂತ ಹಾಗೂ ಸಮೃದ್ಧಿಯಾದ ಭಾಷೆ ಎಂದು ಪ್ರಾಧ್ಯಾಪಕ ಪ್ರೊ. ಕೃಷ್ಣೇಗೌಡ ನುಡಿದರು.
ತಾಲೂಕಿನ ಗೊರೂರಿನಲ್ಲಿ ಹಾಸನ ತಾಲೂಕು ಸಾಹಿತ್ಯ ಪರಿಷತ್ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನದ  ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ವಿಶ್ವದ ಐದು ತಾರ್ಕಿಕ ಭಾಷೆಗಳಲ್ಲಿ ಕನ್ನಡ ಭಾಷೆ ಕೂಡ ಒಂದಾಗಿದೆ. ಅಸಾಧಾರಣ ಭಾಷೆಯಾದ ಕನ್ನಡ ಭಾಷೆಯನ್ನು ಸಾಮಾನ್ಯ ಭಾಷೆಯನ್ನಾಗಿ ಇಂದು ನಾವು ನಡೆಸಿಕೊಳ್ಳುತ್ತಿದ್ದೇವೆ.
 ಅನಕ್ಷರಸ್ಥರು ಕನ್ನಡ ಭಾಷೆಯನ್ನು ಬಳಸುವಷ್ಟು ಸುಲಭವಾಗಿ ವಿದ್ಯಾವಂತರು ಬಳಸುವಲ್ಲಿ ವಿಫಲವಾಗಿದ್ದೇವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ವಿಷಾದ: ಗ್ರಾಮೀಣ ಪ್ರದೇಶದ ಜನರು ತಮ್ಮ ಕೆಲಸಕ್ಕೆ ಅನುಗುಣವಾಗಿ ಭಾಷೆಗಳನ್ನು ಬಳಸುತ್ತಾರೆ ಅವರಿಂದಲೇ ಸಾವಿರಾರು ಹೊಸ ಕನ್ನಡ ಭಾಷೆಗಳು ಹುಟ್ಟಿಕೊಳ್ಳುತ್ತಿದೆ. ಮನುಷ್ಯನ ತನ್ನ ಭಾವನೆಗಳನ್ನು ಅಭಿವ್ಯಕ್ತಿಗೊಳಿಸಲು ಕನ್ನಡ ಭಾಷೆ ಅತ್ಯಂತ ಸೂಕ್ತವಾಗಿದೆ. ಇಷ್ಟೇಲ್ಲಾ ಐತಿಹಾಸಿಕ ಹಿನ್ನೆಲೆಯನ್ನು ಹೊಂದಿರುವ ಕನ್ನಡ ಭಾಷೆಯನ್ನು ಪ್ರೀತಿಸಲು ನಮಗೆ ಸಾಧ್ಯವಾಗುತ್ತಿಲ್ಲ ಎಂದು ವಿಷಾದಿಸಿದರು.
ಕನ್ನಡ ಸಾಹಿತ್ಯ ಲೋಕದಲ್ಲಿ ಅನೇಕ ದಿಗ್ಗಜರು ಕೆಲಸ ಮಾಡಿದ್ದಾರೆ. ಅವರು  ಹಾಕಿಕೊಟ್ಟ ಮಾರ್ಗದಲ್ಲಿ ನಾವು ನಡೆಯಬೇಕಾಗಿದೆ. ಯುವಕರು ಸಾಹಿತ್ಯದಲ್ಲಿ ಆಸಕ್ತಿ ತೊರಬೇಕಾದ ಅವಶ್ಯಕತೆ ಇದೆ ಹಾಗಾಗಿ ನಮ್ಮ ಸಾಹಿತ್ಯ ಉಳಿಸಿ ಬೆಳಸಬೇಕಾಗಿದೆ ಎಂದು ನುಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.