ಅತಿ ಹೆಚ್ಚು ರಸಗೊಬ್ಬರ ಮಾರಾಟ: ಇಫ್ಕೋ ಸಾಧನೆ
ಹಾಸನ: ರೈತರಿಗೆ ಅನುಕೂಲವಾಗುವಂತೆ ವ್ಯವಸಾಯೋತ್ಪನ್ನಗಳಿಗೆ ರಸಗೊಬ್ಬರಗಳನ್ನು ಅತಿ ಹೆಚ್ಚು ಪ್ರಮಾಣದಲ್ಲಿ ಮಾರಾಟ ಮಾಡಿ ರಾಷ್ಟ್ರದಲ್ಲಿಯೇ ದೊಡ್ಡ ಸಂಸ್ಥೆಯಾಗಿ ಇಫ್ಕೋ ಕೆಲಸ ನಿರ್ವಹಿಸುತ್ತಿದೆ ಎಂದು ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕ ಆರ್.ಟಿ. ದ್ಯಾವೇಗೌಡ ತಿಳಿಸಿದ್ದಾರೆ.
ಚನ್ನರಾಯಪಟ್ಟಣ ಮತ್ತು ಅರಸೀಕೆರೆ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಿಗೆ ಇತ್ತೀಚೆಗೆ ಏರ್ಪಡಿಸಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ಇಫ್ಕೋ ಸಂಸ್ಥೆಯ ಹಿರಿಯ ಕ್ಷೇತ್ರೀಯ ವ್ಯವಸ್ಥಾಪಕ ಹೆಚ್.ಕೆ. ರಮಾನಂದ ಮಾತನಾಡಿ, ಇಫ್ಕೋ- ಇಂಡಿಯನ್ ಫಾರ್ಮರ್ಸ್ ಫರ್ಟಿಲೈಸರ್ಸ್ ಸಂಸ್ಥೆಯು ಸಾಧನೆ ಭಾರತದ ಸಹಕಾರಿ ರಂಗದಲ್ಲಿ ಅದ್ವಿತೀಯವಾಗಿದೆ. 1967ರಲ್ಲಿ ಕೇವಲ 57 ಸಹಕಾರ ಸಂಘಗಳ ಸದಸ್ಯತ್ವದಿಂದ 6 ಲಕ್ಷ ರು. ಷೇರು ಬಂಡವಾಳದೊಂದಿಗೆ ಪ್ರಾರಂಭಗೊಂಡ ಸಂಸ್ಥೆ ಈಗ 39,862 ಸಹಕಾರ ಸಂಘಗಳ ಸದಸ್ಯತ್ವದಿಂದ 426 ಕೋಟಿ ರು. ಷೇರು ಬಂಡವಾಳ ಹೊಂದಿದೆ ಎಂದರು. ಸಮತೋಲನ ಗೊಬ್ಬರ ಬಳಕೆ, ಬೆಳೆ ವಿಚಾರಗೋಷ್ಠಿಗಳು, ಮಣ್ಣಿನ ಆರೋಗ್ಯ ಮತ್ತು ಬೆಳೆಯ ಉತ್ಪಾದನೆಗಾಗಿ ರಸಗೊಬ್ಬರಗಳ ಬಳಕೆಗಳನ್ನು ತಿಳಿಸಿದರು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

